ದೀಪಾವಳಿಗೆ ಪಟಾಕಿ ನಿಷೇಧ...; ಆದೇಶ ಹೊರಡಿಸಿದ ಮುಖ್ಯಮಂತ್ರಿ ಯಡಿಯೂರಪ್ಪ

pataki
Published on

ಬೆಂಗಳೂರು: ದೀಪಾವಳಿಗೆ ಪಟಾಕಿ ಸಿಡಿಸುವುದನ್ನು ನಿಷೇಧಿಸಿ ಮುಖ್ಯಮಂತ್ರಿ ಯಡಿಯೂರಪ್ಪ ಆದೇಶ ಹೊರಡಿಸಿದ್ದಾರೆ.

ಪಟಾಕಿಯಿಂದ ಕರೊನಾ ರೋಗಿಗಳಿಗೆ ತೊಂದರೆಯಾಗುತ್ತದೆ, ಸೋಂಕಿನ ಪ್ರಮಾಣ ಅಧಿಕವಾಗುತ್ತದೆ ಎಂಬ ತಜ್ಞರ ವರದಿ ಹಿನ್ನೆಲೆಯಲ್ಲಿ ಈಗಾಗಲೇ ದೆಹಲಿ, ಪಶ್ಚಿಮಬಂಗಾಳ ರಾಜ್ಯಗಳು ದೀಪಾವಳಿಗೆ ಪಟಾಕಿಯನ್ನು ನಿಷೇಧಿಸಿವೆ. ಇದೀಗ ರಾಜ್ಯ ಸರ್ಕಾರವೂ ಅದೇ ನಿರ್ಧಾರ ಕೈಗೊಂಡಿದೆ.

ದೀಪಾವಳಿಗೆ ರಾಜ್ಯದಲ್ಲಿ ಎಲ್ಲಿಯೂ ಪಟಾಕಿ ಹೊಡೆಯಬಾರದು ಎಂದು ಮುಖ್ಯಮಂತ್ರಿ ಯಡಿಯೂರಪ್ಪನವರು ಆದೇಶ ಹೊರಡಿಸಿದ್ದು, ಶೀಘ್ರದಲ್ಲೇ ನೋಟಿಫಿಕೇಶನ್ ಹೊರಡಿಸುವುದಾಗಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net