22.8 C
Bengaluru
Saturday, January 18, 2020

ರಜೆ ಮೇಲಿದ್ದ ಅಧಿಕಾರಿ ಸಹಿಯಲ್ಲಿ ಎಫ್​ಐಆರ್ ಸಿದ್ಧ !

Latest News

ಬೈಕ್​ ಅಪಘಾತದಲ್ಲಿ ಮೃತ ಪಟ್ಟ ಮಗನ ಅಂಗಾಂಗವನ್ನು ಹಾಸನದ ಹಿಮ್ಸ್​ಗೆ ದಾನ ಮಾಡಿದ ಪಾಲಕರು

ಹಾಸನ: ಅಪಘಾತದಲ್ಲಿ ಮೃತಪಟ್ಟ ಮಗನ ಅಂಗಾಂಗ ದಾನ ಮಾಡಿ ಪಾಲಕರು ಮಾನವೀಯತೆ ಮೆರೆದಿದ್ದಾರೆ. ಹಾಸನ ತಾಲೂಕಿನ ಮರ್ಕೂಲಿ ಗ್ರಾಮದ ರಂಗಸ್ವಾಮಿ ಮತ್ತು ಶಿವಮ್ಮ ದಂಪತಿಯ ಪುತ್ರ ಸಚಿನ್...

PHOTOS| ಅದಮಾರು ಪರ್ಯಾಯ ವೈಭವದ ಶೋಭಯಾತ್ರೆ | ಬೀದಿ, ಬೀದಿಗಳಲ್ಲಿ ಪರ್ಯಾಯ ಸಂಭ್ರಮ

ಉಡುಪಿ: ಕೃಷ್ಣನಗರಿ ಉಡುಪಿ ನಾಡಹಬ್ಬ ಪರ್ಯಾಯ ಅದಮಾರು ಶ್ರೀ ಈಶಪ್ರಿಯ ತೀರ್ಥ ಸ್ವಾಮೀಜಿ ಅವರ ಪರ್ಯಾಯೋತ್ಸವದಲ್ಲಿ ಸಂಭ್ರಮದಿಂದ ಮಿಂದೆದ್ದಿತು. ಸಹಸ್ರಾರು ಮಂದಿ ಭಕ್ತರು...

‘ವಿಜಯವಾಣಿ’ ಫೋನ್ ಇನ್ ಕಾರ್ಯಕ್ರಮದಲ್ಲಿ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್: ಟ್ರಾಫಿಕ್ ಜಾಮ್​ ಸಂಚಾರ ನೀತಿಯ ಸಮಸ್ಯೆ!

ಬಡ್ಡಿ ಆಸೆಗೆ ವಂಚಕ ಕಂಪನಿಗಳಲ್ಲಿ ಹಣ ಹೂಡಿಕೆ ಮಾಡಿ ಮೋಸ ಹೋಗದಂತೆ ಜನರಿಗೆ ಎಚ್ಚರಿಕೆ, ಹೆಣ್ಣಿನ ರಕ್ಷಣೆಗೆ ‘ವೀರವನಿತೆ’ ಪಡೆ, ಸರಗಳ್ಳತನ, ಮನೆಗಳ್ಳತನ, ದರೋಡೆಯಂಥ ಅಪರಾಧ ಕೃತ್ಯ...

ಡ್ರಗ್ಸ್ ನಿಯಂತ್ರಿಸದಿದ್ದರೆ ಶಿಕ್ಷಣ ಸಂಸ್ಥೆ ವಿರುದ್ಧ ಕ್ರಮ; ‘ವಿಜಯವಾಣಿ ಫೋನ್ ಇನ್ ಕಾರ್ಯಕ್ರಮದಲ್ಲಿ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್

ಬಡ್ಡಿ ಆಸೆಗೆ ವಂಚಕ ಕಂಪನಿಗಳಲ್ಲಿ ಹಣ ಹೂಡಿಕೆ ಮಾಡಿ ಮೋಸ ಹೋಗದಂತೆ ಜನರಿಗೆ ಎಚ್ಚರಿಕೆ, ಹೆಣ್ಣಿನ ರಕ್ಷಣೆಗೆ ‘ವೀರವನಿತೆ’ ಪಡೆ, ಸರಗಳ್ಳತನ, ಮನೆಗಳ್ಳತನ, ದರೋಡೆಯಂಥ ಅಪರಾಧ ಕೃತ್ಯ...

PHOTOS| ಕೃಷ್ಣ ಮಠದಲ್ಲಿ ಅದಮಾರು ಪರ್ಯಾಯ ಪರ್ವ ಪ್ರಾರಂಭ ಈಶಪ್ರಿಯ ತೀರ್ಥ ಸ್ವಾಮೀಜಿ ಸರ್ವಜ್ಞ ಪೀಠಾರೋಹಣ

ಉಡುಪಿ: ಉಡುಪಿ ಕೃಷ್ಣ ಮಠದಲ್ಲಿ ಅದಮಾರು ಮಠದ ಪರ್ಯಾಯ ಪರ್ವ ಶನಿವಾರ ಪ್ರಾತಃ 5.57ರ ಶುಭ ಮುಹೂರ್ತದಲ್ಲಿ ಸರ್ವಜ್ಞ ಪೀಠಾರೋಹಣದ ಮೂಲಕ ಪ್ರಾರಂಭವಾಗಿದೆ.ಜೋಡುಕಟ್ಟೆಯಿಂದ...

ಕಾರವಾರ: ರಜೆಯ ಮೇಲೆ ತೆರಳಿದ ಉಪ ನಿರೀಕ್ಷಕನ ಹೆಸರಿನಲ್ಲಿ ಸಹಿ ಮಾಡಿ ನ್ಯಾಯಾಲಯಕ್ಕೆ ಎಫ್​ಐಆರ್ ಸಲ್ಲಿಸಿದ ಪ್ರಕರಣವೊಂದು ಅಬಕಾರಿ ಇಲಾಖೆಯಲ್ಲಿ ಬೆಳಕಿಗೆ ಬಂದಿದೆ.

ಈ ಸಂಬಂಧ ಅಬಕಾರಿ ಉಪ ಆಯುಕ್ತ ವೈ.ಆರ್. ಮೋಹನ್ ಇಬ್ಬರು ಉಪ ನಿರೀಕ್ಷಕರಿಗೆ ನೋಟಿಸ್ ನೀಡಿದ್ದಾರೆ. ಉಪ ನಿರೀಕ್ಷಕರಾದ ಫಸಿಯುದ್ದೀನ್ ಅನ್ಸಾರಿ ಹಾಗೂ ಸಿದ್ಧಾರೂಢ ಲಕ್ಕಶೆಟ್ಟಿ ವಿರುದ್ಧ ಕ್ರಮಕ್ಕಾಗಿ ಮಂಗಳೂರಿನ ಅಬಕಾರಿ ಜಂಟಿ ಆಯುಕ್ತರಿಗೆ ವರದಿ ಮಾಡಿದ್ದಾರೆ.

ಆಗಿದ್ದೇನು?: ಖಾಲಿ ಇದ್ದ ಕಾರವಾರ ವಿಭಾಗದ ಜವಾಬ್ದಾರಿಯನ್ನೂ ಅಬಕಾರಿ ಸಮುದ್ರ ಜಾಗೃತ ದಳದ ಉಪ ನಿರೀಕ್ಷಕರ ಫಸಿಯುದ್ದೀನ್ ಅನ್ಸಾರಿ ಹಲ ದಿನಗಳಿಂದ ನಿರ್ವಹಿಸುತ್ತಿದ್ದರು.ಹೀಗಿರುವಾಗ ಕಾರವಾರ ಅಬಕಾರಿ ವಿಭಾಗಕ್ಕೆ ನ.14 ರಂದು ವರ್ಗವಾಗಿ ಬಂದ ಸಿದ್ಧಾರೂಢ ಲಕ್ಕಶೆಟ್ಟಿ ಅವರಿಗೆ ಜವಾಬ್ದಾರಿ ಹಸ್ತಾಂತರಿಸಿ, ನ.17 ರಿಂದ ರಜೆಯ ಮೇಲೆ ತೆರಳಿದ್ದಾರೆ. ಕೊಂಕಣ ರೈಲ್ವೆ ಜಾಗೃತ ದಳದ ಅಧಿಕಾರಿಗಳು ನ. 18 ರಂದು ಒಂದಿಷ್ಟು ಅಕ್ರಮ ಸಾರಾಯಿಯನ್ನು ಹಿಡಿದು ಅಬಕಾರಿ ಇಲಾಖೆ ಹಸ್ತಾಂತರಿಸುತ್ತಾರೆ. ಅದಕ್ಕೆ ಸಂಬಂಧಿಸಿದ ಎಫ್​ಐಆರ್ ಅಬಕಾರಿ ಇಲಾಖೆಯಲ್ಲಿ ಸಿದ್ಧವಾಗಿದ್ದು, ಅದಕ್ಕೆ ರಜೆಯ ಮೇಲಿದ್ದ ಫಸೀಯುದ್ದೀನ್ ಸಹಿ ಹಾಕಿದ್ದಾರೆ ಎನ್ನಲಾಗಿದೆ. ಇದು ಬೆಳಕಿಗೆ ಬರುತ್ತಿದ್ದಂತೆ ಅಬಕಾರಿ ಉಪ ಆಯುಕ್ತರು ನೋಟಿಸ್ ಜಾರಿ ಮಾಡಿದ್ದಾರೆ. ಸ್ಥಳೀಯ ರಾಜೇಶ ನಾಯ್ಕ ಎಂಬುವವರು ಮಾಹಿತಿ ಹಕ್ಕಿನಡಿ ಪಡೆದ ದಾಖಲೆಗಳು ಇದನ್ನು ಬಹಿರಂಗಪಡಿಸಿವೆ. ಆದರೆ, ಸಹಿಯನ್ನು ಫೋರ್ಜರಿ ಮಾಡಿದರಾ? ನ್ಯಾಯಾಲಯಕ್ಕೆ ಇನ್ನೊಬ್ಬರ ಹೆಸರಲ್ಲಿ ಎಫ್​ಐಆರ್ ಸಲ್ಲಿಸಿ ತಪ್ಪು ಮಾಹಿತಿ ನೀಡಿದರಾ ಎಂಬುದು ತನಿಖೆಯ ನಂತರವಷ್ಟೇ ಬಹಿರಂಗವಾಗಬೇಕಿದೆ.

ಎಫ್​ಐಆರ್ ದಾಖಲಿಸುವ ವ್ಯವಸ್ಥೆ ಮೊದಲೆಲ್ಲ ಮ್ಯಾನ್ಯುವಲ್ ಸ್ವರೂಪದಲ್ಲಿತ್ತು. ಈಗ ಆನ್​ಲೈನ್​ನಲ್ಲಿ ದಾಖಲಿಸಬೇಕಿದೆ. ಹೊಸದಾಗಿ ಉಪ ನಿರೀಕ್ಷಕರೊಬ್ಬರು ಅಧಿಕಾರ ವಹಿಸಿಕೊಂಡರೂ ಅವರ ಲಾಗಿನ್ ಐಡಿ ಕ್ರಿಯೇಟ್ ಆಗಿರಲಿಲ್ಲ. ಇದರಿಂದ ಹಿಂದಿನವರ ಹೆಸರಲ್ಲೇ ಎಫ್​ಐಆರ್ ಸಿದ್ಧ ಮಾಡಿದ್ದಾರೆ ಎನಿಸುತ್ತದೆ. ಈ ಕುರಿತು ಅಬಕಾರಿ ಜಂಟಿ ಆಯುಕ್ತರಿಗೆ ವರದಿ ನೀಡಿದ್ದು, ಅವರು ಕ್ರಮ ವಹಿಸಬೇಕಿದೆ. | ವೈ.ಆರ್. ಮೋಹನ್ ಕಾರವಾರ ಅಬಕಾರಿ ಉಪ ಆಯುಕ್ತ

ವಿಡಿಯೋ ನ್ಯೂಸ್

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...

VIDEO| ಮಗಳ ಸಾವನ್ನು ಮುಂದಿಟ್ಟಕೊಂಡು ರಾಜಕೀಯ ಮಾಡುತ್ತಿದ್ದಾರೆ; ನಿರ್ಭಯಾ ಪ್ರಕರಣದ...

ನವದೆಹಲಿ: ನಿರ್ಭಯಾ ಪ್ರಕರಣ ಅಪರಾಧಿಗಳ ಗಲ್ಲು ಮುಂದೂಡುತ್ತಿರುವುದಕ್ಕೆ ಸಂತ್ರಸ್ಥೆ ತಾಯಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳ ಜತೆ ಮಾತನಾಡಿದ ಅವರು, ಈವರಗೆ ನಾನು ರಾಜಕೀಯದ ಬಗ್ಗೆ ಮಾತನಾಡಿಲ್ಲ. 2012ರಲ್ಲಿ ಪ್ರಕರಣ ನಡೆದಾಗ, ಅದನ್ನು ಖಂಡಿಸಿ...

VIDEO: ಪಕ್ಕೆಲುಬು ಆಯ್ತು…ಈಗ ಪುಳಿಯೊಗರೆ; ಮತ್ತೊಂದು ಸರ್ಕಾರಿ ಶಾಲೆಯಿಂದ ಹೊರಬಿತ್ತು...

ಸಕಲೇಶಪುರ: ಪಕ್ಕೆಲುಬು ಹೇಳಲು ಬಾರದ ವಿದ್ಯಾರ್ಥಿಯ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ ಶಿಕ್ಷಕನೋರ್ವ ವಿವಾದ ಸೃಷ್ಟಿಸಿದ್ದ. ಬಾಲಕ ಪಕ್ಕೆಲುಬು ಹೇಳಲಾಗದೆ ಕಷ್ಟಪಡುತ್ತಿದ್ದರೆ ಅದನ್ನು ವಿಡಿಯೋ ಮಾಡಿದ್ದ ಕುರುವತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ...

ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನಸೆಳೆದಿದ್ದ ಟೀಂ ಇಂಡಿಯಾ ಸೂಪರ್​ ಫ್ಯಾನ್​...

ನವದೆಹಲಿ: ಕಳೆದ ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನ ಸೆಳೆದಿದ್ದ ಟೀಂ ಇಂಡಿಯಾದ ಸೂಪರ್​ ಫ್ಯಾನ್​ ಚಾರುಲತಾ ಪಟೇಲ್​ (87) ನಿಧನರಾಗಿದ್ದಾರೆ. 2019ರಲ್ಲಿ ವಿಶ್ವಕಪ್​ನಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯದಲ್ಲಿ ಚಾರುಲತಾ ಪಟೇಲ್​ ಕ್ಯಾಮರಾಕಣ್ಣಿಗೆ...

VIDEO| ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರೋ ಆಸ್ಟ್ರೇಲಿಯಾ ಮೇಲೆ ವರುಣನ ಕೃಪೆ:...

ಸಿಡ್ನಿ: ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರುವ ಕಾಂಗರೂ ನಾಡು ಆಸ್ಟ್ರೇಲಿಯಾ ಮೇಲೆ ಇದೀಗ ವರುಣ ದೇವ ಕೃಪೆ ತೋರಿದ್ದಾನೆ. ಇದರ ನಡುವೆ 18 ತಿಂಗಳ ಮಗುವೊಂದು ಮೊದಲ ಬಾರಿಗೆ ಮಳೆ ಸುರಿಯುವುದನ್ನು...