ಬಂಡೀಪುರ ಅರಣ್ಯದಲ್ಲಿ ಮತ್ತೆ ಬೆಂಕಿ

ಗುಂಡ್ಲುಪೇಟೆ: ಬಂಡೀಪುರ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಮತ್ತೆ ಬೆಂಕಿ ಕಾಣಿಸಿಕೊಂಡಿದ್ದು, 50 ಎಕರೆಗೂ ಹೆಚ್ಚು ಅರಣ್ಯ ಪ್ರದೇಶ ಸುಟ್ಟು ಹೋಗಿದೆ.


ಶುಕ್ರವಾರ ಮಧ್ಯಾಹ್ನ ಕಣಿಯನಪುರ ಸಮೀಪದ ಹುಂಡಿಗುಡ್ಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಗಾಳಿಗೆ ಬೆಂಕಿಯ ಕೆನ್ನಾಲಿಗೆ ಹರಡಿ ಮರಗಿಡಗಳು ಭಸ್ಮವಾಗಿವೆ.


ಕಿಡಿಗೇಡಿಗಳು ಹುಂಡಿಗುಡ್ಡದಲ್ಲಿ ಬೆಂಕಿ ಹಚ್ಚಿದ್ದರಿಂದ ಹೊತ್ತಿ ಉರಿದಿದೆ. ಬಳಿಕ ಬೆಂಕಿ ನಿಯಂತ್ರಣಕ್ಕೆ ಸಿಗದೆ ಅಪಾರ ಅರಣ್ಯ ನಾಶವಾಗಿದೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸಂಜೆ ವೇಳೆಗೆ ಬೆಂಕಿಯನ್ನು ಆರಿಸಿದ್ದಾರೆ.


ಇತ್ತೀಚೆಗೆ ಮೇಲುಕಾಮನಹಳ್ಳಿ, ಕಾರೇಮಾಳ, ಮಗುವಿನಹಳ್ಳಿಕಾಲನಿ ಗುಡ್ಡಗಳಲ್ಲಿ ಬೆಂಕಿ ಕಾಣಿಸಿಕೊಂಡು 25 ಎಕರೆಗೂ ಹೆಚ್ಚು ಅರಣ್ಯ ಪ್ರದೇಶ ಸುಟ್ಟು ಹೋಗಿತ್ತು. ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳೀಯರ ಸಹಕಾರ ಪಡೆದು ಬೆಂಕಿಯನ್ನು ನಂದಿಸಿದ್ದರು.


ಬೇಸಿಗೆಗೂ ಮೊದಲು ಬಂಡೀಪುರ ಅರಣ್ಯ ವ್ಯಾಪ್ತಿಯಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.

Leave a Reply

Your email address will not be published. Required fields are marked *