More

    ಮಣಿಕಂಠ ಸೇರಿ 20 ಜನರ ವಿರುದ್ಧ ಎಫ್‌ಐಆರ್

    ಚಿತ್ತಾಪುರ: ತಾಲೂಕು ಆಸ್ಪತ್ರೆಯಲ್ಲಿ ವೈದ್ಯರ ಜತೆ ಅನುಚಿತ ವರ್ತನೆ ಹಾಗೂ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಸೇರಿ 20 ಜನರ ವಿರುದ್ಧ ಸ್ಥಳೀಯ ಠಾಣೆಯಲ್ಲಿ ಗುರುವಾರ ದೂರು ದಾಖಲಾಗಿದೆ.

    ನ.8ರಂದು ಮಧ್ಯಾಹ್ನ 2ಗಂಟೆಗೆ 15-20 ಜನರೊಂದಿಗೆ ಸರ್ಕಾರಿ ಆಸ್ಪತ್ರೆಗೆ ಬಂದು, ಸ್ಥಳೀಯ ವೈದ್ಯರಿಗೆ ಕಿರಿಕಿರಿ ನೀಡಿದ್ದಾರೆ. ಅಲ್ಲದೆ ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದಾರೆ ಎಂದು ಆಡಳಿತ ವೈದ್ಯಾಧಿಕಾರಿ ಡಾ.ಎಂ. ಮುಬಾಸೀರ್ ದೂರು ನೀಡಿದ್ದರು. ಇದರನ್ವಯ ಎಫ್‌ಐಆರ್ ದಾಖಲಾಗಿದೆ.

    ಪೊಲೀಸ್ ಠಾಣೆ ಬಳಿ ಪ್ರತಿಭಟನೆ: ಮಣಿಕಂಠ ಅವರ ವಿರುದ್ಧ ಪ್ರಕರಣ ದಾಖಲಿಸಿರುವುದನ್ನು ಖಂಡಿಸಿ ಹಾಗೂ ಇದಕ್ಕೆ ಪ್ರತಿಯಾಗಿ ವೈದ್ಯರ ವಿರುದ್ಧ ಜಾತಿ ನಿಂದನೆ ಪ್ರಕರಣ ದಾಖಲಿಸುವಂತೆ ಆಗ್ರಹಿಸಿ ಮಣಿಕಂಠ ಬೆಂಬಲಿಗರು ಪೊಲೀಸ್ ಠಾಣೆ ಎದುರು ರಾತ್ರಿ ಪ್ರತಿಭಟನೆ ನಡೆಸಿದರು.

    ಆಸ್ಪತ್ರೆಗೆ ಭೇಟಿ ನೀಡಿದ ವೇಳೆ ವೈದ್ಯಾಧಿಕಾರಿಗಳು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಹೀಗಾಗಿ ಅವರ ವಿರುದ್ಧ ಕೇಸ್ ದಾಖಲಿಸಲು ಠಾಣೆಗೆ ಹೋದರೆ ದೂರು ತೆಗೆದುಕೊಳ್ಳುತ್ತಿಲ್ಲ. ಇದು ಸರಿಯಲ್ಲ, ಪೊಲೀಸರು ಕೆಲವರ ಕೈಗೊಂಬೆಯಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಬಿಜೆಪಿ ತಾಲೂಕು ಅಧ್ಯಕ್ಷ ನೀಲಕಂಠ ರಾಠೋಡ್ ದೂರಿದರು.

    ಪ್ರಮುಖರಾದ ಮಲ್ಲಿಕಾರ್ಜುನ ಪೂಜಾರಿ, ಆನಂದ ನರಬೋಳಿ, ಅಶ್ವತ್ಥರಾಮ ರಾಠೋಡ್, ಶ್ರೀಕಾಂತ್ ಸುಲೇಗಾಂವ್, ಅಯ್ಯಪ್ಪ ಪವಾರ್ ರಾಮತೀರ್ಥ, ಸಿದ್ದು, ಯೂನುಸ್, ಮಹೇಶ್ ಬಾಳಿ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts