More

    ಒಕ್ಕಲಿಗರ ವಿರುದ್ಧ ಅವಹೇಳನಕಾರಿ ಹೇಳಿಕೆ: ಪ್ರೊ. ಭಗವಾನ್ ವಿರುದ್ಧ ಕೊನೆಗೂ ಎಫ್​ಐಆರ್​ ದಾಖಲು

    ಮೈಸೂರು: ಒಕ್ಕಲಿಗರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಪ್ರೊ. ಕೆ.ಎಸ್​. ಭಗವಾನ್ ವಿರುದ್ಧ ಕೊನೆಗೂ ಎಫ್​ಐಆರ್​ ದಾಖಲಾಗಿದೆ.

    ಮೈಸೂರಿನ ಗಂಗಾಧರ್ ಎಂಬುವವರು ನೀಡಿದ ದೂರಿನ ಆಧಾರದ ಮೇಲೆ ಐಪಿಸಿ ಸೆಕ್ಷನ್ 153 ಹಾಗೂ 153A ಅಡಿಯಲ್ಲಿ ದೇವರಾಜ ಪೊಲೀಸ್ ಠಾಣೆಯಲ್ಲಿ ಎಫ್ಐಆರ್​ ದಾಖಲಾಗಿದೆ. ಗಂಗಾಧರ್ ಅವರು ಕರ್ನಾಟಕ ರಾಜ್ಯ ಒಕ್ಕಲಿಗ ಸಂಘದ ನಿರ್ದೇಶಕರು.

    ಪ್ರೊ. ಭಗವಾನ್ ಶ್ರೀರಾಮ ಹಾಗೂ ಒಕ್ಕಲಿಗ ಸಮುದಾಯದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುತ್ತಾರೆ ಎಂದು ಆರೋಪಿಸಿ ದೂರು ದಾಖಲಿಸಿದ ಹಿನ್ನೆಲೆಯಲ್ಲಿ ಎಫ್​ಐಆರ್ ದಾಖಲಿಸಲಾಗಿದೆ.

    ಇದನ್ನೂ ಓದಿ: ಹೊಸ ಪವರ್​ಸೆಂಟರ್ ಬೀಜಾಂಕುರ: ಡಿಕೆಶಿಗೆ ಪರ್ಯಾಯ ಶಕ್ತಿ ಸೃಷ್ಟಿ ಕಸರತ್ತು; ಸಮಾನ ಮನಸ್ಕರಿಗೆ ಜಾರಕಿಹೊಳಿ ಸಾರಥ್ಯ

    ಅ. 13ರಂದು ಮೈಸೂರಿನ ಟೌನ್‌ಹಾಲ್ ಬಳಿ ಮಹಿಷ ದಸರಾ ಕಾರ್ಯಕ್ರಮ ನಡೆಯಿತು. ಈ ವೇಳೆ ಮಾತನಾಡಿದ ಕೆ.ಎಸ್.ಭಗವಾನ್, ಒಕ್ಕಲಿಗರು ಸಂಸ್ಕೃತಿ ಹೀನರು ಹಾಗೂ ಪ್ರಾಣಿಗಳು ಎಂಬ ಮಾತುಗಳನ್ನಾಡಿ ಸಾರ್ವತ್ರಿಕವಾಗಿ ಅಪಮಾನ ಮಾಡಿದರು. ಅಲ್ಲದೆ, ಹಿಂದು ಧರ್ಮ ಹಾಗೂ ಶ್ರೀರಾಮ, ಸೀತಾದೇವಿ, ಭಗವದ್ಗೀತೆ ಬಗ್ಗೆ ತೀರಾ ಹಗುರವಾದ ಮಾತನಾಡಿ ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಕೆಲಸ ಮಾಡಿದ್ದಾರೆ ಎಂದು ಆರೋಪ ಕೇಳಿಬಂದಿದೆ.

    ಕೆ.ಎಸ್.ಭಗವಾನ್ ವಿರುದ್ಧ ಒಕ್ಕಲಿಗರು ಆಕ್ರೋಶ ವ್ಯಕ್ತಪಡಿಸಿ, ಸಾಲು ಸಾಲು ಪ್ರತಿಭಟನೆಗಳನ್ನು ನಡೆಸಿದ್ದರು. ರಾಜ್ಯದ ಅನೇಕ ಪೊಲೀಸ್​ ಠಾಣೆಗಳಲ್ಲಿ ಭಗವಾನ್​ ವಿರುದ್ಧ ಒಕ್ಕಲಿಗ ಸಂಘಟನೆಗಳು ದೂರು ಸಹ ದಾಖಲಿಸಿದ್ದವು. ಅಂತಿಮವಾಗಿ ಮೈಸೂರಿನ ದೇವರಾಜ ಪೊಲೀಸ್​ ಠಾಣೆಯಲ್ಲಿ ಭಗವಾನ್​ ವಿರುದ್ಧ ಎಫ್​ಐಆರ್​ ದಾಖಲಾಗಿದೆ.

    ಒಕ್ಕಲಿಗರ ಅವಹೇಳನ ಮಾಡಿದ ಕೆ.ಎಸ್.ಭಗವಾನ್ ವಿರುದ್ಧ ದೂರು ದಾಖಲಿಸಿ: ಮಂಡ್ಯದಲ್ಲಿ ಪೊಲೀಸರಿಗೆ ಮನವಿ ಸಲ್ಲಿಸಿದ ಬಿಜೆಪಿ

    ಹೊಸ ಪವರ್​ಸೆಂಟರ್ ಬೀಜಾಂಕುರ: ಡಿಕೆಶಿಗೆ ಪರ್ಯಾಯ ಶಕ್ತಿ ಸೃಷ್ಟಿ ಕಸರತ್ತು; ಸಮಾನ ಮನಸ್ಕರಿಗೆ ಜಾರಕಿಹೊಳಿ ಸಾರಥ್ಯ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts