

ನವದೆಹಲಿ: ಇಆರನ್ನ ಉತ್ತರ ಭಾಗದಲ್ಲಿರುವ ಪುನರ್ವಸತಿ ಕೇಂದ್ರದಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ 32 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಘಟನೆಯಲ್ಲಿ 15ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಗಿಲಾನ್‌ನ ಕ್ಯಾಸ್ಪಿಯನ್ ಸಮುದ್ರ ಪ್ರಾಂತ್ಯದ ಲಾಂಗರುಡ್‌ನಲ್ಲಿರುವ ಪುನರ್ವಸತಿ ಕೇಂದ್ರದಲ್ಲಿ ದುರಂತ ಸಂಭವೊಇಸಿದ್ದು, ಘಟನೆಯಲ್ಲಿ 15ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಪುನರ್ವಸತಿ ಕೇಂದ್ರದಲ್ಲಿನ ಹೀಟರ್ ಸ್ಪೋಟಗೊಂಡ ಪರಿಣಾಮ ದುರ್ಘಟನೆ ಸಂಭವಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಪುನರ್ವಸತಿ ಕೇಂದ್ರದ ಮ್ಯಾನೇಜರ್ ಸೇರಿದಂತೆ ಇತರರನ್ನು ವಶಕ್ಕೆ ಪಡೆಯಲಾಗಿದೆ. ಘಟನೆಯಲ್ಲಿ 15ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.