More

    ಪದವೀಧರ ಶಿಕ್ಷಕರ ಅಂತಿಮ ಆಯ್ಕೆ ಪಟ್ಟಿ ಪ್ರಕಟ: 13,352 ಅಭ್ಯರ್ಥಿಗಳು ಆಯ್ಕೆ; ನೂತನ ಶಿಕ್ಷಕರಿಗೆ ಯಾವಾಗ ನೇಮಕಾತಿ?

    ಬೆಂಗಳೂರು: 15 ಸಾವಿರ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ (6-8ನೇ ತರಗತಿ) ನೇಮಕಾತಿ ಸಂಬಂಧ ಅಂತಿಮ ಆಯ್ಕೆ ಪಟ್ಟಿಯನ್ನು ಶಿಕ್ಷಣ ಇಲಾಖೆ ಪ್ರಕಟಿಸಿದ್ದು, 13,352 ಅಭ್ಯರ್ಥಿಗಳು ಅಂತಿಮವಾಗಿ ಆಯ್ಕೆಯಾಗಿದ್ದಾರೆ.

    ಅಂತಿಮ ಪಟ್ಟಿಯಲ್ಲಿ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಜೂನ್ ಮೊದಲ ವಾರದಲ್ಲಿ ನೇಮಕಾತಿ ಪತ್ರ ನೀಡಲಾಗುತ್ತದೆ. ಮುಂದಿನ ಶೈಕ್ಷಣಿಕ ವರ್ಷದ (2023-24) ಆರಂಭದ ವೇಳೆಗೆ ಕರ್ತವ್ಯಕ್ಕೆ ನಿಯೋಜಿಸಲು ಕ್ರಮ ವಹಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಬಿ.ಸಿ. ನಾಗೇಶ್ ತಿಳಿಸಿದರು.

    ಇದನ್ನೂ ಓದಿ: ಒಂದೇ ಮನೆಯ ನಾಲ್ವರನ್ನು ಕೊಂದಿದ್ದ ಅಪ್ಪ-ಮಗನ ಬಂಧನ

    ವಿಧಾನಸೌಧದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೈಕೋರ್ಟ್ ಆದೇಶದಂತೆ ತಂದೆಯ ಆದಾಯ ಪ್ರಮಾಣಪತ್ರ ಸಲ್ಲಿಸಿದ್ದ ಮಹಿಳಾ ಅಭ್ಯರ್ಥಿಗಳನ್ನೂ ಪರಿಗಣಿಸಿ ಫೆ.27ರಂದು ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಿ ಆಕ್ಷೇಪಣೆಗಳನ್ನು ಆಹ್ವಾನಿಸಿತ್ತು. ನಂತರ ಬಂದ ಆಕ್ಷೇಪಣೆಗಳನ್ನು ಪರಿಶೀಲಿಸಿ ಅಂತಿಮವಾಗಿ 13,352 ಮಂದಿಯ ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಲಾಗಿದೆ ಎಂದರು.

    ಇದನ್ನೂ ಓದಿ: ಇದೋ ಬಂದಿದೆ ಕಿಸ್ಸಿಂಗ್ ಡಿವೈಸ್; ಚುಂಬಿಸುವ ಇಬ್ಬರು ಎಷ್ಟೇ ದೂರದಲ್ಲಿದ್ದರೂ ಸಿಗುವುದು ನೈಜ ಮುತ್ತಿನ ಗಮ್ಮತ್ತು!

    ಆಯ್ಕೆಯಾದ ಅಭ್ಯರ್ಥಿಗಳ ಎಲ್ಲ ಮೂಲ ದಾಖಲೆಗಳ ಪರಿಶೀಲನೆ ಸೇರಿ ಇನ್ನಿತರೆ ಪ್ರಕ್ರಿಯೆಗಳನ್ನೂ ಆದಷ್ಟು ಬೇಗ ಪೂರ್ಣಗೊಳಿಸಿ ಮೇ-ಜೂನ್‌ನಿಂದ ಆರಂಭವಾಗುವ ಮುಂದಿನ ಶೈಕ್ಷಣಿಕ ಸಾಲಿನ ವೇಳೆಗೆ ಶಾಲೆಗಳಿಗೆ ಕರ್ತವ್ಯಕ್ಕೆ ನಿಯೋಜಿಸಲು ಕ್ರಮ ವಹಿಸಲಾಗುವುದು ಎಂದರು.

    ಇದನ್ನೂ ಓದಿ: ಕುಸಿದು ಬಿದ್ದು ಸಾವಿಗೀಡಾದ ಕ್ರಿಕೆಟಿಗ; ಫಲಿಸಲಿಲ್ಲ ಜೀವ ಉಳಿಸಿಕೊಳ್ಳುವ ಪ್ರಯತ್ನ

    ಪದವೀಧರ ಶಿಕ್ಷಕರ ನೇಮಕಾತಿಗೆ ಪರೀಕ್ಷೆ ನಡೆಸಿದ್ದ ಇಲಾಖೆಯು ಬಳಿಕ ವಿವಿಧ ಹಂತದ ಪ್ರಕ್ರಿಯೆ ಮುಗಿಸಿ ಕಳೆದ ವರ್ಷ 1:1 ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಿತ್ತು. ಆದರೆ, ಮೊದಲು ಈ ಪಟ್ಟಿಯಲ್ಲಿ ತಂದೆಯ ಆದಾಯ ಪ್ರಮಾಣಪತ್ರ ಸಲ್ಲಿಸಿದ್ದ ವಿವಾಹಿತ ಮಹಿಳಾ ಅಭ್ಯರ್ಥಿಗಳನ್ನು ಪರಿಗಣಿಸಿರಲಿಲ್ಲ. ಹಾಗಾಗಿ ಆ ಅಭ್ಯರ್ಥಿಗಳು ಹೈಕೋರ್ಟ್ ಮೆಟ್ಟಿಲೇರಿದ್ದರು.

    ಇದನ್ನೂ ಓದಿ: ಕಬಡ್ಡಿ ಆಡುವಾಗ ಹೃದಯಾಘಾತ: ಸ್ನೇಹಿತರ ಎದುರಲ್ಲೇ ಕುಸಿದು ಬಿದ್ದು ದುರಂತ ಅಂತ್ಯ ಕಂಡ ಯುವಕ!

    ನ್ಯಾಯಾಲಯ ಆ ಮಹಿಳಾ ಅಭ್ಯರ್ಥಿಗಳನ್ನೂ ತಾತ್ಕಾಲಿಕ ಪಟ್ಟಿಗೆ ಪರಿಗಣಿಸುವಂತೆ ಆದೇಶಿಸಿ ಹಿಂದಿನ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ರದ್ದುಪಡಿಸಿತ್ತು. ಉಳಿದ 1648 ಹುದ್ದೆಗಳು ಖಾಲಿ ಉಳಿದಿದ್ದು ಅವುಗಳಿಗೆ ಮುಂದಿನ ನೇಮಕಾತಿ ಪ್ರಕ್ರಿಯೆಯಲ್ಲಿ ಭರ್ತಿ ಮಾಡಲಾಗುತ್ತದೆ ಎಂದು ಮಾಹಿತಿ ನೀಡಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts