ರಮೇಶ್ ಜಾರಕಿಹೊಳಿ ವಿರುದ್ಧ ದಾಖಲಾಯಿತು ಎಫ್​ಐಆರ್: ಸಾಹುಕಾರ್ ಬಂಧನವಾಗುತ್ತಾ?

ramesh jarakiholi cd
ramesh jarakiholi
Published on

ಬೆಂಗಳೂರು; ಅಶ್ಲೀಲ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿ ನೀಡಿದ ದೂರಿನ ಆಧಾರದ ಮೇಲೆ ಬೆಂಗಳೂರಿನ ಕಬ್ಬನ್ ಪಾರ್ಕ್​ ಪೊಲೀಸ್ ಠಾಣೆಯಲ್ಲಿ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ವಿರುದ್ಧ ಎಫ್​ಐಆರ್ ದಾಖಲಾಗಿದೆ.

ಜಾರಕಿಹೊಳಿ ವಿರುದ್ಧ ಐಪಿಸಿ ಸೆಕ್ಸನ್ 376ಸಿ, 354ಎ, 504, 506, 417  ರ ಅಡಿ ಪ್ರಕರಣ ದಾಖಲಾಗಿದೆ.

ಸಿಡಿಯಲ್ಲಿರುವ ಯುವತಿ, ನನಗೆ ಹಾಗೂ ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ. ರಮೇಶ್ ಜಾರಕಿಹೊಳಿ ಅವರು ನಮ್ಮನ್ನು ಕೊಲೆ ಮಾಡಲು ಹುಡುಕಾಡುತ್ತಿದ್ದಾರೆ. ನನಗೆ ಕೆಲಸ ಕೊಡಿಸುವುದಾಗಿ ನನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಿ ವಕೀಲ ಜಗದೀಶ್ ಎನ್ನುವರ ಮೂಲಕ ಬೆಂಗಳೂರು ಪೊಲೀಸ್ ಆಯುಕ್ತರಿಗೆ ಲಿಖಿತ ದೂರು ಸಲ್ಲಿಸಿದ್ದರು.

ಪೊಲೀಸ್ ಆಯುಕ್ತ ಕಮಲ ಪಂತ್ ಅವರು ದೂರನ್ನು ಕಬ್ಬನ್ ಪಾರ್ಕ್​ ಠಾಣಗೆ ನೀಡುವಂತೆ ತಿಳಿಸಿದ್ದರಿಂದ ಜಗದೀಶ್ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ದೂರು ನೀಡಿದ ಮೇಲೆ ರಮೇಶ್ ಜಾರಕಿಹೊಳಿ ವಿರುದ್ಧ ಎಫ್​ಐಆರ್ ದಾಖಲಾಗಿದೆ. ಎಫ್​ಐಆರ್​ ದಾಖಲಾಗಿರುವುದರಿಂದ ರಮೇಶ್ ಜಾರಕಿಹೊಳಿ ಅವರಿಗೆ ಬಂಧನದ ಭೀತಿ ಕಾಡುತ್ತಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net