ಸಿನಿಮಾ

ಸಿದ್ದರಾಮಯ್ಯ ವಿರುದ್ಧ ಹೇಳಿಕೆಗೆ ಮೈಸೂರಿನಲ್ಲಿ ಮಾಜಿ ಸಚಿವ ಅಶ್ವಥ್ ನಾರಾಯಣ್ ವಿರುದ್ಧ ಎಫ್‌ಐಆರ್

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆ ಪ್ರತಿಪಕ್ಷ ನಾಯಕರಾಗಿದ್ದ ಸಂದರ್ಭ ಪ್ರಚೋದನಕರಿ ಹೇಳಿಕೆ ನೀಡಿದ್ದ ಮಾಜಿ ಸಚಿವ, ಶಾಸಕ ಡಾ.ಸಿ. ಎನ್. ಅಶ್ವಥ್ ನಾರಾಯಣ್ ವಿರುದ್ಧ ನಗರದ ದೇವರಾಜ ಪೊಲೀಸ್ ಠಾಣೆಯಲ್ಲಿ ಬುಧವಾರ ಪ್ರಕರಣ ದಾಖಲಾಗಿದೆ.

ಮಂಡ್ಯದ ಸಾತನೂರು ಗ್ರಾಮದ ಹೊರವಲಯದ ಕಂಬದನರಸಿಂಹಸ್ವಾಮಿ ದೇವಾಲಯದ ಆವರಣದಲ್ಲಿ ಫೆ.14 ರಂದು ಹಮ್ಮಿಕೊಂಡಿದ್ದ ಬಿಜೆಪಿ ಮಹಾಶಕ್ತಿ ಕೇಂದ್ರದ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ್ದ ಡಾ.ಸಿ.ಎನ್. ಅಶ್ವಥ್ ನಾರಾಯಣ್ ‘ಉರಿಗೌಡ ಹಾಗೂ ನಂಜೇಗೌಡರು ಟಿಪ್ಪುವನ್ನು ಹೊಡೆದು ಹಾಕಿದ ರೀತಿಯಲ್ಲಿ ಸಿದ್ದರಾಮಯ್ಯ ಅವರನ್ನು ಹೊಡೆದು ಹಾಕಬೇಕು’ ಎಂದು ಕರೆ ನೀಡಿದ್ದರು.

ಈ ಕುರಿತು ಈ ಹಿಂದೆಯೇ ಕಾಂಗ್ರೆಸ್ ಮುಖಂಡರು ದೂರು ನೀಡಿದರೂ ಪೊಲೀಸರು ಅಶ್ವಥ್ ನಾರಾಯಣ್ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರಲಿಲ್ಲ. ಇದೀಗ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ದೇವರಾಜ ಪೊಲೀಸ್ ಠಾಣೆಗೆ ಎರಡನೇ ಬಾರಿ ತೆರಳಿ ದೂರು ನೀಡಿದರು. ಇದೀಗ ಪೊಲೀಸರು ದೂರನ್ನು ಸ್ವೀಕರಿಸಿ ಐಪಿಸಿ ಸೆಕ್ಷನ್ 506 (ಕ್ರಿಮಿನಲ್ ಬೆದರಿಕೆ), 153 (ಗಲಬೆ ಉಂಟು ಮಾಡಲು ಪ್ರಚೋದಿ ಸುವುದು) ಅಡಿಯಲ್ಲಿ ಅಶ್ವಥ್ ನಾರಾಯಣ್ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.

Latest Posts

ಲೈಫ್‌ಸ್ಟೈಲ್