17.8 C
Bengaluru
Wednesday, January 22, 2020

ಹೆಂಡತಿ ಮಕ್ಕಳನ್ನು ಕಾಪಾಡು, ಇವತ್ತು ನಾನು ಸಾಯುತ್ತೇನೆ; ಬೆಂಕಿ ಬಿದ್ದ ಕಾರ್ಖಾನೆಯಿಂದ ಫೋನ್​ ಮಾಡಿದ್ದ ಕಾರ್ಮಿಕ

Latest News

ಕರ್ನಾಟಕ ಕುಸ್ತಿ ಹಬ್ಬಫೆ. 15ರಿಂದ

ಧಾರವಾಡ: ಫೆ. 15ರಿಂದ 18ರವರೆಗೆ ನಗರದಲ್ಲಿ ಕರ್ನಾಟಕ ಕುಸ್ತಿ ಹಬ್ಬ ಆಯೋಜಿಸಲಾಗುವುದು. ಅಂತಾರಾಷ್ಟ್ರೀಯ ಕುಸ್ತಿಪಟುಗಳು ಸೇರಿ ಸುಮಾರು 2,000ಕ್ಕೂ ಹೆಚ್ಚು ಕುಸ್ತಿಪಟುಗಳು, ತರಬೇತಿದಾರರು...

ಊರೆಲ್ಲ ಕೊಳ್ಳೆ ಹೊಡೆದ ಮೇಲೆ…

ಲಕ್ಷ್ಮೇಶ್ವರ: ‘ಊರೆಲ್ಲ ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಮುಚ್ಚಿದರು’ ಎಂಬಂತೆ ರೈತರೆಲ್ಲ ಮುಕ್ತ ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಗೆ ಶೇಂಗಾ ಮಾರಾಟ ಮಾಡಿದ...

ಮುರುಘಾಮಠದ ಕಾರ್ಯ ನಾಡಿಗೆ ಮಾದರಿ

ಧಾರವಾಡ: ಜ್ಞಾನ, ದಾಸೋಹ ಸೇವೆಯಲ್ಲಿ ಮುರುಘಾಮಠದ ಮೃತ್ಯುಂಜಯ ಅಪ್ಪಗಳ ಹಾಗೂ ಮಹಾಂತಪ್ಪಗಳ ಕೊಡುಗೆ ಸ್ಮರಣೀಯ. ಅವರ ಆಶಯದಂತೆ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ ಶ್ರೀಮಠವನ್ನು...

ಶರಣರಿಂದ ಸಾಮಾಜಿಕ ನ್ಯಾಯ

ಬ್ಯಾಡಗಿ: 12ನೇ ಶತಮಾನದಿಂದಲೂ ಶಿವಶರಣರು ಸಾಮಾಜಿಕ ಮೌಢ್ಯತೆ ಹಾಗೂ ಧೋರಣೆಗಳ ವಿರುದ್ಧ ಹೋರಾಟ ನಡೆಸಿದ ಪರಿಣಾಮ ಸರ್ವರಿಗೂ ಸಾಮಾಜಿಕ ನ್ಯಾಯ ಸಿಕ್ಕಿದೆ ಎಂದು...

ಗಾಳಿಪಟ ಉತ್ಸವಕ್ಕೆ ತೆರೆ

ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪೋಷಿತ ಕ್ಷಮತಾ ಸೇವಾ ಸಂಸ್ಥೆ ಆಶ್ರಯದಲ್ಲಿ ನಗರದ ಕುಸುಗಲ್ಲ ರಸ್ತೆಯಲ್ಲಿ ಆಯೋಜಿಸಿದ್ದ ಎರಡು ದಿನಗಳ...

ನವದೆಹಲಿ: ಅಣ್ಣ, ಮನೆ ಕಡೆ ಜವಾಬ್ದಾರಿ ಇರಲಿ. ಇವತ್ತು ನಾನು ಸಾಯುತ್ತೇನೆ, ಇನ್ನು ಬದುಕಲು ದಾರಿಯೇ ಕಾಣುತ್ತಿಲ್ಲ…

ಹೀಗೆಂದು ಆತ ಸಾಯುವ ಮುಂಚೆ ತನ್ನ ಅಣ್ಣನಿಗೆ ಕರೆ ಮಾಡಿ ತಿಳಿಸಿದ್ದಾನೆ.

ದೆಹಲಿಯ ಅನಾಜ್​ ಮಂಡಿಯಲ್ಲಿ ಕಳೆದ ನಾಲ್ಕು ವರ್ಷಗಳಿಂದ ಕೆಲಸ ಮಾಡುತ್ತಿದ್ದ ಉತ್ತರಪ್ರದೇಶ ಮೂಲದ ಮುಶ್ರಫ್​ ಅಲಿ ಹೀಗೆ ಕರೆ ಮಾಡಿದ್ದು.

” ಅಣ್ಣ ನಾನು ಇವತ್ತು ಸಾಯುತ್ತೇನೆ. ಇಲ್ಲಿ ಎಲ್ಲ ಕಡೆ ಬೆಂಕಿ ಹರಡಿದೆ. ನಾಳೆ ದೆಹಲಿಗೆ ಬಂದು ನನ್ನ ಮೃತದೇಹ ತೆಗೆದುಕೊಂಡು ಹೋಗು. ಎಲ್ಲ ಕಡೆ ಬೆಂಕಿ ಇದೆ, ಹೊರಗೆ ಬರಲು ಸಾಧ್ಯವೇ ಆಗುತ್ತಿಲ್ಲ. ಇವತ್ತು ನಾನು ಬದುಕುಳಿಯಲು ಸಾಧ್ಯವಿಲ್ಲ. ನನ್ನ ಕುಟುಂಬದ ರಕ್ಷಣೆ ಮಾಡು. ಹೆಂಡತಿ ಮತ್ತು ಮಕ್ಕಳ ಹೊಣೆ ನಿನ್ನದು” ಎಂದು ತಿಳಿಸಿದ್ದಾನೆ.

ನನ್ನ ಸಾವಿನ ಸುದ್ದಿಯನ್ನು ಮನೆಯ ಹಿರಿಯರಿಗೆ ಮೊದಲು ತಿಳಿಸು ಎಂದ ಅಲಿಗೆ ಅಣ್ಣ, ಹೇಗಾದರೂ ಮಾಡಿ ಹೊರಗೆ ಬಾ ಎಂದಿದ್ದಕ್ಕೆ ಇಲ್ಲ, ಇಲ್ಲಿ ಯಾವ ದಾರಿನೂ ಕಾಣಿಸ್ತಾ ಇಲ್ಲ. ಎಲ್ಲ ಕಡೆ ಬೆಂಕಿ, ನನಗೆ ಉಸಿರಾಡಲು ಆಗುತ್ತಿಲ್ಲ ಎಂದಿದ್ದಾನೆ. ಮುಶ್ರಫ್​ ಅಲಿಗೆ ಮೂರು ಹೆಣ್ಣು ಮತ್ತು ಓರ್ವ ಗಂಡು ಮಗುವಿದೆ.

ಭಾನುವಾರ ಬೆಳಗ್ಗೆ 5.22 ಗಂಟೆಗೆ ಬೆಂಕಿ ಕಾಣಿಸಿಕೊಂಡಿತ್ತು. 35 ಅಗ್ನಿಶಾಮಕ ದಳದ ವಾಹನಗಳು ಬೆಂಕಿ ನಂದಿಸಲು ಹರ ಸಾಹಸ ಪಟ್ಟವು. ಅಲ್ಲಿನ ಸಂಧಿಯ ರಸ್ತೆಗಳಲ್ಲಿ ಅಗ್ನಿ ಶಾಮಕ ವಾಹನ ಆಗಮಿಸುವುದೇ ದುಸ್ತರವಾಗಿತ್ತು. (ಏಜೆನ್ಸಿಸ್​)

ವಿಡಿಯೋ ನ್ಯೂಸ್

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...

VIDEO| ಮಂಗಳೂರು ವಿಮಾನ ನಿಲ್ದಾಣ ಬಾಂಬ್​ ಪತ್ತೆ ಪ್ರಕರಣ: ಬಾಂಬ್​...

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಜಾರು ಮೈದಾನದಲ್ಲಿ ಬಾಂಬ್​ ನಿಷ್ಕ್ರಿಯೆ ದಳದಿಂದ ನಡೆದ ಬಾಂಬ್​ ಸ್ಫೋಟ ಪ್ರಕ್ರಿಯೆ ಯಶಸ್ವಿಯಾಗಿದೆ. ಇಂದು ಬೆಳಗ್ಗೆ ಮಂಗಳೂರು ವಿಮಾನ...

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...