ನಟ ಸಲ್ಮಾನ್​ ಖಾನ್ ಮನೆ ಮುಂದೆ ಗುಂಡಿನ ದಾಳಿ; ಬಿಗಿ ಬಂದೋಬಸ್ತ್‌

salmankhan-1582711053
Published on

ಮುಂಬೈ: ಬಾಲಿವುಡ್  ನಟ ಸಲ್ಮಾನ್ ಖಾನ್ ಅವರ ಮುಂಬೈನಲ್ಲಿರುವ ನಿವಾಸದ ಹೊರಗೆ ಇಬ್ಬರು ಅಪರಿಚಿತ ವ್ಯಕ್ತಿಗಳು ಗುಂಡಿನ ದಾಳಿ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮುಂಜಾನೆ 5ಗಂಟೆಗೆ ಗುಂಡಿನ ದಾಳಿ ಸಂಭವಿಸಿದೆ. ಬೈಕ್​ನಲ್ಲಿ ಬಂದ ಇಬ್ಬರು ಅಪರಿಚಿತರು ಈ ಈ ಗುಂಡಿನ ದಾಳಿ ನಡೆಸಿದ್ದಾರೆ.  ಬಾಂದ್ರಾದಲ್ಲಿರುವ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಗ್ಯಾಲಕ್ಸಿ ಅಪಾರ್ಟ್ಮೆಂಟ್ ಹೊರಗೆ ನಾಲ್ಕು ಸುತ್ತಿನ ಗುಂಡಿನ ದಾಳಿ ನಡೆಸಲಾಗಿದೆ. 

ಗ್ಯಾಲಕ್ಸಿ ಅಪಾರ್ಟ್‌ಮೆಂಟ್‌ನ ರಸ್ತೆಯ ಎರಡೂ ಬದಿಗಳಲ್ಲಿ ಅಳವಡಿಸಲಾಗಿರುವ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ. ಡಿಸಿಪಿ ಕೂಡ ಸ್ಥಳಕ್ಕೆ ಆಗಮಿಸಿದ್ದಾರೆ. ಮುಂಬೈ ಪೊಲೀಸರು ಘಟನೆಯ ಕುರಿತು ತನಿಖೆ ಆರಂಭಿಸಿದ್ದು, ಗುಂಡು ಹಾರಿಸಿದ ವ್ಯಕ್ತಿಯನ್ನು ಪತ್ತೆಹಚ್ಚಲು ಶುರು ಮಾಡಿದ್ದಾರೆ.  ಸಲ್ಮಾನ್ ಖಾನ್ ನಿವಾಸಕ್ಕೆ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net