Saturday, 17th November 2018  

Vijayavani

ಮೈಸೂರು ಪಾಲಿಕೆಯಲ್ಲಿ ದೋಸ್ತಿ ತಂತ್ರ - ಮಾತುಕತೆ ಯಶಸ್ವಿ - 2 ವರ್ಷ ಕಾಂಗ್ರೆಸ್, 3 ವರ್ಷ ಜೆಡಿಎಸ್​​ಗೆ        ಮೀಸಲಾತಿ ವಿಚಾರದಲ್ಲಿ ದೋಸ್ತಿಗಳೇ ಗರಂ - ಸಿಎಂ ಎಚ್​​ಡಿಕೆಗೆ ಸಚಿವ ಪ್ರಿಯಾಂಕ ಖರ್ಗೆ ಪತ್ರ        ಅನಂತ್ ನಿಧನದಿಂದಾಗಿರೋ ನಷ್ಟ ಭರಿಸಲು ಸರ್ಕಸ್ - ರಾಜ್ಯ ಬಿಜೆಪಿ ಸಂಸದರಿಗೆ ಸಿಗುತ್ತಾ ಸಚಿವ ಭಾಗ್ಯ        ಇಂದು ಮಹದಾಯಿ ಕುರಿತು ಸರ್ವಪಕ್ಷ ಸಭೆ - ಮುಂದಿನ ಕ್ರಮದ ಬಗ್ಗೆ ನಡೆಯಲಿದೆ ಮಹತ್ವದ ಚರ್ಚೆ        ಇಂದು ಶಬರಿಮಲೆ ಬಾಗಿಲು ಮತ್ತೆ ಓಪನ್ - ಮಹಿಳೆಯರಿಗೆ ದರ್ಶನ ಸಿಗುತ್ತೋ? ಸಿಗಲ್ವೋ..?       
Breaking News

ನಟಿ ದೀಪಿಕಾ ಪಡುಕೋಣೆ ನಿವಾಸವಿದ್ದ ಬಹುಮಹಡಿ ಕಟ್ಟಡದಲ್ಲಿ ಭಾರಿ ಅಗ್ನಿ ಅವಘಡ

Wednesday, 13.06.2018, 3:44 PM       No Comments

ಮುಂಬೈ: ಇಲ್ಲಿನ ವೋರ್ಲಿ ಪ್ರದೇಶದಲ್ಲಿರುವ ಬಹುಮಹಡಿ ಕಟ್ಟಡದಲ್ಲಿ ಭಾರಿ ಅಗ್ನಿ ದುರಂತ ಸಂಭವಿಸಿದ್ದು, 90 ಕ್ಕೂ ಹೆಚ್ಚು ನಿವಾಸಿಗಳನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ.

ಕಟ್ಟಡದ 26 ನೇ ಮಹಡಿಯಲ್ಲಿ ಬಾಲಿವುಡ್‌ ನಟಿ ದೀಪಿಕಾ ಪಡುಕೋಣೆ ಅವರು ವಾಸಿಸುತ್ತಿದ್ದಾರೆ. ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದ್ದು, ಸಾವು ನೋವು ಸಂಭವಿಸಿಲ್ಲ.

ಸ್ಥಳಕ್ಕೆ ಆಗಮಿಸಿರುವ ಅಗ್ನಿಶಾಮಕ ದಳದ ಸಿಬ್ಬಂದಿ ಶಕ್ತಿ ಮೀರಿ ಪ್ರಯತ್ನ ನಡೆಸುತ್ತಿದ್ದು, ಬೆಂಕಿಯನ್ನು ನಂದಿಸಲು ಹರಸಾಹಸ ಪಡುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೂಲಗಳ ಪ್ರಕಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಕಟ್ಟಡದ 33 ನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಎರಡು ಮಹಡಿಗಳಿಗೆ ವ್ಯಾಪಿಸಿದೆ. ಐದು ಅಗ್ನಿ ಶಾಮಕ ವಾಹನಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತವಾಗಿವೆ.

ಇನ್ನು ಜೂನ್‌ ತಿಂಗಳಲ್ಲಿ ದಕ್ಷಿಣ ಮುಂಬೈನಲ್ಲಿದ್ದ ಆದಾಯ ತೆರಿಗೆ ಕಚೇರಿ ಮತ್ತು ಅಕ್ಟೋಬರ್‌ನಲ್ಲಿ ಐಶ್ವರ್ಯ ರೈ ಬಚ್ಚನ್‌ ಅವರ ಅಮ್ಮ ಸೇರಿದಂತೆ ಇತರೆ ಸೆಲೆಬ್ರಿಟಿಗಳು ವಾಸಿಸುತ್ತಿದ್ದ ಬಾಂದ್ರಾದ ಮೆರ್‌ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. (ಏಜೆನ್ಸೀಸ್)

Leave a Reply

Your email address will not be published. Required fields are marked *

Back To Top