More

    VIDEO| ಪಟಾಕಿ ಗೋದಾಮಿನಲ್ಲಿ ಅಗ್ನಿ ಅವಘಡ; 12 ಮಂದಿ ಸಜೀವ ದಹನ

    ಆನೇಕಲ್: ಪಟಾಕಿ ಗೋದಾಮಿನಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ 12 ಮಂದಿ ಸಜೀವ ದಹನವಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅತ್ತಿಬೆಲೆಯಲ್ಲಿ ನಡೆದಿದೆ. ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

    ಘಟನೆ ನಡೆದ ವೇಳೆ 30-40 ಕಾರ್ಮಿಕರು ಸ್ಥಳದಲ್ಲಿ ಇದ್ದರು ಎಂದು ತಿಳಿದು ಬಂದಿದೆ. ಈ ಪೈಕಿ 12 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಕೆಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸ್​ ಅಧಿಕಾರಿಗಳು ತಿಳಿಸಿದ್ದಾರೆ.

    ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಮಿಳುನಾಡಿನಿಂದ ಬಂದ ಪಟಾಕಿಯನ್ನು ಲಾರಿಯಿಂದ ಇಳಿಸಿ ಗೋದಾಮಿನಲ್ಲಿ ಇರಿಸುವ ವೇಳೆ ದುರಂತ ಸಂಭವಿಸಿದೆ. ಮಳಿಗೆಯಲ್ಲಿ ಸುಮಾರು ಐದು ಕೋಟಿ ರೂಪಾಯಿ ಮೌಲ್ಯದ ಪಟಾಕಿಗಳನ್ನು ಶೇಖರಿಸಲಾಗಿತ್ತು ಎಂದು ತಿಳಿದು ಬಂದಿದೆ. ಅಗ್ನಿ ಅವಘಡಕ್ಕೆ ಇನ್ನೂ ಸಹ ನಿಖರ ಕಾರಣ ತಿಳಿದು ಬಂದಿಲ್ಲ.

    ಇದನ್ನೂ ಓದಿ: ಇಸ್ರೇಲ್-ಪ್ಯಾಲೆಸ್ಟೈನ್​ ಯುದ್ಧ; 40ಕ್ಕೆ ಏರಿದ ಸಾವಿನ ಸಂಖ್ಯೆ

    ಪಟಾಕಿ ಗೋದಾಮಿನಲ್ಲಿ ಸುಮಾರು 30-40 ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಕೆಲವರು ಹಿಂಬಾಗಿಲಿನಿಂದ ಹೊರಬಂದು ತಮ್ಮ ಪ್ರಾಣವನ್ನು ಉಳಿಸಿಕೊಂಡಿದ್ದಾರೆ. ಇನ್ನೂ ಹಲವರು ಒಳಗೆ ಸಿಲುಕಿಕೊಂಡಿದ್ದು, ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ. ಘಟನೆಯಲ್ಲಿ ಗೋದಾಮು, ಒಂದು ಲಾರಿ, ಟೆಂಪೋ, ನಾಲ್ಕು ದ್ವಿಚಕ್ರ ವಾಹನಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿವೆ.

    ಪಟಾಕಿ ಗೋದಾಮು ನಾಲ್ಕೈದು ಘಂಟೆಯಿಂದ ಉರಿಯುತ್ತಿದ್ದು, ಬೆಂಕಿ ಇನ್ನೂ ನಿಯಂತ್ರಣಕ್ಕೆ ಬಂದಿಲ್ಲ. ಅಗ್ನಿಶಾಮಕ ದಳದ ಐದಕ್ಕೂ ಹೆಚ್ಚು ವಾಹನಗಳು ಸ್ಥಳದಲ್ಲಿ ಬೀಡು ಬಿಟ್ಟಿದ್ದು, ಬೆಂಕಿ ನಂದಸುವ ಕಾರ್ಯದಲ್ಲಿ ತೊಡಗಿವೆ. ಘಟನೆಯಲ್ಲಿ ಪಟಾಕಿ ಗೋದಾಮಿನ ಮಾಲೀಕ ಸೇರಿದಂತೆ ಅನೇಕರು ಗಂಭೀರವಾಗಿ ಗಾಯಗೊಂಡಿದ್ದು, ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts