More

    ಮತದಾರರಿಗೆ ಹಣ ಹಂಚಿದ ಆರೋಪ: ಮುನಿರತ್ನ ವಿರುದ್ಧ ಬಿತ್ತು ಎಫ್​ಐಆರ್

    ಬೆಂಗಳೂರು: ರಾಜರಾಜೇಶ್ವರಿನಗರ ವಿಧಾನಸಭಾ ಉಪಚುನಾವಣೆಯಲ್ಲಿ ಮತದಾರರಿಗೆ ಹಣ ಹಂಚಿಕೆ ಮಾಡಲಾಗುತ್ತಿದೆ ಎಂದು ಕಾಂಗ್ರೆಸ್ ಹಾಗೂ ಬಿಜೆಪಿ ಮುಖಂಡರು ಪರಸ್ಪರ ಆರೋಪಿಸಿ ಪೊಲೀಸರಿಗೆ ದೂರು ಕೊಟ್ಟಿದ್ದಾರೆ. 

    ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ಕೊಟ್ಟ ದೂರಿನ ಮೇರೆಗೆ ಬಿಜೆಪಿ ಅಭ್ಯರ್ಥಿ ಮುನಿರತ್ನ ಹಾಗೂ ಬಿಜೆಪಿ ಕಾರ್ಯಕರ್ತ ಪುನೀತ್‌ಕುಮಾರ್ ಎಂಬಾತ ಕೊಟ್ಟ ದೂರಿನ ಮೇರೆಗೆ ಕಾಂಗ್ರೆಸ್ ಪಕ್ಷದ ಎಂಎಲ್‌ಸಿ ನಾರಾಯಣಸ್ವಾಮಿ ವಿರುದ್ಧ ಯಶವಂತಪುರ ಠಾಣೆ ಪೊಲೀಸರು ಪ್ರಕರಣ ದಾಖಲಾಗಿದೆ.

    ಆರ್.ಆರ್.ನಗರದ ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರು, ತನಗೆ ಮತ ಹಾಕಿದರೆ 5 ಸಾವಿರ ರೂ. ನೀಡುವುದಾಗಿ ಮತದಾರರಿಗೆ ಆಮಿಷವೊಡ್ಡುತ್ತಿದ್ದಾರೆ. ಅವರ ಬೆಂಬಲಿಗರು ನಸ್ರತುಲ್ಲಾ ಖಾನ್, ಜಮೀಲ್, ಇಸ್ಮಾಯಿಲ್, ದಿಲ್ಶದ್, ಸುನಿತಾ ಶ್ರೀನಿವಾಸ್ ಮೂರ್ತಿ ಸೇರಿದಂತೆ ಹಲವರಿಗೆ ಹಣದ ಆಮಿಷವೊಡ್ಡಿದ್ದಾರೆ ಎಂದು ಆರೋಪಿಸಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ಅವರು ದೂರು ಕೊಟ್ಟಿದ್ದರು. ಈ ಕುರಿತು ಎನ್‌ಸಿಆರ್ (ಗಂಭೀರ ಸ್ವರೂಪವಲ್ಲದ ಪ್ರಕರಣ) ದಾಖಲಿಸಲಾಗಿತ್ತು.

    ವಿಧಾನಪರಿಷತ್ ಸದಸ್ಯ ನಾರಾಯಣಸ್ವಾಮಿ ಹಾಗೂ ಅವರ ಬೆಂಬಲಿಗರು ಎಚ್‌ಎಂಟಿ ಲೇಔಟ್‌ನ ಗಣೇಶ ದೇವಸ್ಥಾನದ ಬಳಿ ಮತದಾರರಿಂದ ಗುರುತಿನ ಚೀಟಿ ಹಾಗೂ ಫೋನ್ ನಂಬರ್ ಸಂಗ್ರಹಿಸುತ್ತಿದ್ದರು. ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಮತ ಹಾಕಿದರೆ ಹಣ ನೀಡುವುದಾಗಿ ಮತದಾರರಿಗೆ ಹೇಳುತ್ತಿದ್ದರು. ಇದನ್ನು ಪ್ರಶ್ನಿಸಿದ್ದಕ್ಕೆ ಅವಾಚ್ಯವಾಗಿ ನಿಂದಿಸಿ, ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಬಿಜೆಪಿ ಅಭ್ಯರ್ಥಿ ಪುನೀತ್‌ಕುಮಾರ್ ದೂರು ಕೊಟ್ಟಿದ್ದರು. ಎನ್‌ಸಿಆರ್ ದಾಖಲಿಸಿಕೊಳ್ಳಲಾಗಿತ್ತು. ಈ ಎರಡು ಪ್ರಕರಣಗಳ ಕುರಿತು 24ನೇ ಎಸಿಎಂಎಂ ನ್ಯಾಯಾಲಯದ ಸೂಚನೆ ಮೇರೆಗೆ ಪ್ರತ್ಯೇಕವಾಗಿ ಎ್ಐಆರ್ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts