17.8 C
Bengaluru
Wednesday, January 22, 2020

ಹೊತ್ತಿ ಉರಿದ ಛಬ್ಬಿ ಅಕ್ಷಯ ಕಾಂಪ್ಲೆಕ್ಸ್​ನ ಮೊದಲ ಮಹಡಿ

Latest News

ರೆಸಲೂಷನ್​ 2019 ಹೀಗೆಲ್ಲಾ ಆಯ್ತಪ್ಪ: ಸ್ವಿಚ್ ಆಫ್ ಆಗದ ಫೋನ್!

ಜನವರಿ ಎಂದರೆ ಹಲವರಿಗೆ ಅದು ‘ಸಾಧನೆ’ಯ ಮಾಸ. ಹೋದ ವರ್ಷ ಮಾಡದ ಏನಾದರೊಂದು ಸಾಧನೆ ಈ ವರ್ಷ ಮಾಡಬೇಕು ಎನ್ನುವ ಹಂಬಲ. ಕಳೆದ...

ಎಲ್ಲ ಶಾಲೆಗಳಲ್ಲೂ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ಪ್ರಾರಂಭಿಸಲಿ

ಮೈಸೂರು: ಮಕ್ಕಳಲ್ಲಿ ಶಿಸ್ತು, ಸಮಯಪ್ರಜ್ಞೆ, ದೇಶಭಕ್ತಿ ಬೆಳೆಸಲು ಸಹಕಾರಿಯಾಗಿರುವ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ಅನ್ನು ಎಲ್ಲ ಶಾಲೆಗಳಲ್ಲೂ ಪ್ರಾರಂಭಿಸಲು ಶಿಕ್ಷಣ ಇಲಾಖೆ ಅಧಿಕಾರಿಗಳು...

ಮೈಸೂರು ವಿಮಾನ ನಿಲ್ದಾಣಕ್ಕೂ ಹೆಚ್ಚಿನ ಭದ್ರತೆ

ಮೈಸೂರು: ಮಂಡಕಳ್ಳಿಯಲ್ಲಿರುವ ಮೈಸೂರು ವಿಮಾನ ನಿಲ್ದಾಣಕ್ಕೂ ಹೆಚ್ಚಿನ ಭದ್ರತೆ ಕಲ್ಪಿಸಲಾಗಿದ್ದು, ಬಾಂಬ್ ನಿಷ್ಕ್ರಿಯಗೊಳಿಸುವ ಸಿಬ್ಬಂದಿ ತೊಡುವ ಬಾಂಬ್ ನಿರೋಧಕ ಜಾಕೆಟ್‌ವೊಂದನ್ನು (ಬಾಂಬ್ ಸೂಟ್)...

ಸಮಾಜದಲ್ಲಿನ ಅಸಮಾನತೆ ತೊಡೆದು ಹಾಕಲು ಪ್ರಯತ್ನ

ಮೈಸೂರು: ಸಮಾಜದಲ್ಲಿನ ಅಸಮಾನತೆಯನ್ನು ವಚನಗಳ ಮೂಲಕ ತೊಡೆದು ಹಾಕಲು ಅಂಬಿಗರ ಚೌಡಯ್ಯ ಪ್ರಯತ್ನ ನಡೆಸಿದ್ದರು ಎಂದು ಚಿಂತಕ ಕುಮಾರಸ್ವಾಮಿ ಅಭಿಪ್ರಾಯಪಟ್ಟರು. ಜಿಲ್ಲಾಡಳಿತ, ಕನ್ನಡ ಮತ್ತು...

60 ಶಾಲಾ ಕಟ್ಟಡಗಳು ಅತಂತ್ರ ಸ್ಥಿತಿಗೆ

ಹಾಸನ: ಶಿಥಿಲಾವಸ್ಥೆ ತಲುಪಿದ ಶಾಲಾ ಕಟ್ಟಡಗಳಿಗೆ ಮರುಜೀವ ನೀಡುವ ಯೋಜನೆ ಸರ್ಕಾರ ಬದಲಾವಣೆಯಿಂದ ನಿರ್ಲಕ್ಷೃಕ್ಕೆ ಒಳಪಟ್ಟಿದ್ದು, ಜಿಲ್ಲೆಯ 60 ಶಾಲಾ ಕಟ್ಟಡಗಳು ಅತಂತ್ರ...

ಹುಬ್ಬಳ್ಳಿ: ವಿದ್ಯುತ್ ಶಾರ್ಟ್ ಸರ್ಕ್ಯೂಟ್​ನಿಂದ ಇಲ್ಲಿನ ಅಕ್ಷಯ ಪಾರ್ಕ್​ನ ಛಬ್ಬಿ ಅಕ್ಷಯ ಕಾಂಪ್ಲೆಕ್ಸ್​ನ ಮೊದಲ ಮಹಡಿ ಹೊತ್ತಿ ಉರಿದ ಘಟನೆ ಭಾನುವಾರ ತಡರಾತ್ರಿ ಸಂಭವಿಸಿದೆ.

ವಿಧಾನ ಪರಿಷತ್ ಮಾಜಿ ಸದಸ್ಯ ನಾಗರಾಜ ಛಬ್ಬಿ ಹಾಗೂ ಉದ್ಯಮಿ ಸುರೇಶ ಶೇಜವಾಡಕರ್ ಮಾಲೀಕತ್ವದ ಕಾಂಪ್ಲೆಕ್ಸ್​ನಲ್ಲಿ ಅಗ್ನಿ ಅವಘಡ ಸಂಭವಿಸಿದೆ.

ರಾತ್ರಿ 2 ಗಂಟೆ ಸುಮಾರಿಗೆ ಛಬ್ಬಿ ಅಕ್ಷಯ ಬಜಾರ್ ಕಾಂಪ್ಲೆಕ್ಸ್​ನ ಮೊದಲ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಬೆಂಕಿಯ ತೀವ್ರತೆ ಹೆಚ್ಚಾಗುತ್ತಿತ್ತು. ವಿಷಯ ತಿಳಿದ ಕೂಡಲೆ ಅಗ್ನಿಶಾಮಕದಳ ತಂಡ 4 ವಾಹನಗಳ ಮೂಲಕ ಸ್ಥಳಕ್ಕಾಗಮಿಸಿ ಸತತ ಎರಡು ಗಂಟೆಗಳ ಕಾರ್ಯಾಚರಣೆ ಮೂಲಕ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಯಿತು. ಅಲ್ಲದೆ, ಇತರ ಮಹಡಿಗೆ ಹಬ್ಬುವುದನ್ನು ತಪ್ಪಿಸಿತು. ಅಗ್ನಿಶಾಮಕ ದಳದ ಸಮಯ ಪ್ರಜ್ಞೆಯಿಂದಾಗಿ ಹೆಚ್ಚಿನ ಅನಾಹುತ ತಪ್ಪಿತು ಎಂದು ಕಾಂಪ್ಲೆಕ್ಸ್ ಮಾಲೀಕರಲ್ಲಿ ಒಬ್ಬರಾದ ಸುರೇಶ ಶೇಜವಾಡಕರ್ ಪ್ರತಿಕ್ರಿಯಿಸಿದರು. ಕಾಂಪ್ಲೆಕ್ಸ್​ನಲ್ಲಿ ಪಂಜಾಬ್ ನ್ಯಾಷನಲ್ ಬ್ಯಾಂಕ್, ಮೊಬೈಲ್ ಶೋರೂಂ, ಇಲೆಕ್ಟ್ರಾನಿಕ್ ಉಪಕರಣಗಳ ಮಳಿಗೆಗಳು ಇದ್ದವು. ಶಾರ್ಟ್ ಸರ್ಕ್ಯೂಟ್​ನಿಂದ ಅವಘಡ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ. ಗೋಕುಲ ರೋಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಜಿಲ್ಲಾ ಅಗ್ನಿಶಾಮಕದಳ ಅಧಿಕಾರಿ ವಿನಾಯಕ ಕಲ್ಗುಟ್ಕರ್ ತಿಳಿಸಿದರು.

60 ಲಕ್ಷ ರೂ.ಗಿಂತ ಅಧಿಕ ನಷ್ಟ: ನಾಲ್ಕು ಅಂತಸ್ತಿನ ಕಟ್ಟಡದ ಮೊದಲ ಮಹಡಿಯಲ್ಲಿ ರೆಫ್ರಜಿರೇಟರ್, ಟಿವಿ ಸೇರಿ ಇತರೆ ಇಲೆಕ್ಟ್ರಾನಿಕ್ ವಸ್ತುಗಳನ್ನು ಸಂಗ್ರಹಿಸಿ ಇಡಲಾಗಿತ್ತು. 60 ಲಕ್ಷ ರೂ.ಗಿಂತ ಹೆಚ್ಚಿನ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ ಎಂದು ಅಂದಾಜಿಸಲಾಗಿದೆ ಎಂದು ಗೋಕುಲ ರೋಡ್ ಠಾಣೆ ಪೊಲೀಸರು ತಿಳಿಸಿದ್ದಾರೆ.

ವಿಡಿಯೋ ನ್ಯೂಸ್

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...

VIDEO| ಮಂಗಳೂರು ವಿಮಾನ ನಿಲ್ದಾಣ ಬಾಂಬ್​ ಪತ್ತೆ ಪ್ರಕರಣ: ಬಾಂಬ್​...

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಜಾರು ಮೈದಾನದಲ್ಲಿ ಬಾಂಬ್​ ನಿಷ್ಕ್ರಿಯೆ ದಳದಿಂದ ನಡೆದ ಬಾಂಬ್​ ಸ್ಫೋಟ ಪ್ರಕ್ರಿಯೆ ಯಶಸ್ವಿಯಾಗಿದೆ. ಇಂದು ಬೆಳಗ್ಗೆ ಮಂಗಳೂರು ವಿಮಾನ...

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...