More

    ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ ಮಾಡಿ ಬಜೆಟ್​ ಮಂಡನೆಗೆ ಒಪ್ಪಿಗೆ ಪಡೆದ ವಿತ್ತಸಚಿವೆ

    ನವದೆಹಲಿ: ಕೇಂದ್ರ ಬಜೆಟ್​ ಮಂಡನೆಗೂ ಮುನ್ನ ರಾಷ್ಟ್ರಪತಿ ಭವನಕ್ಕೆ ಭೇಟಿ ನೀಡಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಬಜೆಟ್​ ಮಂಡನೆಗೆ ಔಪಚಾರಿಕ ಒಪ್ಪಿಗೆ ಪಡೆದರು.

    ರಾಷ್ಟ್ರಪತಿ ಭೇಟಿಯ ವೇಳೆ ಹಣಕಾಸು ರಾಜ್ಯ ಸಚಿವರುಗಳಾದ ಡಾ. ಭಾಗವತ್​ ಕೃಷ್ಣರಾವ್​ ಕಾರದ್​ ಮತ್ತು ಪಂಕಜ್​ ಚೌಧರಿ ಹಾಗೂ ಹಣಕಾಸು ಸಚಿವಾಲಯದ ಹಿರಿಯ ಅಧಿಕಾರಿಗಳು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​ ಅವರಿಗೆ ಸಾಥ್​ ನೀಡಿದರು.

    ರಾಷ್ಟ್ರಪತಿಗಳ ಒಪ್ಪಿಗೆ ಬಳಿಕ ಸಂಸತ್ತಿನ ಕಡೆ ತೆರಳಲಿರುವ ನಿರ್ಮಲಾ ಸೀತಾರಾಮನ್​ ಬಜೆಟ್​ ಮಂಡನೆಗೂ ಮುನ್ನ ಸಂಪುಟ ಸಭೆಯಲ್ಲಿ ಬಜೆಟ್​ಗೆ ಅನುಮೋದನೆ ಪಡೆಯಲಿದ್ದಾರೆ. ಇದಾದ ನಂತರ ಬೆಳಗ್ಗೆ 11 ಗಂಟೆಗೆ ಬಜೆಟ್​ ಮಂಡನೆ ಆರಂಭಿಸಲಿದ್ದಾರೆ.

    ಪ್ರಧಾನಿ ನರೇಂದ್ರ ಮೋದಿ ಸರ್ಕಾರದ 10ನೇ ಪೂರ್ಣ ಪ್ರಮಾಣದ ಬಜೆಟ್​ ಇದಾಗಿದ್ದು, ವಿತ್ತ ಸಚಿವೆಯಾಗಿ ನಿರ್ಮಲಾ ಸೀತಾರಾಮನ್​ ಅವರು ಮಂಡಿಸುತ್ತಿರುವ 5ನೇ ಬಜೆಟ್​ ಆಗಿದೆ. ಈ ಬಾರಿಯು ಸೂಟ್​ಕೇಸ್ ಸಂಪ್ರದಾಯವಿಲ್ಲ ಮತ್ತು ಮುದ್ರಣದ ಪ್ರತಿಗಳು ಇರುವುದಿಲ್ಲ. ಕಳೆದ ಬಾರಿಯಂತೆ ಇ ಬಜೆಟ್ ಮಂಡನೆಯಾಗಲಿದೆ. ​​ ಕಳೆದ ಬಾರಿಯಂತೆ “ಬಹಿ ಖಾತಾ” ಸಂಪ್ರದಾಯವನ್ನು ಬದಿಗಿಟ್ಟು ಟ್ಯಾಬ್​ ಮೂಲಕ ಆಯವ್ಯಯ ಮಂಡನೆ ಮಾಡಲಿದ್ದಾರೆ.

    ಸದ್ಯ ಜಾಗತಿಕ ಮಟ್ಟದಲ್ಲಿ ಉಂಟಾಗಿರುವ ಆರ್ಥಿಕ ಬಿಕ್ಕಟ್ಟಿನ ನಡುವೆ ಮಂಡನೆ ಆಗುತ್ತಿರುವ ಈ ಬಜೆಟ್​ ವಿಶ್ವದ ಗಮನ ಸೆಳೆದಿದೆ. ಹೀಗಾಗಿ ಜನರು ಕೂಡ ಬಜೆಟ್​ ಮೇಲೆ ಸಾಕಷ್ಟು ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದು, 1000 ರೂ. ದಾಟಿರುವ ಸಿಲಿಂಡರ್​ ಬೆಲೆ ಇಳಿಕೆ ಆಗಲಿದೆಯಾ? ಶತಕ ಬಾರಿಸಿರುವ ಪೆಟ್ರೋಲ್​ ದರದಲ್ಲಿ ಕೊಂಚ ನಿರಾಳ ಕಾಣಬಹುದಾ? ಹೆಚ್ಚುತ್ತಿರುವ ಅಗತ್ಯ ವಸ್ತುಗಳ ಬೆಲೆ ಕಡಿಮೆ ಆಗಲಿದೆಯಾ? ಬೀಜ ಗೊಬ್ಬರ ಖರೀದಿಯಲ್ಲಿ ಸಬ್ಸಿಡಿ ಸಿಗುತ್ತಾ? ಈ ಬಾರಿ ಆದಾಯ ತೆರಿಗೆ ಮಿತಿಯನ್ನು ಸರ್ಕಾರ ಹೆಚ್ಚಿಸುತ್ತಾ? ಯಾವುದು ಇಳಿಕೆ ಯಾವುದು ಏರಿಕೆ? ಜನರಿಗೆ ಪ್ರಧಾನಿ ಮೋದಿ ಕೊಡ್ತಾರಾ ಗುಡ್ ನ್ಯೂಸ್? ಎಂಬಿತ್ಯಾದಿ ಪ್ರಶ್ನೆಗಳಿಗೆ ಇಂದಿನ ಬಜೆಟ್​ನಲ್ಲಿ ಉತ್ತರ ಸಿಗಲಿದೆ. (ಏಜೆನ್ಸೀಸ್​)

    ಇಂದಿನ ಜಾಗತಿಕ ಆರ್ಥಿಕ ಪರಿಸ್ಥಿತಿಯಲ್ಲಿ ಇಡೀ ವಿಶ್ವವೇ ಭಾರತದ ಬಜೆಟ್​ ಎದುರು ನೋಡುತ್ತಿದೆ: ಪ್ರಧಾನಿ ಮೋದಿ

    ದೇಶದಲ್ಲಿ ಸ್ಥಿರ, ನಿರ್ಭೀತ, ನಿರ್ಣಾಯಕ ಸರ್ಕಾರವಿದ್ದು, ದೊಡ್ಡ ಕನಸುಗಳನ್ನು ನನಸಾಗಿಸುವತ್ತ ಕೆಲ್ಸ ಮಾಡ್ತಿದೆ: ರಾಷ್ಟ್ರಪತಿ ದ್ರೌಪದಿ ಮುರ್ಮು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts