ಬೆಂಗಳೂರು: ನಗರದ ಹೃದಯಭಾಗದಲ್ಲಿರುವ ಅವೆನ್ಯೂ ರಸ್ತೆಯಲ್ಲಿ ಬೆಂಕಿ ಅವಘಡ ಸಂಭವಿಸಿ ವ್ಯಕ್ತಿಯೊಬ್ಬರು ಜೀವಂತ ದಹನವಾಗಿದ್ದಾರೆ.
ಮೆಜೆಸ್ಟಿಕ್ ಸಮೀಪದ ಅವೆನ್ಯೂ ರಸ್ತೆಯಲ್ಲಿರುವ ಗ್ರಂಧಿಗೆ ಅಂಗಡಿಯಲ್ಲಿ ಇಂದು (ಶುಕ್ರವಾರ) ಮಧ್ಯಾಹ್ನ ಬೆಂಕಿ ಕಾಣಿಸಿಕೊಂಡಿದ್ದು, ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ವಾಹನ ಸುಮಾರು ಮುಕ್ಕಾಲು ಗಂಟೆ ಕಾಲ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿತು. ಅಷ್ಟರಲ್ಲಿ ಅಂಗಡಿ ಮಾಲೀಕ ಮನುಕುಮಾರ್ ಸುಟ್ಟು ಕರಕಲಾಗಿದ್ದರು.
ಇದನ್ನೂ ಓದಿರಿ ಬಿಬಿಎಂಪಿ ಕಚೇರಿ ಮುಂದೆ ಸೀಮೆಎಣ್ಣೆ ಕ್ಯಾನ್ ಹಿಡಿದು ಆತ್ಮಹತ್ಯೆ ಬೆದರಿಕೆ ಹಾಕಿದ ಕಾರ್ಪೋರೇಟರ್!
ಇಂದು ಮಧ್ಯಾಹ್ನ 1.20ರ ಸುಮಾರಿನಲ್ಲಿ ಗ್ರಂಥಿಗೆ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿತು ಎಂದು ತಿಳಿದು ಬಂದಿದೆ. ಸುತ್ತಲೂ ದಟ್ಟ ಹೊಗೆ ಆವರಿಸಿದ್ದರಿಂದ ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಕರೆ ಮಾಡಿದ್ದಾರೆ. ಕೂಡಲೇ ಸ್ಥಳಕ್ಕೆ ಬಂದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು. ಅಂಗಡಿಯಲ್ಲಿದ್ದ ಸಾಮಗ್ರಿ ಸಮೇತ ಅಂಗಡಿ ಮಾಲೀಕ ಬೆಂಕಿಗೆ ಆಹುತಿಯಾಗಿದ್ದಾರೆ.
9 ಲಕ್ಷ ರೂ. ಬಿಲ್ ಕಟ್ಟಿದರಷ್ಟೇ ಮೃತದೇಹ ಕೊಡೋದು… ಶವಕ್ಕಾಗಿ 30 ತಾಸು ಆಸ್ಪತ್ರೆ ಬಾಗಿಲು ಕಾದ ಕುಟುಂಬಸ್ಥರು!