More

    ನೀತಿ ಸಂಹಿತೆಗೂ ಮುನ್ನ ಕಾಮಗಾರಿ ಮುಗಿಸಿ

    ಶಿವಮೊಗ್ಗ: ಬೇಸಿಗೆ ಆರಂಭವಾಗಿರುವ ಹಿನ್ನೆಲೆಯಲ್ಲಿ ನೀರಿಗೆ ಹಾಹಾಕಾರ ಉಂಟಾಗುವ ಸಾಧ್ಯತೆ ಇದೆ. ಬಹುಮುಖ್ಯವಾಗಿ ಕುಡಿಯುವ ನೀರಿಗೆ ಮೊದಲ ಆದ್ಯತೆ ಕೊಡಬೇಕಿದೆ. ಲೋಕಸಭಾ ಚುನಾವಣೆ ನೀತಿ ಸಂಹಿತೆ ಜಾರಿಗೂ ಮುನ್ನವೇ ಅಭಿವೃದ್ಧಿ ಕಾಮಗಾರಿಗಳನ್ನು ಪೂರ್ಣಗೊಳಿಸಲು ಒತ್ತು ನೀಡಬೇಕು ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಅಧಿಕಾರಿಗಳಿಗೆ ಸೂಚಿಸಿದರು.

    ಜಿಪಂ ಸಭಾಂಗಭದಲ್ಲಿ ಶುಕ್ರವಾರ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ದಿಶಾ ಸಭೆ ನಡೆಸಿದ ಅವರು, ಈಗಾಗಲೇ ಬಿಎಸ್‌ಎನ್‌ಎಲ್ ಟವರ್ ಅಳವಡಿಕೆ ಸೇರಿ ಹಲವು ಕಾಮಗಾರಿಗಳು ಪ್ರಗತಿಯಲ್ಲಿವೆ. ಇಲಾಖೆ ಮಟ್ಟದ ಸಮನ್ವಯದಲ್ಲಿ ಕೆಲಸ ಕೈಗೆತ್ತಿಕೊಂಡು ಯಾವ ಸಬೂಬನ್ನೂ ಹೇಳದೆ ಮುಗಿಸಬೇಕು ಎಂದು ತಾಕೀತು ಮಾಡಿದರು.
    ಚುನಾವಣೆ ನೀತಿ ಸಂಹಿತೆ ಜಾರಿಯಾದರೆ ಹೊಸ ಕಾಮಗಾರಿ ಆರಂಭಿಸುವಂತಿಲ್ಲ. ಆದರೆ ಈಗಾಗಲೇ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳನ್ನು ಮುಂದುವರಿಸಲು ಸಮಸ್ಯೆ ಇಲ್ಲ. ಹಾಗಾಗಿ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ತಮ್ಮ ಇಲಾಖೆ ವ್ಯಾಪ್ತಿಯೊಳಗೆ ಗುಣಮಟ್ಟದ ಕೆಲಸಗಳು ಆಗುವಂತೆ ನಿಗಾವಹಿಸಬೇಕು ಎಂದು ಸಲಹೆ ನೀಡಿದರು.
    ಅಮೃತ ಯೋಜನೆಯಡಿ ಕುಡಿಯುವ ನೀರು ಸೇರಿ ವಿವಿಧ ಕಾಮಗಾರಿಗಳಿಗೆ ಬಿಡುಗಡೆಯಾದ ಮೊತ್ತವನ್ನು ನಿಗದಿತ ಅವಧಿಯೊಳಗೆ ಬಳಸಿಕೊಂಡು ಪ್ರಗತಿ ಸಾಧಿಸಬೇಕು. ಆದರ್ಶ ಗ್ರಾಮ ಯೋಜನೆಯಲ್ಲೂ ಪ್ರಗತಿ ಸಾಧಿಸಬೇಕು. ಕೆಲವು ತಾಲೂಕುಗಳಲ್ಲಿ ಪ್ರಗತಿ ಕಡಿಮೆ ಇದ್ದು ಭೇಟಿ ನೀಡಿ ಪರಿಶೀಲಿಸುವಂತೆ ಸಮಿತಿ ನಾಮ ನಿರ್ದೇಶಿತ ಸದಸ್ಯರಿಗೆ ಸೂಚಿಸಿದರು.
    ಶಾಸಕ ಆರಗ ಜ್ಞಾನೇಂದ್ರ ಮಾತನಾಡಿ, ಆಗುಂಬೆ ರಾಷ್ಟ್ರೀಯ ಹೆದ್ದಾರಿಯ ಪ್ಯಾಚ್‌ವರ್ಕ್ ಕಳಪೆಯಾಗಿದೆ. ಅಪಘಾತಗಳು ಸಂಭವಿಸುತ್ತಿವೆ. ಸಂಬಂಧಿಸಿದ ಅಧಿಕಾರಿಗಳು ಶೀಘ್ರವೇ ಗುಣಮಟ್ಟದೊಂದಿಗೆ ಸರಿಪಡಿಸಬೇಕು ಎಂದರು. ಸಭೆಗೆ ಹಾಜರಾಗದ ಕೆಆರ್‌ಐಡಿಎಲ್ ಕಾರ್ಯಪಾಲಕ ಇಂಜಿನಿಯರ್‌ಗೆ ನೋಟಿಸ್ ನೀಡುವಂತೆ ಸಂಸದರು ಸೂಚನೆ ನೀಡಿದರು.
    ದಿಶಾ ಸಮಿತಿ ನಾಮನಿರ್ದೇಶಿತ ಸದಸ್ಯರಾದ ಸುರೇಶ್, ನಾಗರತ್ನಾ, ಜಿಪಂ ಸಿಇಒ ಸ್ನೇಹಲ್ ಲೋಖಂಡೆ, ಎಸ್ಪಿ ಜಿ.ಕೆ.ಮಿಥುನ್‌ಕುಮಾರ್, ಎಡಿಸಿ ಸಿದ್ದಲಿಂಗ ರೆಡ್ಡಿ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts