More

    ಗಂಡ-ಹೆಂಡತಿ ಜಗಳದ ದುರ್ಲಾಭ ಪಡೆಯಲು ಯತ್ನಿಸಿದ ಪೊಲೀಸ್​; ಇನ್​ಸ್ಪೆಕ್ಟರ್​-ಎಎಸ್​ಐ ವಿರುದ್ಧ ದಾಖಲಾಯಿತು ಎಫ್​​ಐಆರ್​

    ಬೆಂಗಳೂರು: ಗಂಡ-ಹೆಂಡತಿಯ ಜಗಳದಲ್ಲಿ ದುರ್ಲಾಭ ಪಡೆಯಲು ಯತ್ನಿಸಿದ ಪೊಲೀಸ್ ಇನ್​ಸ್ಪೆಕ್ಟರ್ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ಎಫ್​ಐಆರ್ ದಾಖಲಿಸಿದೆ. ಬೆಂಗಳೂರಿನ ಕೆ.ಆರ್. ಪುರ ಠಾಣೆಯಲ್ಲಿ ಇನ್​ಸ್ಪೆಕ್ಟರ್ ಆಗಿದ್ದ ಜಯರಾಜ್​ ಆರೋಪಿ. ಅಲ್ಲದೆ ಎಎಸ್​ಐ ಶಿವಕುಮಾರ್ ಎಂಬವರ ವಿರುದ್ಧವೂ ಎಫ್​ಐಆರ್ ದಾಖಲಾಗಿದೆ.

    ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಸಂಜು ರಾಜನ್ ಎಂಬವರ ವಿರುದ್ಧ ಆಕೆಯ ಪತ್ನಿ ದೂರು ದಾಖಲಿಸಿದ್ದರು. ಹೀಗಾಗಿ ಬಂಧನಕ್ಕೆ ಒಳಗಾಗಿದ್ದ ಸಂಜು ರಾಜನ್ ಬಳಿಕ ಜಾಮೀನಿನ ಮೇರೆಗೆ ಹೊರಬಂದಿದ್ದರು. ನಂತರ ಪ್ರತಿವಾರ ಠಾಣೆಗೆ ಆಗಮಿಸಿ ಸಹಿ ಮಾಡಲು ಸಂಜು ಅವರಿಂದ ಪೊಲೀಸರು 500ರಿಂದ 10 ಸಾವಿರ ರೂ. ವರೆಗೆ ಬೇಡಿಕೆ ಇಟ್ಟಿದ್ದರು ಎಂಬ ಆರೋಪವಿದೆ.

    ಇದನ್ನೂ ಓದಿ: ಒಬ್ಬನೇ ಆರೋಪಿ ಮನೆಯಲ್ಲಿ ಸಿಕ್ತು 10 ಕೋಟಿ ರೂ. ಮೌಲ್ಯದ ತಿಮಿಂಗಿಲ ವಾಂತಿ; 1.5 ಕೋಟಿ ರೂ. ಬೆಲೆಯ ಆ್ಯಂಬರ್ ಗ್ರೀಸ್​ ಕೇಸ್​ಗೆ ಮೇಜರ್ ಟ್ವಿಸ್ಟ್

    ಜಯರಾಜ್​ ಸದ್ಯ ಸಿಐಡಿಯಲ್ಲಿ ಕೆಲಸ ಮಾಡುತ್ತಿದ್ದು, ಶಿವಕುಮಾರ್​ ಕೆ.ಆರ್.ಪುರ ಠಾಣೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಲಂಚ ಪಡೆದ ಬಗ್ಗೆ ದೂರು ಪಡೆದು ತನಿಖೆ ನಡೆಸಿದ ಎಸಿಬಿ ಅಧಿಕಾರಿಗಳು, ಇನ್​ಸ್ಪೆಕ್ಟರ್​ ವಿರುದ್ಧ ಕ್ರಮಕ್ಕೆ 17ಎ ಅಡಿ ಸಕ್ಷಮ ಪ್ರಾಧಿಕಾರಕ್ಕೆ ಪತ್ರ ಬರೆದಿದ್ದರು. ಅಲ್ಲಿಂದ ಅನುಮತಿ ಸಿಕ್ಕ ಬಳಿಕ ಇಬ್ಬರ ವಿರುದ್ಧವೂ ಎಫ್​ಐಆರ್ ದಾಖಲಿಸಿದ್ದಾರೆ.

    ಅವನಿಂದ ಅವಳಿಗೆ ಕರಿಮಣಿ ಪ್ರಯೋಗ; ಮಾವನ ಮನೆಯಲ್ಲಿ ಆತನಿಗೇ ಕತ್ತರಿ ಪ್ರಯೋಗ; ತಪ್ಪಿಹೋಯ್ತು ಸಂಸಾರದ ವ್ಯಾಕರಣ!

    ಸಾರ್ವಜನಿಕರೇ ಹುಷಾರು.. ಈಗಾಗಲೇ ಜಗತ್ತಿನಲ್ಲಾಗಿದೆ ಕರೊನಾ ನಾಲ್ಕನೇ ಅಲೆ ಶುರು!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts