More

    ಗ್ರಾಮಗಳ ಸಮಗ್ರ ಅಭಿವೃದ್ಧಿಗೆ ಮೊದಲ ಆದ್ಯತೆ

    ಆನಂದಪುರ: ಗ್ರಾಮೀಣ ಪ್ರದೇಶದ ಜನರು ಮೂಲ ಸೌಕರ್ಯಗಳಿಂದ ವಂಚಿತರಾಗಬಾರದು ಎಂದು ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಿ, ಹೆಚ್ಚಿನ ಅನುದಾನ ಒದಗಿಸಲಾಗುತ್ತಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದರು.

    ಶುಕ್ರವಾರ ಸಮೀಪದ ಉಳ್ಳೂರು ಗ್ರಾಪಂ ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು.
    ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿವಿಧ ಯೋಜನೆಯಡಿ ನಗರ ಪ್ರದೇಶದಲ್ಲಿ ಹೆಚ್ಚಿನ ಕಾಮಗಾರಿ ನಡೆಯುತ್ತಿರುತ್ತದೆ. ಗ್ರಾಮೀಣ ಪ್ರದೇಶದಲ್ಲಿ ಜನರ ಮನೆಗಳು ದೂರ ದೂರ ಇರುತ್ತವೆ. ಎಲ್ಲ ಕುಟುಂಬಗಳಿಗೂ ಅನುಕೂಲವಾಗುವಂತೆ ಕಾಮಗಾರಿ ವಿಸ್ತರಿಸುವುದು ಸವಾಲಾಗಿದೆ. ಹಳ್ಳಿಗಳ ಜನರ ಬದುಕು ಹಸನಾಗಿಸಲು ರಾಜ್ಯ ಸರ್ಕಾರ ವಿಶೇಷ ಗಮನ ಹರಿಸುತ್ತಿದೆ ಎಂದರು.
    ಕಲ್ಲುಕೊಪ್ಪ ಗ್ರಾಮ ಸಂಪರ್ಕ ರಸ್ತೆ ಡಾಂಬರೀಕರಣಕ್ಕೆ 40 ಲಕ್ಷ ರೂ., ಬನದಕೊಪ್ಪ ಗ್ರಾಮ ಸಂಪರ್ಕ ರಸ್ತೆ ನಿರ್ಮಾಣಕ್ಕೆ 30 ಲಕ್ಷ ರೂ., ಪುರ್ಲೆಮಕ್ಕಿ -ಮಂಚಾಲೆ-ಬೊಮ್ಮತ್ತಿ ಗ್ರಾಮ ಸಂಪರ್ಕ ರಸ್ತೆ ನಿರ್ಮಾಣಕ್ಕೆ 70 ಲಕ್ಷ ರೂ. ಮಂಜೂರಾಗಿದೆ. ಶೀಘ್ರದಲ್ಲಿ ಕಾಮಗಾರಿ ಆರಂಭಗೊಳ್ಳಲಿದೆ ಎಂದು ಹೇಳಿದರು.
    ಗ್ರಾಪಂ ಅಧ್ಯಕ್ಷೆ ಲೀಲಾವತಿ ಹರೀಂದ್ರಕುಮಾರ್, ಉಪಾಧ್ಯಕ್ಷ ಎಚ್.ಎಂ.ತಿರುಮಲೇಶ್, ಸದಸ್ಯರಾದ ಸಂತೋಷ್‌ಕುಮಾರ್, ಕೆ.ಸಿ.ದುಷ್ಯಂತ, ಸುರೇಶ, ಪಿಡಿಒ ಎಸ್.ಎ.ಕೃಷ್ಣಪ್ಪ, ಸಹಾಯಕ ಇಂಜನಿಯರ್ ತಿಪ್ಪೇಸ್ವಾಮಿ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts