More

    ಆರ್ಥಿಕ ಸ್ವಾವಲಂಬನೆ ಪಿಎಂ ಸ್ವನಿಧಿ ಉದ್ದೇಶ

    ಚಿಕ್ಕಮಗಳೂರು: ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಸರ್ಕಾರದ ಸೌಲಭ್ಯ ತಲುಪಬೇಕೆಂಬ ಉದ್ದೇಶದಿಂದ ಬೀದಿನಾಟಕ ಪ್ರದರ್ಶನದ ಮೂಲಕ ಜನರಲ್ಲಿ ಅರಿವು ಮೂಡಿಸಲಾಗುತ್ತಿದೆ ಎಂದು ನಗರಸಭೆ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್ ತಿಳಿಸಿದರು.

    ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಪಿಎಂ ಸ್ವನಿಧಿ ಯೋಜನೆಯಡಿ ಕಡೂರಿನ ನವಜೀವನ ಚಾರಿಟಬಲ್ ಸೇವಾ ಸಂಸ್ಥೆಯಿಂದ ಬೀದಿಬದಿ ವ್ಯಾಪಾರಿಗಳಿಗೆ ಅರಿವು ಮೂಡಿಸುವ ಬೀದಿನಾಟಕ ಪ್ರದರ್ಶನಕ್ಕೆ ಚಾಲನೆ ನೀಡಿ ಮಾತನಾಡಿದರು.
    ಪ್ರಧಾನಿ ನರೇಂದ್ರ ಮೋದಿ ಆಶಯದಂತೆ ಬಡವರ ಆರ್ಥಿಕ ಸ್ವಾವಲಂಬನೆ ಉದ್ದೇಶದಿಂದ ಕೇಂದ್ರ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಯೋಜನೆಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಬೀದಿ ನಾಟಕ ಆಯೋಜಿಸಲಾಗಿದೆ ಎಂದು ತಿಳಿಸಿದರು.
    ಪ್ರಧಾನ ಮಂತ್ರಿ ಸುರಕ್ಷಾ ಬಿಮಾ, ಜೀವನ್ ಜ್ಯೋತಿ, ಒನ್ ನೇಷನ್ ಒನ್ ರೇಷನ್ ಕಾರ್ಡ್, ಜನಧನ, ಶ್ರಮಯೋಗಿ ಮಾನಧನ ಯೋಜನೆ, ಕಟ್ಟಡ ಹಾಗೂ ಇತರೆ ನಿರ್ಮಾಣಗಳ ಕಾರ್ಮಿಕರ ನೋಂದಣಿ, ಜನನಿ ಸುರಕ್ಷಾ, ಮಾತೃವಂದನಾ ಯೋಜನೆ ಮೂಲಕ ಬಡ್ಡಿ ರಹಿತ ಸಾಲ ನೀಡಲಾಗುತ್ತಿದೆ. ಸಾರ್ವಜನಿಕರು ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಮನವಿ ಮಾಡಿದರು.
    ನಗರಸಭೆ ಆಯುಕ್ತ ಬಿ.ಸಿ.ಬಸವರಾಜ್ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯುವ ಕುರಿತು ನಗರಸಭೆಯಿಂದ ಸಾರ್ವಜನಿಕರಿಗೆ ಅರಿವು ಮೂಡಿಸಲಾಗುತ್ತಿದೆ. ಈ ಮೂಲಕ ಬೀದಿ ಬದಿ ವ್ಯಾಪಾರಿಗಳನ್ನೂ ಆರ್ಥಿಕವಾಗಿ ಸದೃಢರನ್ನಾಗಿಸುವ ಉದ್ದೇಶ ಹೊಂದಲಾಗಿದೆ ಎಂದರು. ನವಜೀವನ ಚಾರಿಟಬಲ್ ಟ್ರಸ್ಟ್‌ನ ಚಂದ್ರಶೇಖರ್ ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts