More

    ಭ್ರೂಣ ಲಿಂಗ ಪತ್ತೆ, ಹತ್ಯೆ ಪ್ರಕರಣದ ಮಾಹಿತಿ ನೀಡಿದವರಿಗೆ ಸಿಗಲಿದೆ​ ಬಹುಮಾನ…

    ಬೆಂಗಳೂರು: ಭ್ರೂಣ ಲಿಂಗ ಪತ್ತೆ ಹಾಗೂ ಹತ್ಯೆ ನಿಷೇಧವಿದ್ದರೂ ಭ್ರೂಣ ಹತ್ಯೆ ಪ್ರಕರಣಗಳು ರಾಜ್ಯದ ಹಲವೆಡೆ ಸುದ್ದಿ ಮಾಡುತ್ತಿವೆ.  ಮೈಸೂರು,ಮಂಡ್ಯ ಭಾಗದಲ್ಲಿ ಗರ್ಭಪಾತ ಮಾಡಿಸುತ್ತಿದ್ದ ಭಾರೀ ಜಾಲವನ್ನೇ ಬೇಧಿಸಿದ್ದರು. ಆದರೆ ಇತ್ತೀಚಿನ ದಿನಗಳಲ್ಲಿ ಭ್ರೂಣ ಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿವೆ. ಹೀಗಾಗಿ ಸ್ಕ್ಯಾನಿಂಗ್ ಸೆಂಟರ್‌ನ ಮೇಲೆ ಹದ್ದಿನ ಕಣ್ಣಿಟ್ಟ ಅಧಿಕಾರಿಗಳು ಭ್ರೂಣ ಪತ್ತೆ, ಹತ್ಯೆ ಬಗ್ಗೆ ಮಾಹಿತಿ ನೀಡಿದವರಿಗೆ ಭಾರಿ ಬಹುಮಾನವನ್ನು ನೀಡುವುದಾಗಿ ಘೋಷಿಸಿದ್ದಾರೆ.

    ಭ್ರೂಣ ಹತ್ಯೆ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಮೈಸೂರಿನ‌ ತಾಲೂಕು ಆರೋಗ್ಯಧಿಕಾರಿ ಡಾ.ರಾಜೇಶ್ವರಿ ಮತ್ತು ಈ ಹಿಂದೆ ಕರ್ತವ್ಯ ನಿರ್ವಹಿಸುತ್ತಿದ್ದ ಜಿಲ್ಲಾ ಕುಟುಂಬ ಕಲ್ಯಾಣಧಿಕಾರಿ ಡಾ.ರವಿ ಅವರನ್ನ ಅಮಾನತು ಮಾಡಲಾಗಿತ್ತು.

    ಈ ಪ್ರಕರಣ ಹೆಚ್ಚು ತೀವ್ರತೆ ಪಡೆಯುತ್ತಿದ್ದು ಮೈಸೂರು ಜಿಲ್ಲೆಯ 139 ಸ್ಕ್ಯಾನಿಂಗ್ ಸೆಂಟರ್‌ ಮೇಲೆ ತೀವ್ರ ನಿಗಾ ಇಡಲಾಗುತ್ತಿದೆ. ಭ್ರೂಣ ಹತ್ಯೆ ಬಗ್ಗೆ ಮಾಹಿತಿ ನೀಡಿದರೆ 50 ಸಾವಿರ ರೂ. ಬಹುಮಾನ ನೀಡಲಾಗುತ್ತದೆ. ಮಾಹಿತಿ ನೀಡಿದವರ ಬಗ್ಗೆ ಗೌಪ್ಯತೆ ಕಾಪಾಡಲಾಗುವುದು.  ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಕುಮಾರಸ್ವಾಮಿ ಅವರು ಘೋಷಣೆ ಮಾಡಿದ್ದಾರೆ.

    ಭ್ರೂಣ ಪತ್ತೆ ಹಾಗೂ ಹತ್ಯೆ ಪ್ರಕರಣ ಸಂಬಂಧ ಮೈಸೂರು ಜಿಲ್ಲೆಯಲ್ಲಿಅಧಿಕಾರಿಗಳು ಹೈ ಅಲರ್ಟ್ ಆಗಿದ್ದಾರೆ. ಹೀಗಾಗಿ ಮೈಸೂರು ನಗರ ಜಿಲ್ಲೆಯ 139 ಸ್ಕ್ಯಾನಿಂಗ್ ಸೆಂಟರ್‌ನ ಮೇಲೆ ಹದ್ದಿನ ಕಣ್ಣಿಡಲಾಗಿದೆ. ಟಾಸ್ಕ್‌ಪೋರ್ಸ್‌ನಿಂದ ಎಲ್ಲಾ ಕಡೆ ನಿಗಾ ಇಡಲಾಗಿದೆ ಎಂದು ತಿಳಿಸಿದ್ದಾರೆ.

    Gold, Silver Price; ಬೆಂಗಳೂರಿನಲ್ಲಿ 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ ಎಷ್ಟಿದೆ ಗೊತ್ತಾ?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts