ಅಗ್ನಿ ಸುರಕ್ಷತಾ ಕಾರ್ಯಕ್ರಮ

Bel_fire
Published on

ಬೆಳ್ತಂಗಡಿ: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಅಗ್ನಿಶಾಮಕ ವಿಧಾನಗಳು ಮತ್ತು ಸುರಕ್ಷತಾ ಕ್ರಮಗಳ ಪ್ರಾತ್ಯಕ್ಷಿಕಾ ಕಾರ್ಯಕ್ರಮ ನಡೆಯಿತು.

ಬೆಳ್ತಂಗಡಿ ಅಗ್ನಿಶಾಮಕ ಠಾಣಾ ಅಧಿಕಾರಿಗಳಾದ ಉಸ್ಮಾನ್ ಮತ್ತು ನೀಲಯ್ಯ ಗೌಡ ಸಂಪನ್ಮೂಲ ವ್ಯಕ್ತಿಗಳಾಗಿ ಅಗ್ನಿ ಸುರಕ್ಷತಾ ನಿಯಮಗಳ ಬಗ್ಗೆ ಮಾಹಿತಿ ನೀಡಿ ಅಗ್ನಿಶಾಮಕ ವಿಧಾನಗಳನ್ನು ಪ್ರಾತ್ಯಕ್ಷಿಕೆಯ ಮೂಲಕ ತೋರಿಸಿಕೊಟ್ಟರು. ಬಳಿಕ ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಉತ್ತರಿಸಿದರು.

ಕಾಲೇಜಿನ ಪ್ರಾಚಾರ್ಯ ಡಾ.ಅಶೋಕ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮ ಸಂಯೋಜಕರಾದ ಸಹಪ್ರಾಧ್ಯಾಪಕ ಡಾ.ಸುಬ್ರಹ್ಮಣ್ಯ ಭಟ್ ಸ್ವಾಗತಿಸಿ, ವಂದಿಸಿದರು. ಸಹ ಪ್ರಧ್ಯಾಪಕ ರಾಮ್ ಪ್ರಸಾದ್ ಮತ್ತು ಡಾ.ವಿನಯ ಶ್ಯಾಮ್ ಸಹಕರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net