ರಕ್ಷಕ್ ಬುಲೆಟ್​​ ವಿರುದ್ಧ ಎಫ್​ಐಆರ್​​ ದಾಖಲು! ಕಾರು ಡಿಕ್ಕಿಯಾಗಿ ಬೈಕ್ ಸವಾರನ ಕಾಲಿನ ಮೂಳೆ ಮುರಿತ.. Rakshak Bullet

rakshak bullet
Published on

Rakshak Bullet  : ದಿವಂಗತ ನಟ ಬುಲೆಟ್​ ಪ್ರಕಾಶ್​​ ಅವರ ಮಗ ರಕ್ಷಕ್  ಕಾರು ಡಿಕ್ಕಿಯಾಗಿ ಯುವಕನ ಕಾಲು ಮೂಳೆ ಮುರಿದಿದ್ದು, ಗಾಯಾಳು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಪ್ರಕರಣದ ಹಿನ್ನೆಲೆಯಲ್ಲಿ ರಕ್ಷಕ್​ ವಿರುದ್ಧ ಎಫ್​ಐಆರ್​ ದಾಖಲಾಗಿದೆ.

ಅಜಾಗರೂಕತೆಯಿಂದ ಜೀಪ್ ಚಲಾಯಿಸಿ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಯ ಗಾಯಗೊಂಡಿರುವ ವೇಣುಗೋಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಾನ್ಯತಾ ಟೆಕ್‌ಪಾರ್ಕ್‌ನ ಶಿವರಾಜ್ ಕುಮಾರ್ ಮನೆ ತಿರುವಿನಲ್ಲಿ ಗುರುವಾರ ಬೆಳಗ್ಗೆ 11:30ರ ಸುಮಾರಿಗೆ ರಕ್ಷಕ್‌ ಬುಲೆಟ್‌ ಅಜಾಗರೂಕತೆಯಿಂದ ಕಾರು ಚಲಾಯಿಸಿ ಬೈಕ್‌ಗೆ ಡಿಕ್ಕಿ ಹೊಡೆದಿದ್ದಾರೆ. ಆಕ್ಸಿಡೆಂಟ್ ಆದ ನಂತರ ಟ್ಯಾಕ್ಸಿಯಲ್ಲಿ ಹೆಬ್ಬಾಳ ಬಳಿಯ ಖಾಸಗಿ ಆಸ್ಪತ್ರೆಗೆ ಯುವಕ ದಾಖಲಾಗಿದ್ದಾರೆ.

ವೇಣುಗೋಪಾಲ ಕಾಲು ಮುರಿದುಕೊಂಡ ಯುವಕ. ಎಡಗಾಲಿನ ಮೂಳೆ ಮುರಿತವಾಗಿದೆ. ಶಿಡ್ಲಘಟ್ಟ ಮೂಲದ ಯುವಕ ವೇಣುಗೋಪಾಲ ಬೆಂಗಳೂರಿನಲ್ಲಿ ಕೆಲಸ ಮಾಡಿಕೊಂಡಿದ್ದ. ವೇಣುಗೋಪಾಲ ಮತ್ತು ಸ್ನೇಹಿತೆ ಬೈಕ್‌ನಲ್ಲಿ ಬರುತ್ತಿದ್ದಾಗ ಈತನ ಬೈಕ್ ಮತ್ತು ರಕ್ಷಕ್ ಕಾರು ಡಿಕ್ಕಿಯಾಗಿದೆ.

ಅಪಘಾತದ ತೀವ್ರತೆಗೆ ಯುವಕನ ಎಡಗಾಲಿನ ಮೂಳೆ ಮುರಿತವಾಗಿದೆ. ಶಿಡ್ಲಘಟ್ಟ ಮೂಲದ ಯುವಕ ವೇಣುಗೋಪಾಲ ಬೆಂಗಳೂರಿನಲ್ಲಿ ಕೆಲಸ ಮಾಡಿಕೊಂಡಿದ್ದ. ಸದ್ಯ ಹೆಣ್ಣೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net