More

    ಸ್ವಉದ್ಯೋಗದಿಂದ ಆರ್ಥಿಕ ಸ್ವಾವಲಂಬನೆ

    ಬೀರೂರು: ಮಹಿಳೆಯರು ಕುಟುಂಬ ನಿರ್ವಹಣೆ ಮತ್ತು ಆರ್ಥಿಕ ಸ್ವಾವಲಂಬನೆಗಾಗಿ ಸ್ವ-ಉದ್ಯೋಗದಿಂದ ಬದುಕು ಕಟ್ಟಿಕೊಳ್ಳಬೇಕು ಎಂದು ತಾಲೂಕು ಯೋಜನಾಧಿಕಾರಿ ಸಂಜೀವ ಗೌಡ ತಿಳಿಸಿದರು.
    ಪಟ್ಟಣದ ಬೀರಲಿಂಗೇಶ್ವರ ಸಮುದಾಯ ಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿ ಸ್ವ-ಉದ್ಯೋಗ ಪ್ರೇರಣಾ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು.
    ಸಂಸಾರದ ಸಂಪೂರ್ಣ ಜವಾಬ್ದಾರಿ ಹೊರುವ ಮಹಿಳೆ ತಾನು ಸಮಾಜದಲ್ಲಿ ಅಬಲೆಯಲ್ಲ ಸಬಲೆ ಎಂದು ನಿರೂಪಿಸಿದ್ದಾಳೆ. ಸಾಮಾಜಿಕ, ರಾಜಕೀಯ, ಶಿಕ್ಷಣ ಸೇರಿ ವಿವಿಧ ಕ್ಷೇತ್ರದಲ್ಲಿ ಯಶಸ್ಸು ಕಂಡಿದ್ದಾಳೆ. ಆಧುನಿಕ ಜಗತ್ತಿನಲ್ಲಿ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದ್ದು ಮನೆಯ ಆರ್ಥಿಕ ಸ್ಥಿತಿ ಬಲಪಡಿಸಲು ಸ್ವಉದ್ಯೋಗದಲ್ಲಿ ತೊಡಗಿರುವುದು ಉತ್ತಮ ಬೆಳವಣಿಗೆ ಎಂದರು.
    ಚಿಕ್ಕಮಗಳೂರಿನ ತರಬೇತಿ ಸಂಸ್ಥೆ ಉಪನ್ಯಾಸಕ ರವಿಚಂದ್ರ ಮಾತನಾಡಿ, ಸ್ವ-ಉದ್ಯೋಗದಲ್ಲಿ 68 ಮಾದರಿಯ ವಿವಿಧ ಉದ್ಯೋಗಗಳಿದ್ದು ಸ್ವ-ಇಚ್ಛೆಯಿಂದ ಆಸಕ್ತರು ಟೈಲರಿಂಗ್, ಬ್ಯೂಟಿಷಿಯನ್, ಅಲಂಕಾರಿಕ ಒಡವೆ, ಕೈಮಗ್ಗ, ಎರೆಹುಳು ಗೊಬ್ಬರ, ಮೊಬೈಲ್ ರಿಪೇರಿ, ಎಲೆಕ್ಟ್ರಿಕಲ್ ವಸ್ತುಗಳ ರಿಪೇರಿ, ಹೈನುಗಾರಿಕೆ ಸೇರಿ ವಿವಿಧ ಸ್ವ-ಉದ್ಯೋಗಗಳ ಬಗ್ಗೆ ಮಾಹಿತಿ ನೀಡಿದರು.
    ಧರ್ಮಸ್ಥಳ ಯೋಜನೆಯ ಜಿಲ್ಲಾ ನಿರ್ದೇಶಕ ಪ್ರಕಾಶ್ ರಾವ್, ಒಕ್ಕೂಟದ ಅಧ್ಯಕ್ಷರಾದ ಲಲಿತಮ್ಮ, ವಸಂತಮ್ಮ, ವಲಯ ಮೇಲ್ವಿಚಾರಕ ಚಂದನ್, ಸ್ವಸಹಾಯ ಸಂಘದ ಸದಸ್ಯರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts