

ಒಡಿಶಾ: ಒಡಿಶಾದ ಬಾಲೇಶ್ವರ ಜಿಲ್ಲೆಯ ರುಪ್ಸಾ ರೈಲು ನಿಲ್ದಾಣದಲ್ಲಿ ನಿಂತಿದ್ದ ಗೂಡ್ಸ್ ಟ್ರೈನಿನ ವ್ಯಾಗನ್ಗೆ ಬೆಂಕಿ ಹೊತ್ತಿಕೊಂಡು ಕೆಲ ಕಾಲ ಆತಂಕದ ವಾತವರಣ ನಿರ್ಮಾಣವಾಗಿತ್ತು.
ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದು ಅಗ್ನಿ ಅವಘಡಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಕುರಿತು ತನಿಖೆ ನಡೆಸಿ ವರದಿ ನೀಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ಧಾರೆ.
ಒಡಿಶಾದ ಬಾಲಸೋರ್ನಲ್ಲಿ ಜೂನ್ 2ರಂದು ಸಂಭವಿಸಿದ ತ್ರಿವಳಿ ರೈಲುಗಳ ಅಪಘಾತದಲ್ಲಿ 300ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದರು, ಒಂದು ಸಾವಿರಕ್ಕೂ ಹೆಚ್ಚಿನ ಜನ ಗಂಭೀರವಾಗಿ ಗಾಯಗೊಂಡಿದ್ದರು.