More

    ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್​ಐಆರ್​ ದಾಖಲು

    ಕೊಡಗು: ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ.

    ಟಿಪ್ಪು ಜಯಂತಿ ಮೂಲಕ ಕೊಡವರ ಸಿಟ್ಟಿಗೆ ಗುರಿಯಾಗಿದ್ದ ಮಾಜಿ ಸಿಎಂ ಸಿದ್ದರಾಮಯ್ಯ, ಇದೀಗ ಗೋಮಾಂಸ ವಿಚಾರದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ‘ಕೊಡವರು ಕೂಡ ಗೋಮಾಂಸ ತಿನ್ನುತ್ತಾರೆ’ ಎಂದಿದ್ದ ಸಿದ್ದರಾಮಯ್ಯ ವಿರುದ್ಧ ಕೊಡವರು ಸಿಡಿದೆದ್ದಿದ್ದರು. ಕೊಡವರು ಗೋವನ್ನು ಪೂಜ್ಯನೀಯ ದೃಷ್ಟಿಯಿಂದ ಕಾಣುತ್ತಾರೆ. ಅಲ್ಲದೆ ಕೊಡಗಿನಲ್ಲಿ ಗೋಹತ್ಯೆ, ಗೋಮಾಂಸ ಭಕ್ಷಣೆ ನಿಷೇಧವಿದೆ. ಬ್ರಿಟಿಷರ ಕಾಲದಿಂದಲೂ ಈ ನಿಯಮ ಜಾರಿಯಲ್ಲಿದೆ. ಹೀಗಿರುವಾಗ ಕೊಡವರು ಗೋಮಾಂಸ ತಿನ್ನುತ್ತಾರೆ ಅನ್ನೋದು ತಪ್ಪು. ಮಾಜಿ ಸಿಎಂ ಸಿದ್ದರಾಮಯ್ಯ ತನ್ನ ಹೇಳಿಕೆಯನ್ನ ಹಿಂಪಡೆಯುವ ಮೂಲಕ ಬಹಿರಂಗವಾಗಿ ಕ್ಷಮೆ ಕೋರಬೇಕು ಎಂಬ ಆಗ್ರಹಿಸಿದ್ದರು. ಇದನ್ನೂ ಓದಿರಿ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುಲು ಆ ಐವರು ಕಾರಣ, ಹಾಗಾಗಿ ಈಶ್ವರಪ್ಪಗೆ ಸಿಎಂ ಗಾದಿ ಕೊಡಿ…

    ವಿವಾದಾತ್ಮಕ ಹೇಳಿಕೆ ನೀಡಿದ್ದ ಸಿದ್ದರಾಮಯ್ಯಗೆ ಸಂಸದ ಪ್ರತಾಪ್​ ಸಿಂಹ, ಮಡಿಕೇರಿ ಶಾಸಕ ಅಪ್ಪಚ್ಚು ರಂಜನ್​, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಸಚಿವ ಪ್ರಭು ಚೌವಾಣ್​​, ಕಾವೇರಿ ಸೇನೆ ಸಂಚಾಲಕ ರವಿ ಚಂಗಪ್ಪ ಸೇರಿದಂತೆ ಹಲವರು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದರು.

    ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್​ಐಆರ್​ ದಾಖಲುತೀವ್ರ ಆಕ್ಷೇಪ ವ್ಯಕ್ತವಾಗುತ್ತಿದ್ದಂತೆ ಎಚ್ಚೆತ್ತ ಸಿದ್ದರಾಮಯ್ಯ, ‘ಕೊಡವರೂ ಬೀಪ್ ತಿನ್ನುತ್ತಾರೆ ಎಂಬ ನನ್ನ ಹೇಳಿಕೆ ತಪ್ಪುಗ್ರಹಿಕೆಯಿಂದ ಮಾಧ್ಯಮಗಳಲ್ಲಿ ವರದಿಯಾಗಿದೆ. ಇದರಿಂದ ಕೊಡವ ಸಮುದಾಯಕ್ಕೆ ನೋವಾಗಿದ್ದರೆ ಈ ಬಗ್ಗೆ ವಿಷಾದಿಸುತ್ತೇನೆ. ನನ್ನ ನೆರೆಯ ಜಿಲ್ಲೆಯಾದ ಕೊಡಗಿನ ಸಂಸ್ಕೃತಿ ಬಗ್ಗೆ ನನಗೆ ಅರಿವಿದೆ, ವಿಶೇಷವಾದ ಗೌರವವೂ ಇದೆ’ ಎಂದು ಟ್ವೀಟ್​ ಮೂಲಕ ಕ್ಷಮೆ ಕೋರಿದ್ದರು. ಇಷ್ಟಕ್ಕೆ ಸುಮ್ಮನಾಗದ ಕೊಡವರು ಬಹಿರಂಗವಾಗಿಯೇ ಕ್ಷಮೆ ಕೇಳಬೇಕು ಎಂದು ಆಗ್ರಹಿಸುತ್ತಲೇ ಬಂದಿದ್ದರು.

    ಪಶ್ಚಿಮಘಟ್ಟ ಸಂರಕ್ಷಣಾ ಸಮಿತಿ ಅಧ್ಯಕ್ಷ ರವಿ ಕುಶಾಲಪ್ಪ ಎಂಬುವವರು ಕೊಡವರು ಗೋಮಾಂಸ ತಿನ್ನುತ್ತಾರೆಂಬ ಸಿದ್ದರಾಮಯ್ಯ ಹೇಳಿಕೆಯಿಂದ ಕೊಡವರ ಭಾವನೆಗೆ ಧಕ್ಕೆಯಾಗಿದೆ ಎಂದು ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ದೂರು ಆಧರಿಸಿ ಸಿಆರ್‌ಪಿಸಿ ಕಾಯ್ದೆ 153 ಅನ್ವಯ ಸಿದ್ದರಾಮಯ್ಯ ವಿರುದ್ಧ ಎಫ್​ಐಆರ್​ ದಾಖಲಾಗಿದೆ.

    ಕೆಳಗೆ ಬಿದ್ದ ಶಾಸಕಿ ಸೌಮ್ಯರೆಡ್ಡಿ, ತುಳಿದುಕೊಂಡೇ ಮುನ್ನಡೆದ ಕಾರ್ಯಕರ್ತರು! ಕೈ ಪ್ರತಿಭಟನೆ ವೇಳೆ ಅವಘಡ

    ಕೊಡವರ ಸಿಟ್ಟಿಗೆ ಬೆಚ್ಚಿದ ಸಿದ್ದರಾಮಯ್ಯ ಕೊನೆಗೂ ಕ್ಷಮೆ ಕೇಳಿದ್ರು…

    ನಿನ್ ಹೆಂಡ್ತಿಗೆ ಸೀರೆ ತರಲು ಹೋಗಿದ್ಯಾ? ರಾಸ್ಕಲ್​…: ಅಧಿಕಾರಿಗಳ ವಿರುದ್ಧ ನಾಲಿಗೆ ಹರಿಯಬಿಟ್ಟ ಮಾಧುಸ್ವಾಮಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts