ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ ಆಸ್ಪತ್ರೆಗೆ ದಾಖಲು

Nirmala Seetharaman
Published on

ದೆಹಲಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ದೆಹಲಿಯ ಏಮ್ಸ್​ ಆಸ್ಪತ್ರೆಗೆ ದಾಖಲಾಗಿದ್ದಾರೆ.

63 ವರ್ಷದ ನಿರ್ಮಲಾ ಸೀತಾರಾಮನ್​ ಅವರು ಸೋಮವಾರ ಮಧ್ಯಾಹ್ನ 12 ಗಂಟೆಗೆ ದೆಹಲಿಯ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಏಮ್ಸ್) ಖಾಸಗಿ ವಾರ್ಡ್‌ಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ. ಅವರ ಆರೋಗ್ಯಸ್ಥಿತಿ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಇನ್ನಷ್ಟೇ ಮಾಹಿತಿ ಬರಬೇಕಿದೆ.

ಕಳೆದ ಫೆಬ್ರವರಿ 1ರಂದು ನಿರ್ಮಲಾ ಸೀತಾರಾಮನ್​ ಅವರು ಕೇಂದ್ರ ಬಜೆಟ್​ ಮಂಡಿಸಿದ್ದರು. ವಿತ್ತ ಸಚಿವೆಯಾಗಿ ಇದುವರೆಗೂ ನಾಲ್ಕು ಬಜೆಟ್​ ಮಂಡಿಸಿದ್ದಾರೆ. (ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net