More

    ಬಹುಮಹಡಿ ಆಸ್ಪತ್ರೆಯ ನೆಲಮಾಳಿಗೆಯಲ್ಲಿ ಬೆಂಕಿ: ರೋಗಿಗಳು ಬೇರೆಡೆ ಶಿಫ್ಟ್​​​

    ಅಹಮದಾಬಾದ್‌: ಬಹುಮಹಡಿ ಆಸ್ಪತ್ರೆಯ ನೆಲಮಾಳಿಗೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಸುಮಾರು 100 ರೋಗಿಗಳನ್ನು ಸ್ಥಳಾಂತರಿಸಿರುವ ಘಟನೆ ಗುಜರಾತ್‌ನ ಅಹಮದಾಬಾದ್‌ನಲ್ಲಿ ನಡೆದಿದೆ.

    ಇದನ್ನೂ ಓದಿ: ಪಾಕಿಸ್ತಾನ, ಚೀನಾ, ಭಾರತ ಆಯ್ತು.. ಈಗ ಶ್ರೀಲಂಕಾದಿಂದ ಬಂದು ಯುವಕನನ್ನು ವರಿಸಿದ ಯುವತಿ

    ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ರವಿವಾರದಂದು ಬೆಳಗಿನ ಜಾವ 4.30ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ತಂಡಗಳು ಬೆಂಕಿಯನ್ನು ನಿಯಂತ್ರಿಸಲು ಹರಸಾಹಸ ಪಡುತ್ತಿದ್ದಾರೆ. ಆಸ್ಪತ್ರೆಯ ನೆಲಮಾಳಿಗೆಯಿಂದ ಹೊಗೆ ಹೊರಹೊಮ್ಮುತ್ತಲೇ ಇದ್ದು, ಮೇಲಿನ ಮಹಡಿವರೆಗೂ ತಲುಪಿದೆ. ಈ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿರುವ 100ಕ್ಕೂ ಹೆಚ್ಚು ರೋಗಿಗಳನ್ನು ನಗರದ ಇತರೆ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ.

    ಅಗ್ನಿಶಾಮಕ ಅಧಿಕಾರಿ ಜಯೇಶ್ ಖಾದಿಯಾ ಈ ಕುರಿತು ಮಾತನಾಡಿದ್ದು, ಆಸ್ಪತ್ರೆಯ ಎರಡನೇ ನೆಲಮಾಳಿಗೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ಅನಾಹುತಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಸುಮಾರು 20-25 ಅಗ್ನಿಶಾಮಕ ಟೆಂಡರ್‌ಗಳು ಸ್ಥಳದಲ್ಲಿದ್ದು, ಬೆಂಕಿ ನಂದಿಸುವ ಕಾರ್ಯ ಇನ್ನು ಚಾಲ್ತಿಯಲ್ಲಿದೆ ಎಂದು ಹೇಳಿದ್ದಾರೆ.(ಏಜೆನ್ಸೀಸ್​​)

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts