More

    ಬಳ್ಳಾರಿ | 30 ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದ ಶಾಲಾ ಬಸ್​ಗೆ ಬೆಂಕಿ; ತಪ್ಪಿದ ಅನಾಹುತ

    ಬಳ್ಳಾರಿ: ಚಲಿಸುತ್ತಿದ್ದ ಶಾಲಾ ಮಕ್ಕಳ ಬಸ್​ಗೆ ಬೆಂಕಿ ತಗುಲಿದ ಘಟನೆ ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ಹಾಗೂ ತೆಕ್ಕಲಕೋಟೆ ನಡುವೆ ನಡೆದಿದೆ. ಶಾಲಾ ಬಸ್​ನಲ್ಲಿ ಸುಮಾರು 30 ವಿದ್ಯಾರ್ಥಿಗಳಿದ್ದರು. ಘಟನೆಯಲ್ಲಿ ಎಲ್ಲಾ ವಿದ್ಯಾರ್ಥಿಗಳು ಭಾರೀ ಅನಾಹುತದಿಂದ ಪಾರಾಗಿದ್ದಾರೆ. ಇದನ್ನೂ ಓದಿ: ಹೊಸ ಕಾರಿನಿಂದ ಬಯಲಾಯ್ತು ಹೆಂಡತಿಯ ಅಕ್ರಮ ಸಂಬಂಧ; ಪ್ರಶ್ನಿಸಿದ ಗಂಡನಿಗೆ ಜೀವ ಬೆದರಿಕೆ!

    ಸಿರುಗುಪ್ಪ ಪಟ್ಟಣದ ವಿಶ್ವ ಜ್ಯೋತಿ ಶಿಕ್ಷಣ ಸಂಸ್ಥೆಗೆ ಸೇರಿದ ಶಾಲಾ ಬಸ್​ ಇದಾಗಿದೆ. ಬಸ್ ಚಲಿಸುತ್ತಿದ್ದಾಗ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಎಚ್ಚೆತ್ತ ಚಾಲಕ ಮಕ್ಕಳನ್ನು ಕೆಳಗಿಳಿಸಿದ್ದಾರೆ. ಹೀಗಾಗಿ ವಿದ್ಯಾರ್ಥಿಗಳೆಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

    ಶಾಲಾ ಬಸ್​ನಲ್ಲಿ ಪರೀಕ್ಷೆ ಬರೆದ ಬಳಿಕ 30 ವಿದ್ಯಾರ್ಥಿಗಳು ತಮ್ಮ ಮನೆಗೆ ತೆರಳುತ್ತಿದ್ದರು. ಬೆಂಕಿ ಅವಘಡದ ಬಳಿಕ ವಿದ್ಯಾರ್ಥಿಗಳನ್ನು ಬೇರೆ ವಾಹನದಲ್ಲಿ ಮನೆಗೆ ಕಳುಹಿಸಕೊಡಲಾಗಿದೆ. ಬಸ್​ಗೆ ಬೆಂಕಿ ಹೊತ್ತಿಕೊಳ್ಳಲು ಕಾರಣ ಏನೆಂಬುದು ತಿಳಿದು ಬಂದಿಲ್ಲ. ಇದನ್ನೂ ಓದಿ: ಇಂದಿನಿಂದ 3 ದಿನ ಗುಡುಗು ಸಹಿತ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ

    ಶಾಲಾ ಮಕ್ಕಳ ಬಸ್​ಗೆ ಬೆಂಕಿ ಹೊತ್ತಿಕೊಂಡ ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕಾಗಮಿಸಿದ್ದಾರೆ. ಬಳಿಕ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಇದನ್ನೂ ಓದಿ: ಈ ಮರದ ಭದ್ರತೆಗೆ ಇದುವರೆಗೂ ಖರ್ಚಾಗಿದ್ದು 64 ಲಕ್ಷ ರೂ.!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts