

ಬೆಂಗಳೂರು : ಇಂದು (ಸೆ.15) ಬೆಳಗ್ಗೆ 70ಕ್ಕೂ ಹೆಚ್ಚು ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಿಎಂಟಿಸಿ ಬಸ್‌ಗೆ ಬೆಂಕಿ ಕಾಣಿಸಿಕೊಂಡು ಸಂಪೂರ್ಣ ಬಸ್ ಹೊತ್ತಿ ಉರಿದಿರುವ ಘಟನೆ ನಗರದ ಹೆಚ್‌ಎಎಲ್ ಮುಖ್ಯದ್ವಾರದ ಬಳಿ ನಡೆದಿದೆ.
(ಏಜೆನ್ಸೀಸ್)
ಘಟನೆಯನ್ನು ಬಿಎಂಟಿಸಿ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿದ್ದು, ಬೆಂಕಿ ಕಾಣಿಸಿಕೊಳ್ಳಲು ಕಾರಣ ಏನೆಂಬುದನ್ನು ಪತ್ತೆ ಹಚ್ಚಲು ಮುಂದಾಗಿದ್ದಾರೆ.
ಮುಂಜಾನೆ 5:15ರ ಸುಮಾರಿಗೆ ಮೆಜೆಸ್ಟಿಕ್‌ನಿಂದ ಕಾಡುಗೋಡಿಗೆ ತೆರಳುತ್ತಿದ್ದ ವಾಹನ ಸಂಖ್ಯೆ: KA57 F 4568, ಘಟಕ 51 ರಲ್ಲಿ ಈ ಘಟನೆ ಸಂಭವಿಸಿದೆ. ಬಸ್ ಚಲಿಸುತ್ತಿರುವಾಗ ಇಂಜಿನ್‌ನಿಂದ ಹೊಗೆ ಕಾಣಿಸಿಕೊಂಡಿದೆ. ಇದನ್ನು ಗಮನಿಸಿದ ಚಾಲಕ ಜಯಚಂದ್ರ ಮತ್ತು ನಿರ್ವಾಹಕ ಚೌಡಪ್ಪ ಬಸ್ ನಿಲ್ಲಿಸಿ, ಸಮಯಪ್ರಜ್ಞೆಯಿಂದ ಎಲ್ಲಾ ಪ್ರಯಾಣಿಕರನ್ನು ತಕ್ಷಣವೇ ಬಸ್ನಿಂದ ಕೆಳಗಿಳಿಸಿದ್ದಾರೆ. ಸದ್ಯ ಪ್ರಯಾಣಿಕರಿಗೆ ಯಾವುದೇ ಅಪಘಾತ ಸಂಭವಿಸಿಲ್ಲ. ಕೂಡಲೇ ಹೆಚ್ಎಎಲ್ ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದಾರೆ.