More

    ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಬಗ್ಗೆ ವಿವಾದಾತ್ಮಕ ಟ್ವೀಟ್​ ಮಾಡಿದ ಆಪ್​ ಶಾಸಕನ ವಿರುದ್ಧ ಎಫ್ಐಆರ್​

    ನವದೆಹಲಿ: ಲಾಕ್​ಡೌನ್​ ಇದ್ದರೂ ವಲಸೆ ಕಾರ್ಮಿಕರು ಗುಂಪುಗುಂಪಾಗಿ ತಮ್ಮ ಸ್ವಂತ ಊರುಗಳಿಗೆ ತೆರಳುತ್ತಿದ್ದಾರೆ. ಅದರಲ್ಲೂ ದೆಹಲಿಯಿಂದ ಉತ್ತರ ಪ್ರದೇಶದ ಕಡೆಗೆ ಹೆಚ್ಚಿನ ಸಂಖ್ಯೆಯಲ್ಲಿ ಧಾವಿಸುತ್ತಿದ್ದಾರೆ.

    ಇದೇ ವಲಸೆ ವಿಚಾರವಾಗಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ವಿರುದ್ಧ ಅನುಚಿತವಾಗಿ ಮಾತನಾಡಿದ ಆಮ್ ಆದ್ಮಿ ಪಕ್ಷ (ಆಪ್​)ದ ಶಾಸಕನೋರ್ವನ ವಿರುದ್ಧ ನೊಯ್ಡಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

    ದೆಹಲಿ ರಾಜಿಂದರ್​ ನಗರದ ಆಪ್​ ಶಾಸಕ ರಾಘವ್​ ಚಾಧಾ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ವಿರುದ್ಧ ವಿವಾದಾತ್ಮಕ ಟ್ವೀಟ್ ಮಾಡಿದ್ದರು. ಹೆಚ್ಚಿನ ಸಂಖ್ಯೆಯಲ್ಲಿ ವಲಸೆ ಹೋಗುತ್ತಿರುವ ವಿಚಾರವನ್ನೇ ಇಟ್ಟುಕೊಂಡು ಯೋಗಿ ಅವರ ಮಾನ ಹಾನಿ ಮಾಡಿದ್ದಾರೆ ಎಂದು ಸುಪ್ರೀಂಕೋರ್ಟ್ ವಕೀಲ ಪ್ರಶಾಂತ್ ಪಟೇಲ್​ ಎಂಬುವರು ದೂರು ನೀಡಿದ್ದರು.

    ಟ್ವೀಟ್​ನಿಂದ ವಿವಾದ ಸೃಷ್ಟಿಯಾಗುತ್ತಿದ್ದಂತೆ ಅದನ್ನು ಶಾಸಕ ಡಿಲೀಟ್​ ಮಾಡಿದ್ದರು.
    ಶಾಸಕನ ವಿರುದ್ಧ ಎಫ್​ಐಆರ್​ ದಾಖಲಾದ ಮೇಲೆ ನಾನು ಡಿಜಿಪಿ ಮತ್ತು ಪೊಲೀಸ್​ ಆಯುಕ್ತರಿಗೆ ಇಮೇಲ್​ ಕಳಿಸಿದ್ದೇನೆ. ಅನಗತ್ಯ ಹೇಳಿಕೆ ನೀಡುವುದರಿಂದ ಜನರಿಗೆ ತಪ್ಪು ಸಂದೇಶ ರವಾನೆಯಾಗುತ್ತದೆ. ಈಗಾಗಲೇ ಕರೊನಾದಿಂದ ಜನರು ಭಯಭೀತರಾಗಿದ್ದಾರೆ. ಅಂಥದ್ದರಲ್ಲಿ ದೆಹಲಿಯಿಂದ ಹೋದವರಿಗೆ ಉತ್ತರಪ್ರದೇಶದಲ್ಲಿ ಥಳಿಸಿ, ಹಿಂಸೆ ನೀಡಲು, ಸಿಎಂ ಯೋಗಿ ಆದಿತ್ಯನಾಥ್​ ಅವರು ಆದೇಶ ನೀಡಿದ್ದಾರೆ ಎಂಬಿತ್ಯಾದಿ ಸುಳ್ಳುಸುದ್ದಿಗಳನ್ನು ಶಾಸಕರು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡುತ್ತಿದ್ದರು. ಯುಪಿದಲ್ಲಿ ಯಾವ ಕಾರ್ಮಿಕರಿಗೂ ಹೊಡೆಯುತ್ತಿಲ್ಲ ಎಂದು ವಕೀಲರು ಸ್ಪಷ್ಟಪಡಿಸಿದ್ದಾರೆ.

    ಶಾಸಕರ ಟ್ವೀಟ್​ ಕಾನೂನು ಸುವ್ಯವಸ್ಥೆಯನ್ನು ಹದಗೆಡಿಸದಂತೆ ಇರಬಹುದು. ಆದರೆ ಜನರಲ್ಲಿ ಆತಂಕವನ್ನು ಸೃಷ್ಟಿಸುವಂತಿದೆ. ಹಾಗಾಗಿ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. (ಏಜೆನ್ಸೀಸ್​)

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts