ಮನ್ಸೂರ್​ನ ಇನ್ನಷ್ಟು ಆಸ್ತಿ ಪತ್ತೆ

ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಪ್ರಕರಣದ ಪ್ರಮುಖ ಆರೋಪಿ ಮೊಹಮದ್ ಮನ್ಸೂರ್ ಖಾನ್ ಉತ್ತರ ಭಾರತದಲ್ಲಿ ಹೊಂದಿದ್ದ ಇನ್ನಷ್ಟು ಆಸ್ತಿಗಳು ಪತ್ತೆಯಾಗಿದ್ದು, ಸದ್ಯದಲ್ಲೇ ವಶಪಡಿಸಿಕೊಳ್ಳಲಾಗುವುದು ಎಂದು ವಿಶೇಷ ತನಿಖಾ ತಂಡದ (ಎಸ್​ಐಟಿ) ಅಧಿಕಾರಿಗಳು ತಿಳಿಸಿದ್ದಾರೆ.

ಉತ್ತರಪ್ರದೇಶ, ದೆಹಲಿ ಸೇರಿ ಉತ್ತರ ಭಾರತದ ಕೆಲವೆಡೆ ಇನ್ನಷ್ಟು ಪ್ರದೇಶಗಳಲ್ಲಿ ಮನ್ಸೂರ್ ಕೋಟ್ಯಂತರ ರೂ. ಮೌಲ್ಯದ ಆಸ್ತಿ ಹೊಂದಿರುವುದು ಬೆಳಕಿಗೆ ಬಂದಿದೆ ಎಂದು ಎಸ್​ಐಟಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮನ್ಸೂರ್ ಹೊರ ರಾಜ್ಯದಲ್ಲಿರುವ ತನ್ನ ಆಪ್ತರಿಗೆ ಕೋಟ್ಯಂತರ ರೂ. ನೀಡಿರುವ ಸಾಧ್ಯತೆಗಳಿವೆ ಎಂದು ಹೇಳಿದ್ದಾರೆ.

ಅನರ್ಹಗೊಂಡಿರುವ ಶಾಸಕ ರೋಷನ್ ಬೇಗ್ ವಿಚಾರಣೆಗೆ ಗೈರಾಗಿದ್ದು, ಅವರ ವಿರುದ್ಧ ಮುಂದಿನ ಕ್ರಮ ಕೈಗೊಳ್ಳುವ ಬಗ್ಗೆ ಚರ್ಚೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *