More

    ಚುನಾವಣಾ ಅಧಿಕಾರಿಯ ದೂರಿನ ಹಿನ್ನೆಲೆಯಲ್ಲಿ ಮಾಜಿ ಸಚಿವರ ಮೇಲೆ ಎಫ್​ಐಆರ್​!

    ಬೆಂಗಳೂರು: ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ಮೇಲೆ ಎಫ್​ಐಆರ್​ ದಾಖಲಾಗಿದೆ.

    ಚುನಾವಣಾ ಅಧಿಕಾರಿ ಲಕ್ಷ್ಮಣ್ ದೂರು ನೀಡಿದ ಹಿನ್ನೆಲೆಯಲ್ಲಿ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ. ಕೃಷ್ಣಯ್ಯ ಶೆಟ್ಟಿ ಗಾಂಧಿನಗರದ ಟಿಕೆಟ್ ಆಕಾಂಕ್ಷಿಯಾಗಿದ್ದು ಗಾಂಧಿನಗರ ಕ್ಷೇತ್ರದ ಹೆಸರು ಮತ್ತು ಕೃಷ್ಣಯ್ಯ ಶೆಟ್ಟಿ ಹೆಸರಲ್ಲಿ ಪುಡ್ ಕಿಟ್ ತಯಾರಿ ಮಾಡಲಾಗುತ್ತಿತ್ತು.

    ಈ ವೇಳೆ ಚುನಾವಣಾ ಅಧಿಕಾರಿಗಳು ಹಾಗೂ ಪೊಲೀಸರು ಖಚಿತ ಮಾಹಿತಿ ಆಧರಿಸಿ ದಾಳಿ ಮಾಡಿದ್ದರು. ದಾಳಿಯ ಸಂದರ್ಭ ಅಕ್ಕಿ, ಬೆಳೆ, ಬೆಲ್ಲ, ಡ್ರೈಪ್ರೂಟ್ಸ್, ಆಡುಗೆ ಎಣ್ಣೆ ಸೇರಿದಂತೆ ಗೃಹ ಬಳಕೆ ದಿನಸಿ ವಶಕ್ಕೆ ಪಡೆದಿದ್ದರು. ಈ ಸಂದರ್ಭ ಸುಮಾರು ಏಳೆಂಟು ಲಕ್ಷಕ್ಕೂ ಅಧಿಕ ಮೌಲ್ಯದ ವಸ್ತುಗಳು ಪತ್ತೆಯಾಗಿತ್ತು.

    ಸದ್ಯ ಪ್ರಕರಣ ದಾಖಲಿಸಿಕೊಂಡು ಕೃಷ್ಣಯ್ಯ ಶೆಟ್ಟಿಗೆ ನೊಟೀಸ್ ನೀಡಲು ಪೊಲೀಸರು ಮುಂದಾಗಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts