ಮೈಸೂರು: ಸೈಟ್ ಹಂಚಿಕೆ ಹಗರಣ ಸಂಬಂಧ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಹಿಂದಿನ ಆಯುಕ್ತ ಜಿ.ಟಿ.ದಿನೇಶ್‌ಕುಮಾರ್ ಅವರನ್ನು ಅಮಾನತು ಮಾಡಲಾಗಿದೆ.
ಇದನ್ನೂ ಓದಿ: ಆಜಾನ್ ಧ್ವನಿ ಕೇಳಿ ಭಾಷಣ ನಿಲ್ಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಮುಡಾ ಹಗರಣದ ಆರೋಪ ಹೊತ್ತಿರುವ ಮಧ್ಯ ಆಯುಕ್ತರಾಗಿದ್ದ ದಿನೇಶ್ ಕುಮಾರ್ ಅವರನ್ನು ರಾಜ್ಯ ಸರ್ಕಾರ, ಹಾವೇರಿ ವಿಶ್ವವಿದ್ಯಾಲಯದ ಕುಲಸಚಿವರಾಗಿ ಸರ್ಕಾರ ವರ್ಗಾಯಿಸಿತ್ತು. ಆದರೆ ಇದೀಗ ರಾಜ್ಯಪಾಲರ ಆದೇಶಾನುಸಾರವಾಗಿ ದಿನೇಶ್ ಕುಮಾರ್ ಅವರನ್ನ ಅಮಾನತುಗೊಳಿಸಲಾಗಿದೆ. ಸಸ್ಪೆಂಡ್ ಮಾಡಿ ಕಾರ್ಯದರ್ಶಿ ಉಮಾದೇವಿ ಅವರು ಆದೇಶ ಹೊರಡಿಸಿದ್ದಾರೆ.
ಪ್ರಸ್ತುತ ಸ್ಥಳ ನಿರೀಕ್ಷಣೆಯಲ್ಲಿದ್ದ ಇವರ ವಿರುದ್ಧ ಇಲಾಖಾ ವಿಚಾರಣೆಯನ್ನು ಬಾಕಿ ಇರಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಸರ್ಕಾರಿ ಸೇವೆಯಿಂದ ಅಮಾನತ್ತಿನಲ್ಲಿರಿಸಿದ್ದು, ಸಕ್ಷಮ ಪ್ರಾಧಿಕಾರದ ಪೂರ್ವಾನುಮತಿ ಪಡೆಯದೆ ಕೇಂದ್ರ ಸ್ಥಾನವನ್ನು ಬಿಡತಕ್ಕದ್ದಲ್ಲ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಕಾರ್ಯದರ್ಶಿ ಉಮಾದೇವಿ ಆದೇಶದಲ್ಲಿ ತಿಳಿಸಿದ್ದಾರೆ.
ಅಧಿಕಾರಿ ತಲೆದಂಡ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ನಿವೇಶನ ಹಂಚಿಕೆಯ ಅಕ್ರಮ ಆರೋಪ ಕುರಿತು ರಾಜಕೀಯ ಕೋಲಾಹಲಕ್ಕೆ ಕಾರಣವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿಗೆ ಬದಲಿ ನಿವೇಶನ ಹೆಸರಿನಲ್ಲಿ ವಿಜಯನಗರದಲ್ಲಿ 14 ನಿವೇಶನ ಪಡೆದಿರುವುದು ವಿವಾದಕ್ಕೆ ಕಾರಣವಾಗಿತ್ತು.
ಬಿಜೆಪಿ-ಜೆಡಿಎಸ್ ಪಕ್ಷಗಳು ಸದನದಲ್ಲಿ ಸಿಎಂ ವಿರುದ್ಧ ಹೋರಾಟ ನಡೆಸಿ ಅಹೋರಾತ್ರಿ ಧರಣಿ ಸಹ ನಡೆಸಿದ್ದವು. ಇದಕ್ಕೆ ಜಗ್ಗದಿದ್ದಾಗ ಬೆಂಗಳೂರು-ಮೈಸೂರಿನ ವರೆಗೆ ಪಾದಯಾತ್ರೆ ಮಾಡಿ ಸಿಎಂ ರಾಜೀನಾಮೆಗೆ ಆಗ್ರಹಿಸಿದ್ದವು. ಇದಕ್ಕೆ ಪ್ರತಿಯಾಗಿ ಕಾಂಗ್ರೆಸ್ ಜನಾಂದೋಲ ಕಾರ್ಯಕ್ರಮವನ್ನು ವಿವಿಧೆಡೆ ಆಯೋಜಿಸಿತ್ತು. ಬಳಿಕವೂ ಮುಡಾ ಸದ್ದು ಕಡಿಮೆ ಆಗಿರಲಿಲ್ಲ.
ನಿತ್ಯ ಒಂದಿಲ್ಲವೊಂದು ಆರೋಪ-ಪ್ರತ್ಯಾರೋಪಗಳು ರಿಂಗಣಿಸುತ್ತಿವೆ. ಈ ನಡುವೆ, ವಿವಾದಿತ ಕೆಎಎಸ್ ಅಧಿಕಾರಿ ದಿನೇಶ್‌ಕುಮಾರ ಅವರ ತಲೆದಂಡವಾಗಿದೆ.
ಕೋಲ್ಕತ್ತಾ: ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ವಿಧಿಸುವ ಮಸೂದೆ ಮಂಡಿಸಲಿದೆ ಮಮತಾ ಬ್ಯಾನರ್ಜಿ ಸರ್ಕಾರ