ಬೆಂಗಳೂರು: ಸ್ಯಾಂಕಿ ಕೆರೆ ರಸ್ತೆ ಅಗಲೀಕರಣ ಮತ್ತು ಸೇತುವೆ ನಿರ್ಮಾಣದ ವಿರುದ್ಧ ಪ್ರತಿಭಟನೆ ನಡೆಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೇರಿದಂತೆ 30 ಮಂದಿಯ ವಿರುದ್ಧ ವೈಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಫೆ.20ರ ಬೆಳಗ್ಗೆ 8 ಗಂಟೆಯಲ್ಲಿ ಭಾಷ್ಯಂ ಸರ್ಕಲ್‌ನಲ್ಲಿ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ರಾಮಲಿಂಗಾರೆಡ್ಡಿ, ಪ್ರಿಯಾಂಕ್ ಖರ್ಗೆ, ರಮೇಶ್ ಬಾಬು, ಉಮಾ ಬಾಯಿ, ಅನೂಪ್ ಅಯ್ಯಂಗರ್, ರಶ್ಮಿ ಸೇರಿದಂತೆ 30 ಮಂದಿ ರಸ್ತೆ ಅಗಲೀಕರಣ ಮತ್ತು ಸೇತುವೆ ನಿರ್ಮಾಣ ವಿರೋಧಿಸಿ ಪ್ರತಿಭಟನೆ ನಡೆಸಿದ್ದರು.
ಈ ಕುರಿತು ವೈಯಾಲಿಕಾವಲ್ ಠಾಣೆ ಪೊಲೀಸರು ಸ್ವಯಂದೂರು ದಾಖಲಿಸಿಕೊಂಡಿದ್ದಾರೆ. ಡಿಕೆಶಿ, ರಾಮಲಿಂಗಾರೆಡ್ಡಿ, ಪ್ರಿಯಾಂಕ್ ಖರ್ಗೆ, ರಮೇಶ್ ಬಾಬು ಸೇರಿದಂತೆ 30 ಮಂದಿಯ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. ಅನುಮತಿ ಪಡೆಯದೆ ಅತಿಕ್ರಮವಾಗಿ ಗುಂಪು ಸೇರಿ ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಪರಿಣಾಮ ಹೈಕೋರ್ಟ್ ಆದೇಶ ಉಲ್ಲಂಘನೆ ಮಾಡಿದ್ದು, ಸಾರ್ವಜನಿಕರ ಓಡಾಟಕ್ಕೆ ತೊಂದರೆ ಉಂಟಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಬರ್ತ್ಡೇ ಪಾರ್ಟಿಯಲ್ಲಿ ಚಿತ್ರನಟನ ಮೇಲೆ ಹಲ್ಲೆ; ಆಡಿ ಕಾರಿನ ಗಾಜುಗಳು ಧ್ವಂಸ
ಹಠಾತ್ ಹೃದಯಾಘಾತಕ್ಕೆ ಮತ್ತೆರಡು ಬಲಿ; ಕ್ರಿಕೆಟ್ ಆಡುತ್ತಲೇ ಕುಸಿದು ಬಿದ್ದ ಆಟಗಾರರ ಸಾವು