ತುಮಕೂರು: ನಗರದ ಎಂ.ಜಿ. ರಸ್ತೆಯಲ್ಲಿ ಇರುವ ಎಸ್ವಿಸಿ ಕೋ-ಆಪರೇಟಿವ್ ಬ್ಯಾಂಕ್ನಲ್ಲಿ ಇಂದು ಸಂಜೆ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಯಾಗಿತ್ತು. ಬೆಂಕಿ ಆಕಸ್ಮಿಕದಿಂದಾಗಿ ಕಚೇರಿಯ ಪೀಠೋಪಕರಣ ಸೇರಿ ಹಲವಾರು ವಸ್ತುಗಳು ಸುಟ್ಟುಹೋಗಿವೆ.
ಕೂಡಲೇ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು, ನಂದಿಸುವ ಕಾರ್ಯಾಚರಣೆ ನಡೆಸಿದ್ದರಿಂದ ಹೆಚ್ಚಿನ ಅನಾಹುತ ತಪ್ಪಿಹೋಗಿದೆ. ಬೆಂಕಿ ಅವಘಡದಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: ಜಗತ್ತಿಗೆ ಇಸ್ರೋ ನೀಡಲಿದೆ ಸೋಲಾರ್ ಕ್ಯಾಲ್ಕುಲೇಟರ್ ಅಪ್ಲಿಕೇಷನ್: ಪ್ರಧಾನಿ ಮೋದಿ
ಸರ್ವರ್ ರೂಮ್ ಬ್ಯಾಟರಿಯಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿದ್ದು, ಆ ಕೋಣೆಯಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣವೇ ಅಕ್ಕಪಕ್ಕದ ಅಂಗಡಿಯವರು ಮಾಹಿತಿ ನೀಡಿದ್ದು ಹೆಚ್ಚಿನ ಅನಾಹುತ ಆಗಿಲ್ಲ ಎಂದು ಬ್ಯಾಂಕ್ನ ಮ್ಯಾನೇಜರ್ ಮಂಜುಶ್ರೀ ಅವರು ತಿಳಿಸಿದ್ದಾರೆ.
ಗಂಡನನ್ನು ಕೊಂದು ಗುಂಡಿ ತೋಡಿ ಮುಚ್ಚಿದ ಪತ್ನಿ; ಬಳಿಕ ಮೊಬೈಲ್ಫೋನ್ ಸ್ವಿಚ್ಡ್ ಆಫ್ ಮಾಡಿ ಪರಾರಿ
ಡಾಕ್ಟರ್ ಆಗ್ತೀನಿ, ಫಾರಿನ್ನಲ್ಲೇ ಸೆಟ್ಲ್ ಆಗ್ತೀನಿ, ಮದ್ವೆನೇ ಆಗಲ್ಲ ಎಂದಿದ್ದ ಅಪ್ಪು; ಬಾಲ್ಯದ ಆ ಸಂದರ್ಶನ ವೈರಲ್