More

    ರಮೇಶ್ ಜಾರಕಿಹೋಳಿ ವಿರುದ್ಧ ಎಫ್ಐಆರ್; ಅಪೆಕ್ಸ್ ಬ್ಯಾಂಕ್‌ನಿಂದ 232 ಕೋಟಿ ರೂ. ಸಾಲ

    ಬೆಂಗಳೂರು: ಸಕ್ಕರೆ ಕಾರ್ಖಾನೆಗೆ 232 ಕೋಟಿ 88 ಲಕ್ಷ ರೂ. ಸಾಲ ಪಡೆದು ಮರುಪಾವತಿ ಮಾಡಿಲ್ಲವೆಂದು ಆರೋಪಿಸಿ ಶಾಸಕ ರಮೇಶ್ ಜಾರಕಿಹೊಳಿ ಮತ್ತು ಇತರರ ವಿರುದ್ಧ ವಿಶ್ವೇಶ್ವರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಚಾಮರಾಜಪೇಟೆ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ಕೇಂದ್ರ ಕಚೇರಿ ಪ್ರಧಾನ ವ್ಯವಸ್ಥಾಪಕ (ಬ್ಯಾಂಕಿಂಗ್) ರಾಜಣ್ಣ ದೂರು ಸಲ್ಲಿಸಿದ್ದಾರೆ. ಬೆಳಗಾವಿ ಜಿಲ್ಲೆ ಗೋಕಾಕ್ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಲಿಮಿಟೆಡ್ ಕಂಪನಿ ಅಧ್ಯಕ್ಷ, ವ್ಯವಸ್ಥಾಪಕ ನಿರ್ದೇಶಕ ರಮೇಶ್ ಜಾರಕಿಹೊಳಿ, ನಿರ್ದೇಶಕರಾದ ವಸಂತ್ ವಿ.ಪಾಟೀಲ್ ಮತ್ತು ಶಂಕರ್ ಎ.ಪಾವಡೆ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಆರೋಪಿತರು 2023ರ ಆಗಸ್ಟ್ 31ರ ವೇಳೆಗೆ 439 ಕೋಟಿ 7 ಲಕ್ಷ ರೂ. ಬಾಕಿ ಉಳಿಸಿಕೊಂಡಿದ್ದಾರೆ. ಬ್ಯಾಂಕ್‌ಗೆ ಮೋಸ ಮಾಡುವ ಉದ್ದೇಶದಿಂದ ಷರತ್ತು ಉಲ್ಲಂಸಿದ್ದು, ಆರೋಪಿತರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ದೂರಿನಲ್ಲಿ ಮನವಿ ಮಾಡಲಾಗಿದೆ.
    ಬ್ಯಾಂಕ್ ವಂಚನೆ ಮತ್ತು ನೂರಾರು ಕೋಟಿ ರೂ. ವಂಚನೆ ಪ್ರಕರಣವಾದ ಹಿನ್ನೆಲೆಯಲ್ಲಿ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಲಿಮಿಟೆಡ್ ಕಂಪನಿ ವಿರುದ್ಧದ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸುವ ಸಾಧ್ಯತೆ ಇದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts