ಬೆಳಗಾವಿ: ತಾಲ್ಲೂಕಿನ ನಾವಗೆ ಗ್ರಾಮದ ಹೊರ ಹೊಲಯದಲ್ಲಿರುವ ಟಿಕ್ಸೊ ಟೇಪ್ ಕಾರ್ಖಾನೆಯಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೃಹತ್ ಪ್ರಮಾಣದ ಬೆಂಕಿ ಹೊತ್ತಿಕೊಂಡಿದೆ. ಕಾರ್ಖಾನೆಯಲ್ಲಿ 200 ಕಾರ್ಮಿಕರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಆದರೆ ಯಾರಿಗೆ,ಏನು ಅಪಾಯ ಆಗಿದೆ ಎಂಬುದು ಇನ್ನೂ ಮಾಹಿತಿ ತಿಳಿದಿಲ್ಲ.
ಇದನ್ನೂ ಓದಿ: ಕುಸ್ತಿ ಪಂದ್ಯದಲ್ಲಿ ಮಹತ್ವದ ಸಾಧನೆ ಮಾಡಿದ ಭಾರತ, ಫೈನಲ್ ತಲುಪಿದ ವಿನೇಶ್ ಫೋಗಟ್
ಸ್ನೇಹಂ ಕಾರ್ಖಾನೆಯಲ್ಲಿ ಲಿಫ್ಟ್‌ನಲ್ಲಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಈ ಅವಘಡ ನಡೆದಿದೆ. ಪೊಲೀಸರು, ಗ್ರಾಮಸ್ಥರು, ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ.
ಒಳಗೆ ಹಲವು ಜನ ಕಾರ್ಮಿಕರು ಸಿಲುಕಿರುವ ಶಂಕೆ ಇದ್ದು, ಸ್ಥಳಕ್ಕೆ ಬೆಳಗಾವಿ ಗ್ರಾಮೀಣ ಠಾಣೆ ಪೊಲೀಸರ ಭೇಟಿ, ಪರಿಶೀಲನೆ ನಡೆಸುತ್ತಿದ್ದಾರೆ. ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಘಟನೆ ಬಗ್ಗೆ ಪ್ರತಿಕ್ರಿಯಿದ್ದು, ಇಡೀ ಜಿಲ್ಲಾಡಳಿತ ಸ್ಥಳದಲ್ಲಿ ಇದೆ. ಆಸ್ಪತ್ರೆಯಲ್ಲಿ 200 ಬೆಡ್ ತಯಾರಿಡಲು ಸೂಚಿಸಲಾಗಿದೆ ಎಂದಿದ್ದಾರೆ.
ಒಲಿಂಪಿಕ್ಸ್ನಲ್ಲಿ ಸೆಮಿಫೈನಲ್ಗೆ ತಲುಪಿದ ವಿನೇಶ್ ಫೋಗಟ್: ಕೇಂದ್ರಕ್ಕೆ ಟಾಂಗ್ ಕೊಟ್ಟ ಸಾಕ್ಷಿ, ಬಜರಂಗ್ ಪೂನಿಯ!