More

    ಕರೊನಾ ಲಸಿಕೆ ಉತ್ಪಾದನಾ ಕೇಂದ್ರಕ್ಕೇ ಬೆಂಕಿ! ಪುಣೆಯ ಸೆರಂ ಇನ್​ಸ್ಟಿಟ್ಯೂಟ್​ನಲ್ಲಿ ಬೆಂಕಿ ಅವಘಡ

    ಪುಣೆ: ಕರೊನಾ ಸೋಂಕಿನ ವಿರುದ್ಧ ಹೋರಾಡಲು ತಿಂಗಳುಗಳ ಪರಿಶ್ರಮದಿಂದ ಲಸಿಕೆ ಕಂಡುಹಿಡಿದು, ಇದೀಗ ಉತ್ಪಾದನೆ ನಡೆಸುತ್ತಿರುವ ಸೆರಂ ಇನ್​ಸ್ಟಿಟ್ಯೂಟ್​ನಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಪುಣೆಯ ಮಂಜಿರಾ ಪ್ರದೇಶದಲ್ಲಿರುವ ಇನ್‌ಸ್ಟಿಟ್ಯೂಟ್​ನ ಟರ್ಮಿನಲ್ ಗೇಟ್-1 ಒಳಗಿನ SEZ-3 ಕಟ್ಟಡದ ನಾಲ್ಕನೇ ಮತ್ತು ಐದನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿರುವುದಾಗಿ ತಿಳಿಸಲಾಗಿದೆ.

    ಇದನ್ನೂ ಓದಿ: ಸ್ನೇಹಿತನ ಎರಡೂವರೆ ವರ್ಷದ ಮಗಳನ್ನೇ ರೇಪ್​ ಮಾಡಿದ ಪಾಪಿ! ಮರಣದಂಡನೆ ವಿಧಿಸಿದ ನ್ಯಾಯಾಲಯ

    ಅಗ್ನಿಶಾಮಕ ದಳದ 10 ವಾಹನಗಳು ಸ್ಥಳಕ್ಕೆ ಬಂದಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿಕೊಂಡಿವೆ. ಅದರ ಜತೆಯಲ್ಲಿ ಎನ್​ಡಿಆರ್​ಎಫ್​ ತಂಡವೂ ಸ್ಥಳದಲ್ಲಿದ್ದು, ಕಾರ್ಯಾಚರಣೆ ನಡೆಸುತ್ತಿದೆ. ಕಟ್ಟಡದ ಒಳಗೆ ನಾಲ್ವರಿದ್ದು ಅದರಲ್ಲಿ ಮೂವರನ್ನು ಈಗಾಗಲೇ ರಕ್ಷಿಸಿರುವುದಾಗಿ ಕೆಲ ಮಾಧ್ಯಮಗಳು ವರದಿ ಮಾಡಿವೆ. ಆಕ್ಸ್​ಫರ್ಡ್​ ಮತ್ತು ಅಸ್ತ್ರಾಜೆನೆಕಾ ಸಂಸ್ಥೆ ಜಂಟಿಯಾಗಿ ತಯಾರಿಸಿರುವ ಕೋವಿಶೀಲ್ಡ್​ ಲಸಿಕೆಯನ್ನು ಸೆರಂ ಇನ್​ಸ್ಟಿಟ್ಯೂಟ್​ನಲ್ಲಿ ದೊಡ್ಡ ಪ್ರಮಾಣದಲ್ಲಿ ಉತ್ಪಾದನೆ ಮಾಡಲಾಗುತ್ತಿದೆ. ಬೆಂಕಿ ಕಾಣಿಸಿಕೊಂಡಿರುವ ಕಟ್ಟಡ ನಿರ್ಮಾಣ ಹಂತದಲ್ಲಿದ್ದರಿಂದಾಗಿ ಅಲ್ಲಿ ಲಸಿಕೆ ಉತ್ಪಾದನೆಯಾಗಲೀ ಅಥವಾ ಶೇಖರಣೆಯನ್ನು ಮಾಡಿರಲಿಲ್ಲ ಎನ್ನಲಾಗಿದೆ. ಹಾಗಾಗಿ ಲಸಿಕೆಗೆ ಯಾವುದೇ ತೊಂದರೆಯಾಗಿಲ್ಲ ಎಂದು ತಿಳಿಸಲಾಗಿದೆ.

    ಇದನ್ನೂ ಓದಿ: ಮೋದಿ ಸರ್ಕಾರದಲ್ಲಿ ಡಬಲ್​ ಆದ ಸೆನ್ಸೆಕ್ಸ್​! ಏಳೇ ವರ್ಷದಲ್ಲಿ 25 ಸಾವಿರದಿಂದ 50 ಸಾವಿರಕ್ಕೆ ಜಂಪ್​

    ಕಟ್ಟಡದ ಸುತ್ತ ಮುತ್ತ ದಟ್ಟವಾಗಿ ಹೊಗೆ ಸುತ್ತುವರಿದಿದ್ದು ರಕ್ಷಣಾ ಕಾರ್ಯಾಚರಣೆಗೂ ಅಡ್ಡಿಯಾಗಿದೆ. ಅವಘಡದ ಕುರಿತಾಗಿ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್​ ಠಾಕ್ರೆ ಅವರು ಪುಣೆ ನಗರ ಆಯುಕ್ತರಿಂದ ಸಂಪೂರ್ಣ ಮಾಹಿತಿ ಪಡೆದುಕೊಂಡಿರುವುದಾಗಿ ತಿಳಿಸಲಾಗಿದೆ. (ಏಜೆನ್ಸೀಸ್​)

    ಬೆಂಕಿ ಅವಘಡದ ವಿಡಿಯೋ ನೋಡಲು ಇಲ್ಲಿ ಕ್ಲಿಕ್ಕಿಸಿ:

    ಕರೊನಾ ಲಸಿಕೆ ಉತ್ಪಾದನಾ ಕೇಂದ್ರಕ್ಕೇ ಬೆಂಕಿ! ಪುಣೆಯ ಸೆರಂ ಇನ್​ಸ್ಟಿಟ್ಯೂಟ್​ನಲ್ಲಿ ಬೆಂಕಿ ಅವಘಡ

    ಅಂಗಡಿಯಿಂದ ಬರಲು ತಡವಾದುದಕ್ಕೆ ಮಗನನ್ನು ಬೆಂಕಿಹಚ್ಚಿ ಕೊಂದ ಪಾಪಿ ತಂದೆ!

    ಫ್ರೀ ಇನ್ನರ್​ವೇರ್​ ಆಫರ್​ಗೆ ಮರುಳಾದ ಯುವತಿ! ಮುಂದೇನಾಯ್ತು ಕೇಳಿದರೆ ಶಾಕ್​ ಆಗೋದು ಗ್ಯಾರಂಟಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts