More

    ಸರ್ಕಾರಿ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿ; ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ಎಫ್​ಐಆರ್​​

    ಬೆಂಗಳೂರು: ಸರ್ಕಾರಿ ಅಧಿಕಾರಿಗಳಿಗೆ ಕರ್ತವ್ಯಕ್ತೆ ಅಡ್ಡಿಪಡಿಸಿ ಬೆದರಿಕೆ ಹಾಕಿದ್ದಾರೆ ಎನ್ನುವ ಆರೋಪದ ಮೇಲೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಚಾರ್ಮಾಡಿ ಅರಣ್ಯ ಪ್ರದೇಶದಲ್ಲಿ ಮನೆ ನಿರ್ಮಾಣ-ತೆರವು ಜಟಾಪಟಿ ವಿಚಾರವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಶಾಸಕ ಹರೀಶ್ ಪೂಂಜ ವಿರುದ್ಧ ಎಫ್ಐಆರ್ ದಾಖಲಾಗಿದೆ.

    ನಡೆದಿದ್ದೇನು?: ಅರಣ್ಯ ಭೂಮಿಯ ಅತಿಕ್ರಮಣಕ್ಕೆ ಸಂಬಂಧಿಸಿದಂತೆ ವಿವಾದಕ್ಕೆ ಕಾರಣವಾಗಿದ್ದ ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಸರ್ವೆ ನಂಬರ್ 309 ರ ನಿಡ್ಲೆ ವಿಸ್ತೃತ ಬ್ಲಾಕ್ 2ರಲ್ಲಿ ಅಮ್ಮಿನಡ್ಕ -ಕೆದ್ದ ನಿವಾಸಿ ಲೋಲಾಕ್ಷ ಯಾನೆ ಅನಂತು ಅವರು ಅರಣ್ಯ ಇಲಾಖೆಯ ಜಾಗವನ್ನು ಒತ್ತುವರಿ ಮಾಡಿ ನೂತನ ಮನೆ ನಿರ್ಮಾಣಕ್ಕೆ ಮುಂದಾಗಿರುವ ಬಗ್ಗೆ ಮಂಗಳೂರು ಅರಣ್ಯ ಇಲಾಖೆಗೆ ದೂರು ಬಂದಿತ್ತು.

    ಈ ಹಿನ್ನೆಲೆ ಅ.6 ರಂದು ಅರಣ್ಯ ಇಲಾಖೆ ಸಿಬ್ಬಂದಿ ನೂತನ ಮನೆಯ ಫೌಂಡೇಶನ್ ತೆರವುಗೊಳಿಸಿದ್ದರು. ಘಟನೆ ವಿಚಾರ ತಿಳಿದು ಶಾಸಕ ಹರೀಶ್ ಪೂಂಜ ಅಕ್ಟೋಬರ್ 7 ರಂದು ಸ್ಥಳಕ್ಕೆ ಭೇಟಿ ನೀಡಿ ಅರಣ್ಯಧಿಕಾರಿಗಳಿಗೆ ಬೈದಿದ್ದರು. ಅರಣ್ಯ ಇಲಾಖೆ ಸಿಬ್ಬಂದಿ, ಅರಣ್ಯಾಧಿಕಾರಿ ಜಯಪ್ರಕಾಶ್ ಕೆಕೆ, ಶಾಸಕ ಹರೀಶ್ ಪೂಂಜ ನಡುವಿನ ವಾಗ್ವಾದ ನಡೆದಿತ್ತು. ಬೇಸರಗೊಂಡ ಅರಣ್ಯಾಧಿಕಾರಿ ಶಾಸಕ ಹಾಗೂ ಬೆಂಬಲಿಗರ ವಿರುದ್ಧ ದೂರು ದಾಖಲಿಸಿದ್ದಾರೆ. ಐಪಿಸಿ 1860(ಯು/ಎಸ್-143, 353, 504 (ಶಾಂತಿ ಭಂಗವನ್ನು ಪ್ರಚೋದಿಸುವ ಉದ್ದೇಶದಿಂದ ಉದ್ದೇಶಪೂರ್ವಕ ಅವಮಾನ), 149) ಅಡಿ ಪ್ರಕರಣ ದಾಖಲಾಗಿದೆ.

    ಈ ಹಿನ್ನೆಲೆಯಲ್ಲಿ ಇದೀಗ ಸರ್ಕಾರಿ ಅಧಿಕಾರಿಗಳಿಗೆ ಕರ್ತವ್ಯಕ್ತೆ ಅಡ್ಡಿಪಡಿಸಿ ಬೆದರಿಕೆ ಹಾಕಿದ್ದಾರೆ ಎನ್ನುವ ಆರೋಪದ ಹಿನ್ನೆಲೆ ಹರೀಶ್ ಪೂಂಜ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಪೊಲೀಸರು ಎಫ್​ಐಆರ್​ ದಾಖಲಿಸಿಕೊಂಡಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts