27ರಂದು ಮೊದಲ ಗಡಿನಾಡ ಉತ್ಸವ

Sul_Gadinada-Ustav
Published on

ಸುಳ್ಯ: ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಅ.27ರಂದು ಮೊದಲ ಗಡಿನಾಡ ಉತ್ಸವ ಬಂದಡ್ಕದಲ್ಲಿ ನಡೆಯಲಿದ್ದು ಇದರ ಆಮಂತ್ರಣ ಬಿಡುಗಡೆ ಸಮಾರಂಭ ಶುಕ್ರವಾರ ಸುಳ್ಯದ ಕನ್ನಡ ಭವನದಲ್ಲಿ ನಡೆಯಿತು.

ಅರೆಭಾಷೆ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ, ಹಿರಿಯ ಸಾಹಿತಿ ಕುತ್ಯಾಳ ನಾಗಪ್ಪ ಗೌಡರು ಆಮಂತ್ರಣ ಬಿಡುಗಡೆಗೊಳಿಸಿದರು.

ಬಳಿಕ ನಾಗಪ್ಪ ಗೌಡರನ್ನು ಅಕಾಡೆಮಿಯಿಂದ ಗೌರವಿಸಲಾಯಿತು. ಗೌಡರ ಯುವ ಸೇವಾ ಸಂಘದ ಅಧ್ಯಕ್ಷ ಪಿ.ಎಸ್.ಗಂಗಾಧರ್, ಬಂದಡ್ಕ ಗ್ರಾಮ ಗೌಡ ಸಮಿತಿ ಅಧ್ಯಕ್ಷ ವೆಂಕಟ್ರಮಣ ಕೊಯಿಂಗಾಜೆ, ಅಕಾಡೆಮಿ ನಿರ್ದೇಶಕರಾದ ಡಾ.ಎನ್.ಎ.ಜ್ಞಾನೇಶ್, ಚಂದ್ರಾವತಿ ಬಡ್ಡಡ್ಕ ಇದ್ದರು.

ಅರೆಭಾಷೆ ಅಕಾಡೆಮಿ ಸದಸ್ಯ ಚಂದ್ರಶೇಖರ ಪೇರಾಲು ಕಾರ್ಯಕ್ರಮ ನಿರ್ವಹಿಸಿದರು. ಅಕಾಡೆಮಿ ಸದಸ್ಯೆ ಲತಾ ಕುದ್ಪಾಜೆ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net