More

    ಅಂತಿಮ ವರ್ಷದ ಪದವಿ ಪರೀಕ್ಷೆಯೂ ರದ್ದು, ಸರಾಸರಿ ಅಂಕ ನೀಡಿಕೆ

    ಮುಂಬೈ: ಅಂತಿಮ ವರ್ಷದ ಪದವಿ ಪರೀಕ್ಷೆಗಳನ್ನು ರದ್ದುಗೊಳಿಸಲು ನಿರ್ಧರಿಸಲಾಗಿದ್ದು, ಮೊದಲ ಮತ್ತು ಎರಡನೇ ವರ್ಷದ ಪದವಿ ಪರೀಕ್ಷೆಯಲ್ಲಿ ಗಳಿಸಿಕೊಂಡಿರುವ ಅಂಕಗಳನ್ನು ಆಧರಿಸಿ ವಿದ್ಯಾರ್ಥಿಗಳಿಗೆ ಸರಾಸರಿ ಅಂಕಗಳನ್ನು ನೀಡಲಾಗುವುದು ಮಹಾರಾಷ್ಟ್ರ ಸರ್ಕಾರ ಹೇಳಿದೆ.

    ಭಾನುವಾರ ನಡೆದ ಸಭೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್​ ಠಾಕ್ರೆ ಈ ನಿರ್ಧಾರ ಕೈಗೊಂಡಿದ್ದಾರೆ.

    ಇದನ್ನೂ ಓದಿ: ಕರೊನಾ, ಅಂಫಾನ್​ ನಡುವೆಯೇ ಈಗ ಅಬ್ಬರಿಸಲಿದೆ ‘ನಿಸರ್ಗ’! ರಾಜ್ಯದ ಮೇಲೂ ಪರಿಣಾಮ

    ಇದಕ್ಕೂ ಮುನ್ನ ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳ ಕುಲಪತಿಗಳ ಜತೆ ಉದ್ಧವ್​ ಠಾಕ್ರೆ ಸಭೆ ನಡೆಸಿದ್ದರು. ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸುವುದು ಅಥವಾ ರದ್ದುಗೊಳಿಸುವುದು ಚರ್ಚೆಯ ಪ್ರಮುಖ ವಿಷಯವಾಗಿತ್ತು. ಕೊನೆಗೆ ಸಭೆಯಲ್ಲಿ ಪರೀಕ್ಷೆಗಳನ್ನು ರದ್ದುಗೊಳಿಸುವ ನಿರ್ಧಾರ ಕೈಗೊಳ್ಳಲಾಯಿತು. ಸಂಜೆ ರಾಜ್ಯವನ್ನು ಉದ್ದೇಶಿಸಿ ಮಾತನಾಡಿದ ಉದ್ಧವ್​ ಠಾಕ್ರೆ, ಕೋವಿಡ್​-19 ಪಿಡುಗಿನ ಈ ಸಂದರ್ಭದಲ್ಲಿ ಪರೀಕ್ಷೆಗಳನ್ನು ಆಯೋಜಿಸಲು ಸಾಧ್ಯವಿಲ್ಲ. ಹಾಗಾಗಿ 8 ಲಕ್ಷ ವಿದ್ಯಾರ್ಥಿಗಳಿಗೆ ಪರೀಕ್ಷೆಯಿಂದ ವಿನಾಯ್ತಿ ನೀಡಲು ನಿರ್ಧರಿಸಲಾಗಿದೆ ಎಂದು ಘೋಷಿಸಿದರು.

    ಮುಂಬೈ, ಪುಣೆ ಮತ್ತು ನಾಗ್ಪುರ ಸೇರಿ ಮಹಾರಾಷ್ಟ್ರದ ಬಹುತೇಕ ಪ್ರದೇಶಗಳು ಕೆಂಪು ವಲಯದಲ್ಲಿ ಬರುವುದರಿಂದ, ಪರೀಕ್ಷೆಗಳನ್ನು ಆಯೋಜಿಸುವುದು ಅಸಾಧ್ಯ ಎಂದು ಹೇಳಿದ್ದ ಮಹಾರಾಷ್ಟ್ರ ಸರ್ಕಾರ, ಯುಜಿಸಿ ನಿರ್ದೇಶನದ ಮೇರೆಗೆ ಮೊದಲ ಮತ್ತು ಎರಡನೇ ವರ್ಷದ ಪದವಿ ತರಗತಿಗಳ ಪರೀಕ್ಷೆಗಳನ್ನು ರದ್ದುಪಡಿಸಿತ್ತು.

    ನಾಲ್ಕನೇ ಹೆಂಡತಿ ಇದ್ದರೂ 13 ವರ್ಷದ ಮಗಳನ್ನೂ ಬಿಡಲಿಲ್ಲ ಕಾಮಾಂಧ ತಂದೆ…

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts