More

    ಮ್ಯಾರಥಾನ್‌ನಲ್ಲಿ ದರ್ಶನ್, ದೀಕ್ಷಾಗೆ ಪ್ರಥಮ ಸ್ಥಾನ

    ಶಿವಮೊಗ್ಗ: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಸುವರ್ಣ ಮಹೋತ್ಸವ ಅಂಗವಾಗಿ ಡ್ರಗ್ಸ್ ಮತ್ತು ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಜಿಲ್ಲಾ ಪೊಲೀಸ್ ಇಲಾಖೆಯಿಂದ ಭಾನುವಾರ ನಗರದಲ್ಲಿ ಕರ್ನಾಟಕ ಪೊಲೀಸ್ ರನ್-5ಕೆ ಮ್ಯಾರಥಾನ್ ನಡೆಯಿತು.

    ಎಸ್ಪಿ ಜಿ.ಕೆ.ಮಿಥುನ್‌ಕುಮಾರ್ ಮ್ಯಾರಥಾನ್‌ಗೆ ಚಾಲನೆ ನೀಡಿದರು. ಡಿಎಆರ್ ಪೊಲೀಸ್ ಕವಾಯತು ಮೈದಾನದಿಂದ ಆರಂಭವಾದ ಮ್ಯಾರಥಾನ್ ಅಶೋಕ ವೃತ್ತ, ಅಮೀರ್ ಅಹಮ್ಮದ್ ವೃತ್ತ, ಶಿವಪ್ಪ ನಾಯಕ ವೃತ್ತ, ಕರ್ನಾಟಕ ಸಂಘ, ಬಸವೇಶ್ವರ ವೃತ್ತ, ಮಹಾವೀರ ವೃತ್ತ, ಶಿವಮೂರ್ತಿ ವೃತ್ತ, ಜೈಲ್ ವೃತ್ತ, ಪ್ರವಾಸಿ ಮಂದಿರ ವೃತ್ತದ ಮಾರ್ಗವಾಗಿ ಡಿಎಆರ್ ಪೊಲೀಸ್ ಕವಾಯತು ಮೈದಾನಕ್ಕೆ ಮರಳಿತು.
    ಪುರುಷರ ವಿಭಾಗದಲ್ಲಿ ಶಿವಮೊಗ್ಗದ ಕ್ರೀಡಾ ಮತ್ತು ಯುವಜನ ಇಲಾಖೆ ವಿದ್ಯಾರ್ಥಿಗಳಾದ ದರ್ಶನ್ ಲಕ್ಕನವರ್ ಪ್ರಥಮ, ನಾಗರಾಜ್ ದಿವಾತೆ ದ್ವಿತೀಯ ಸ್ಥಾನ ಪಡೆದರು. ಮಹಿಳೆಯರ ವಿಭಾಗದಲ್ಲಿ ಎಚ್.ವಿ.ದೀಕ್ಷಾ ಪ್ರಥಮ, ಎಸ್.ಸಾನಿಕಾ ದ್ವಿತೀಯ ಸ್ಥಾನ ಪಡೆದರು.
    ಪ್ರಥಮ ಸ್ಥಾನ ವಿಜೇತರಿಗೆ ತಲಾ 10 ಸಾವಿರ ರೂ. ಹಾಗೂ ದ್ವಿತೀಯ ಸ್ಥಾನ ವಿಜೇತರಿಗೆ ತಲಾ 5 ಸಾವಿರ ರೂ. ನಗದು ಬಹುಮಾನ, ಪಾರಿತೋಷಕ ಮತ್ತು ಪ್ರಶಸ್ತಿ ಪತ್ರ ನೀಡಲಾಯಿತು. ಮ್ಯಾರಥಾನ್‌ನಲ್ಲಿ ಭಾಗವಹಿಸಿದ ಎಲ್ಲರಿಗೂ ಪ್ರಶಂಸನಾ ಪತ್ರ ಪ್ರದಾನ ಮಾಡಲಾಯಿತು.
    ಮ್ಯಾರಥಾನ್‌ನಲ್ಲಿ ಎಸ್ಪಿ ಜಿ.ಕೆ.ಮಿಥುನ್‌ಕುಮಾರ್, ಎಎಸ್ಪಿ ಅನಿಲ್ಕುಮಾರ್ ಭೂಮರಡ್ಡಿ, ಮಾಚೇನಹಳ್ಳಿ ಕೆಎಸ್‌ಆರ್‌ಪಿ 8ನೇ ಪಡೆಯ ಕಮಾಂಡೆಂಟ್ ಯುವಕುಮಾರ್, ಡಿವೈಎಸ್ಪಿಗಳಾದ ಬಾಬು ಆಂಜನಪ್ಪ, ಎಂ.ಸುರೇಶ್, ನಾಗರಾಜ್, ಗೋಪಾಲಕೃಷ್ಣ ಟಿ ನಾಯಕ್, ಕೆ.ಇ.ಕೇಶವ್, ಗಜಾನನ ವಾಮನ ಸುತಾರ ಮತ್ತು ಪ್ರಕಾಶ್, ಯುವಜನ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಮಂಜುನಾಥ ಸ್ವಾಮಿ ಇತರರಿದ್ದರು.
    ಪೊಲೀಸ್ ಪಥ ಸಂಚಲನ:
    ಶಿವಮೊಗ್ಗ: ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಭಾನುವಾರ ನಗರದಲ್ಲಿ ಪೊಲೀಸ್ ಪಥ ಸಂಚಲನ ನಡೆಯಿತು. ಜಯನಗರ ಠಾಣೆ ಇನ್‌ಸ್ಪೆಕ್ಟರ್ ಸಿದ್ದೇಗೌಡ, ಕೇಂದ್ರೀಯ ಮೀಸಲು ಪಡೆ ಇನ್‌ಸ್ಪೆಕ್ಟರ್‌ಗಳಾದ ಸಬಿತಾ, ಜ್ಯೋತಿ ಅವರ ನೇತೃತ್ವದಲ್ಲಿ ಪಥ ಸಂಚಲನ ನಡೆಯಿತು. ಎ.ಎ.ಕಾಲನಿಯಿಂದ ಆರಂಭಗೊಂಡ ಪಥ ಸಂಚಲನವು ಜಯನಗರ, ಬಸವನಗುಡಿ, ಟ್ಯಾಂಕ್ ಮೊಹಲ್ಲಾ, ಬಾಪೂಜಿನಗರದ ಮಾರ್ಗವಾಗಿ ಮೀನಾಕ್ಷಿ ಭವನದ ಹತ್ತಿರ ಮುಕ್ತಾಯಗೊಂಡಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts