ಗುಂಡು ಎಸೆತ, ಚಕ್ರ ಎಸೆತದಲ್ಲಿ ಪ್ರಥಮ

kruthika
ಕೃತಿಕಾ
Published on

ಬೈಂದೂರು: ಮಾವಿನಕಟ್ಟೆಯ ಶ್ರೀ ಮೂಕಾಂಬಿಕಾ ದೇವಳ ಪ್ರೌಢಶಾಲೆಯಲ್ಲಿ ಇತ್ತೀಚೆಗೆ ಪ್ರಸಕ್ತ ಸಾಲಿನ ಬೈಂದೂರು ತಾಲೂಕು ಮಟ್ಟದ ಕ್ರೀಡಾಕೂಟದ ಗುಂಡು ಎಸೆತ ಮತ್ತು ಚಕ್ರ ಎಸೆತ ಸ್ಪರ್ಧೆಗಳಲ್ಲಿ ನಾವುಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ 7ನೇ ತರಗತಿ ವಿದ್ಯಾರ್ಥಿನಿ ಕೃತಿಕಾ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ಅಲ್ಲದೇ ಬೈಂದೂರು ಉತ್ಸವದ ಅಂಗವಾಗಿ ನಡೆದ ಕ್ರೀಡಾಕೂಟದ ಗುಂಡು ಎಸೆತ ಸ್ಪರ್ಧೆಯಲ್ಲೂ ಪ್ರಥಮ ಸ್ಥಾನ ಪಡೆದಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net