More

    ಪ್ರಥಮ ಪಿಯುಸಿ ಪರೀಕ್ಷೆ ರದ್ದು, ಎಲ್ಲ ವಿದ್ಯಾರ್ಥಿಗಳು ಪಾಸ್!

    ಬೆಂಗಳೂರು: ಜು.16ರಿಂದ 27ರವರೆಗೆ ನಿಗಧಿಯಾಗಿದ್ದ ಪ್ರಥಮ ಪಿಯುಸಿ ಪೂರಕ(ಸಪ್ಲಿಮೆಂಟರಿ) ಪರೀಕ್ಷೆಯನ್ನು ಕೋವಿಡ್-19 ಹಿನ್ನೆಲೆಯಲ್ಲಿ ರದ್ದು ಪಡಿಸಲಾಗಿದೆ.

    ಈ ಬಗ್ಗೆ ಮಾಹಿತಿ ನೀಡಿರುವ ಸಚಿವ ಎಸ್. ಸುರೇಶ್ ಕುಮಾರ್, ಸುಮಾರು 60 ಸಾವಿರ ವಿದ್ಯಾರ್ಥಿಗಳು ಪ್ರಥಮ ಪಿಯು ಪೂರಕ ಪರೀಕ್ಷೆ ಬರೆಯಬೇಕಿತ್ತು. ಕಾಲೇಜು ಹಂತದಲ್ಲಿ ಪರೀಕ್ಷೆಗಳನ್ನು ನಿರ್ವಹಿಸಿ ಜು. 30ರಂದು ಫಲಿತಾಂಶ ಪ್ರಕಟಿಸಲು ಈ ಹಿಂದೆ ನಿರ್ಧರಿಸಲಾಗಿತ್ತು. ಇದೀಗ ಕೋವಿಡ್ ಸೋಂಕಿನ ಪ್ರಕರಣಗಳು ಹೆಚ್ಚುತ್ತಿವೆ. ಹಾಗಾಗಿ ವಾರ್ಷಿಕ ಪರೀಕ್ಷೆಯಲ್ಲಿ ಎಲ್ಲ ವಿಷಯಗಳ ಪರೀಕ್ಷೆ ಬರೆದು ಅನುತ್ತೀರ್ಣಗೊಂಡ ವಿದ್ಯಾರ್ಥಿಗಳನ್ನು ಪರೀಕ್ಷೆ ನಡೆಸದೆ ದ್ವಿತೀಯ ಪಿಯುಸಿಗೆ ತೇರ್ಗಡೆ ಮಾಡಲಾಗುವುದು ಎಂದು ವಿವರಿಸಿದ್ದಾರೆ. ಇದನ್ನೂ ಓದಿರಿ ಕ್ವಾರಂಟೈನ್ ಅಂದ್ರೆ ಹೀಗಿರಬೇಕು… ರಜೆಗೆ ಬಂದ ಸೈನಿಕರು ಹೊಲದಲ್ಲೇ ಏಕಾಂತ ವಾಸ

    ಪರೀಕ್ಷೆಯಲ್ಲಿ ಉತ್ತೀರ್ಣತೆ ಪಡೆಯಲು ಅವಶ್ಯಕತೆಯಿರುವ ಕನಿಷ್ಠ ಅಂಕಗಳನ್ನು ಕಾಲೇಜು ಹಂತದಲ್ಲಿಯೇ ನೀಡಲಾಗುವುದು. ಹಾಜರಾತಿ ಕೊರತೆಯಿಲ್ಲದ, ಅನಿವಾರ್ಯ ಸಂದರ್ಭದಲ್ಲಿ ಪರೀಕ್ಷೆಗೆ ಗೈರುಹಾಜರಾದ ವಿದ್ಯಾರ್ಥಿಗಳಿಗೆ ಮುಂದಿನ ತರಗತಿಗಳು ಪ್ರಾರಂಭವಾದ ಬಳಿಕ ದ್ವಿತೀಯ ಪಿಯುಸಿಯ ಪ್ರಥಮ ಕಿರುಪರೀಕ್ಷೆಗೂ ಪೂರ್ವದಲ್ಲಿ ಪ್ರಥಮ ಪಿಯುಸಿಯಲ್ಲಿ ಅನುತ್ತೀರ್ಣವಾದ ವಿಷಯಗಳಿಗೆ ಮತ್ತೊಮ್ಮೆ ಕಾಲೇಜು ಹಂತದಲ್ಲಿ ಕಿರುಪರೀಕ್ಷೆ ನಡೆಸಲಾಗುತ್ತದೆ. ಆ ಮೂಲಕ ಅವರ ಕಲಿಕೆಯ ಮಟ್ಟವನ್ನು ಮೌಲ್ಯಮಾಪನ ಮಾಡಲಾಗುವುದು ಎಂದು ಸಚಿವ ಸುರೇಶ್​ ಕುಮಾರ್​ ಹೇಳಿದ್ದಾರೆ.

    ಹಾಜರಾತಿ ಕೊರತೆಯಿಂದ ವಾರ್ಷಿಕ ಪರೀಕ್ಷೆಗೆ ಹಾಜರಾಗಲು ಅನುಮತಿ ಪಡೆಯದ ವಿದ್ಯಾರ್ಥಿಗಳು ಮಾತ್ರ ಅನುತ್ತೀರ್ಣಗೊಳ್ಳುವರು ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.

    ದ್ವಿತೀಯ ಪಿಯುಸಿ ಫಲಿತಾಂಶ ನಾಳೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts