More

    ಮಾಸ್ಕ್ ಧರಿಸದಿದ್ದರೆ ದಂಡ, ಇದುವರೆಗೆ 7.55 ಲಕ್ಷ ರೂ. ವಸೂಲಿ

    ಉಡುಪಿ: ಜಿಲ್ಲೆಯಲ್ಲಿ ಕೋವಿಡ್ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇನ್ನಷ್ಟು ಕಠಿಣ ಕ್ರಮಗಳನ್ನು ಜಾರಿಗೊಳಿಸಲು ಜಿಲ್ಲಾಡಳಿತ ಮುಂದಾಗಿದ್ದು, ಮಾರ್ಗಸೂಚಿ ಉಲ್ಲಂಘಿಸುವವರ ವಿರುದ್ಧ ದಂಡ ವಸೂಲಿ ಅಧಿಕಾರವನ್ನು ಕಂದಾಯ ಹಾಗೂ ಅಬಕಾರಿ ಇಲಾಖೆಗೂ ವಿಸ್ತರಿಸಿದೆ.

    ಇದುವರೆಗೆ ಸ್ಥಳೀಯಾಡಳಿತ ಮತ್ತು ಪೊಲೀಸ್ ಇಲಾಖೆ ಮಾತ್ರ ದಂಡ ವಸೂಲಿ ಕಾರ್ಯದಲ್ಲಿ ತೊಡಗಿಸಿಕೊಂಡಿತ್ತು, ಪ್ರಸಕ್ತ ಕಂದಾಯ ಹಾಗೂ ಅಬಕಾರಿ ಇಲಾಖೆ ಅಧಿಕಾರಿಗಳೂ ಮಾಸ್ಕ್ ಧರಿಸದವರ ವಿರುದ್ಧ ಕ್ರಮಕ್ಕೆ ಮುಂದಾಗಿದ್ದಾರೆ.ಪೊಲೀಸ್ ಹಾಗೂ ಅಬಕಾರಿ ಇಲಾಖೆಯಲ್ಲಿ ಎಎಸ್ಸೈ ಸಹಿತ ಮೇಲಿನ ಅಧಿಕಾರಿಗಳಿಗೆ, ಕಂದಾಯ ಇಲಾಖೆಯಲ್ಲಿ ಕಂದಾಯ ನಿರೀಕ್ಷಕರು ಹಾಗೂ ಮೇಲಿನ ಅಧಿಕಾರಿಗಳು, ಗ್ರಾಪಂ ಪಿಡಿಓ ಮತ್ತು ಮೇಲಿನ ಅಧಿಕಾರಿಗಳಿಗೆ ದಂಡ ವಸೂಲಿ ಮಾಡುವ ವಿಶೇಷ ಅಧಿಕಾರವನ್ನು ಜಿಲ್ಲಾಡಳಿತ ನೀಡಿದೆ.

    ರೂ. 100 ದಂಡ:  ಸಾರ್ವಜನಿಕ ಸ್ಥಳದಲ್ಲಿ ಮಾಸ್ಕ್ ಧರಿಸದೇ ತಿರುಗಾಡುವವರ ವಿರುದ್ಧ ಕಟ್ಟು ನಿಟ್ಟಿನ ಕ್ರಮಕ್ಕೆ ಜಿಲ್ಲಾಡಳಿತ ಮುಂದಾಗಿದ್ದು, ಸ್ಥಳದಲ್ಲಿಯೇ ದಂಡ ವಿಧಿಸುವ ಕ್ರಮ ಜಾರಿಗೆ ತಂದಿದೆ. ಸಾರ್ವಜನಿಕ ಸ್ಥಳಗಳಲ್ಲಿ ಪ್ರತಿಯೊಬ್ಬರೂ ಕಡ್ಡಾಯ ಮಾಸ್ಕ್ ಧರಿಸಬೇಕು. ಬಸ್‌ಗಳಲ್ಲಿ ಮಾತ್ರವಲ್ಲದೆ ಕಾರು, ಬೈಕ್‌ಗಳಲ್ಲಿ ಪ್ರಯಾಣಿಸುವಾಗಲೂ ಮಾಸ್ಕ್ ಧರಿಸಬೇಕು. ಇಲ್ಲದಿದ್ದರೆ 100ರೂ. ದಂಡ ಪಾವತಿಸ ಬೇಕಾಗುತ್ತದೆ.

    ಜನರ ಆರೋಗ್ಯ ಸುರಕ್ಷತೆಗಾಗಿ ಜಿಲ್ಲಾಡಳಿತ ಕಠಿಣ ಕ್ರಮಕೈಗೊಳ್ಳುತ್ತಿದೆ. ಕೋವಿಡ್ ಮಾರ್ಗಸೂಚಿಯನ್ನು ಪ್ರತಿಯೊಬ್ಬರು ಕಡ್ಡಾಯವಾಗಿ ಪಾಲಿಸಬೇಕು. ದಂಡವಿಧಿಸುವ ಅಧಿಕಾರವನ್ನು ವಿವಿಧ ಇಲಾಖೆ ಅಧಿಕಾರಿಗಳಿಗೂ ವಹಿಸಲಾಗಿದೆ. ಬಾಡಿಗೆ, ಇನ್ನಿತರೆ ವಾಹನದಲ್ಲಿ ಪ್ರಯಾಣಿಸುವಾಗ ಮಾಸ್ಕ್ ಕಡ್ಡಾಯ ಧರಿಸಬೇಕು. ಒಂದೇ ಮನೆಯವರು ಸಂಚರಿಸುವಾಗ ಮಾಸ್ಕ್ ಧರಿಸದಿದ್ದರೂ ವಾಹನದಿಂದ ಇಳಿಯುವಾಗ ಕಡ್ಡಾಯ ಧರಿಸಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಎಲ್ಲರೂ ಮಾಸ್ಕ್ ಧರಿಸುವ ಮೂಲಕ ಮುಂಜಾಗ್ರತಾ ಕ್ರಮ ವಹಿಸಬೇಕು.
    -ಜಿ.ಜಗದೀಶ್, ಜಿಲ್ಲಾಧಿಕಾರಿ, ಉಡುಪಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts