More

    50 ಅಡಿ ಆಳದ ಬಾವಿಗೆ ಬಿದ್ದರೂ ಬದುಕುಳಿದ ಶ್ವಾನ; ‘ಆಪರೇಷನ್​ ಡಾಗ್’​ಗೆ ಮೆಚ್ಚುಗೆ

    ಚಿಕ್ಕೋಡಿ: ನಾಯಿಯೊಂದು ಐವತ್ತು ಅಡಿ ಆಳದ ಬಾವಿಗೆ ಬಿದ್ದರೂ ಬದುಕುಳಿದಿದೆ. ಅದರಲ್ಲೂ ಈ ಶ್ವಾನವನ್ನು ಬದುಕಿಸಲು ಅಗ್ನಿಶಾಮಕ ಸಿಬ್ಬಂದಿ ನಡೆಸಿದ ಕಾರ್ಯಾಚರಣೆ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ಈ ಪ್ರಕರಣ ನಡೆದಿದೆ.

    ಇದನ್ನೂ ಓದಿ: ಬೆರಳ ತುದಿಯಲ್ಲೇ ಇದೆ ಬದಲಿಸುವ ಶಕ್ತಿ; ಚುನಾವಣೆ ಸುಧಾರಣೆಗೆ ಆಗಲಿ ಬದಲಾವಣೆ..

    ಅಥಣಿ ತಾಲೂಕಿನ ಕಟಗೇರಿ ಗ್ರಾಮದಲ್ಲಿನ ಬಾವಿಯೊಂದಕ್ಕೆ ಈ ಶ್ವಾನ ಬಿದ್ದಿತ್ತು. ಸುಮಾರು ಐವತ್ತು ಅಡಿ ಆಳವಿದ್ದ ಈ ಬಾವಿಯಲ್ಲಿ ಬಿದ್ದ ನಾಯಿಯನ್ನು ರಕ್ಷಿಸಲು ಅಗ್ನಿಶಾಮಕ ದಳದ ಸಿಬ್ಬಂದಿ ಸುಮಾರು ಒಂದು ಗಂಟೆ ಕಾಲ ಕಾರ್ಯಾಚರಣೆ ನಡೆಸಿದ್ದಾರೆ.

    ಇದನ್ನೂ ಓದಿ: ಸೀರೆ ಹಂಚಲು ಬಂದಿದ್ದ ಶಾಸಕರ ಬೆಂಬಲಿಗರನ್ನು ತರಾಟೆಗೆ ತೆಗೆದುಕೊಂಡ ಜನರು!

    ಬಾವಿಯಿಂದ ಶ್ವಾನವನ್ನು ಜೀವಂತವಾಗಿ ರಕ್ಷಿಸಿದ ಅಗ್ನಿಶಾಮಕ ಪಡೆಯ ಸಿಬ್ಬಂದಿಗೆ ಕಾರ್ಯಾಚರಣೆಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಮೆಟ್ಟಿಲುಗಳು ಇಲ್ಲದ ಈ ಬಾವಿಗೆ ಹಗ್ಗದ ಸಹಾಯದಿಂದ ಇಳಿದು ನಾಯಿಯನ್ನು ರಕ್ಷಣೆ ಮಾಡಲಾಗಿದೆ.

    50 ಅಡಿ ಆಳದ ಬಾವಿಗೆ ಬಿದ್ದರೂ ಬದುಕುಳಿದ ಶ್ವಾನ; 'ಆಪರೇಷನ್​ ಡಾಗ್'​ಗೆ ಮೆಚ್ಚುಗೆ

    ಹತ್ತು ವರ್ಷಗಳಿಗೂ ಅಧಿಕ ಕಾಲ ಒಂದಾದ ಮೇಲೊಂದು ಹೆರಿಗೆ; 28ನೇ ವಯಸ್ಸಿನಲ್ಲೇ 9 ಮಕ್ಕಳ ಮಹಾತಾಯಿ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts