More

  ವಿಶ್ವಕಪ್​ನಲ್ಲಿ ಮತ್ತೊಂದು ಐತಿಹಾಸಿಕ ದಾಖಲೆ ಬರೆದ ವಿರಾಟ್​ ಕೊಹ್ಲಿ

  ಅಂಟಿಗುವಾ: ಇಲ್ಲಿನ ಸರ್​ ವಿವಿಯನ್​ ರಿಚರ್ಡ್ಸ್​​ ಕ್ರೀಡಾಂಗಣದಲ್ಲಿ ನಡೆದ ಟಿ20 ವಿಶ್ವಕಪ್​ನ ಸೂಪರ್​ 08 ಪಂದ್ಯದಲ್ಲಿ ಆಲ್ರೌಂಡ್​ ಪ್ರದರ್ಶನದ ಫಲವಾಗಿ ಟೀಮ್​ ಇಂಡಿಯಾ ಬಾಂಗ್ಲಾದೇಶ ವಿರುದ್ಧ ಗೆದ್ದು ಬೀಗಿದ್ದು, ಸೆಮಿಫೈನಲ್​ಗೇರುವಲ್ಲಿ ಯಶಸ್ವಿಯಾಗಿದೆ. ಇನ್ನೂ ಬಾಂಗ್ಲಾದೇಶ ವಿರುದ್ಧದ ಟಿ20 ವಿಶ್ವಕಪ್​ ಪಂದ್ಯದಲ್ಲಿ ವಿರಾಟ್​ ಕೊಹ್ಲಿ ಐತಿಹಾಸಿಕ ಸಾಧನೆ ಒಂದನ್ನು ಮಾಡಿದ್ದು, ವಿಶೇಷ ಸಾಧನೆಯನ್ನು ತಮ್ಮ ತೆಕ್ಕೆಗೆ ಹಾಕಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

  ಟಾಸ್​ ಸೋತು ಮೊದಲು ಬ್ಯಾಟಿಂಗ್​ ಮಾಡಿದ ಭಾರತ ತಂಡದ ಪರ ಹಾರ್ದಿಕ್​ ಪಾಂಡ್ಯ (50 ರನ್, 27 ಎಸೆತ, 4 ಬೌಂಡರಿ, 3 ಸಿಕ್ಸರ್​), ವಿರಾಟ್​ ಕೊಹ್ಲಿ (37 ರನ್, 28 ಎಸೆತ, 1 ಬೌಂಡರಿ, 3 ಸಿಕ್ಸರ್) ಬಿರುಸಿನ ಬ್ಯಾಟಿಂಗ್​ ಫಲವಾಗಿ ನಿಗದಿತ 20 ಓವರ್​ಗಳಲ್ಲಿ 5 ವಿಕೆಟ್​ ನಷ್ಟಕ್ಕೆ 196 ರನ್​ ಗಳಿಸಿತ್ತು. ಬೃಹತ್​ ಮೊತ್ತವನ್ನು ಬೆನ್ನತ್ತಿದ ಬಾಂಗ್ಲಾದೇಶವನ್ನು ಇನ್ನಿಲ್ಲದಂತೆ ಕಾಡಿದ ಭಾರತದ ಬೌಲರ್​ಗಳು ಎದುರಾಳಿ ತಂಡವನ್ನು 146 ರನ್​ಗಳಿಗೆ ಕಟ್ಟಿ ಹಾಕುವಲ್ಲಿ ಯಶಸ್ವಿಯಾದರು. 50 ರನ್​ಗಳ ಭರ್ಜರಿ ಜಯ ಸಾಧಿಸಿದ ಟೀಮ್​ ಇಂಡಿಯಾ ಯಶಸ್ವಿಯಾಗಿ ಸೆಮಿಫೈನಲ್​ ಪ್ರವೇಶಿಸಿದೆ.

  ವಿರಾಟ್​ ಕೊಹ್ಲಿ ತಮ್ಮ ವೃತ್ತಿ ಜೀವನದಲ್ಲಿ ಒಂದರ ಹಿಂದೆ ಒಂದರಂತೆ ಹಲವು ದಾಖಲೆಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ 37 ರನ್​ ಸಿಡಿಸುವ ಮೂಲಕ  ಟಿ20 ಮತ್ತು ಏಕದಿನ ವಿಶ್ವಕಪ್‌ನಲ್ಲಿ 3000 ರನ್‌ಗಳ ಗಡಿ ದಾಟಿದ ವಿಶ್ವದ ಮೊದಲ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ವಿರಾಟ್​ ಕೊಹ್ಲಿ ಪಾತ್ರರಾಗಿದ್ದಾರೆ. ಈ ಐತಿಹಾಸಿಕ ದಾಖಲೆಯನ್ನು ಮುಟ್ಟಲು ಕೊಹ್ಲಿಗೆ 35 ರನ್‌ಗಳ ಅಗತ್ಯವಿತ್ತು. ಇಂದಿನ ಪಂದ್ಯದಲ್ಲಿ 37 ರನ್ ಬಾರಿಸಿದ ತಕ್ಷಣ ಕೊಹ್ಲಿ ಇತಿಹಾಸ ನಿರ್ಮಿಸಿದರು.

  Virat Kohli

  ಇದನ್ನೂ ಓದಿ: ಆ ಒಂದು ಪಂದ್ಯವನ್ನು ನೆನೆಸಿಕೊಂಡರೆ ಈಗಲೂ ನನ್ನ ಮೈ ನಡುಗುತ್ತೆ; ರಶೀದ್​ ಖಾನ್​ರನ್ನು​ ಭಯಬೀಳಿಸಿದ ಆ ದೇಶ ಯಾವುದು ಗೊತ್ತಾ?

  See also  ಮೀಸಲಾತಿ ನಾರಿಗೆ ಶಕ್ತಿ; ವಿಜಯವಾಣಿ ಸಂವಾದದಲ್ಲಿ ಸಾಧಕಿಯರ ಒಕ್ಕೊರಲ ಆಗ್ರಹ

  ಐಸಿಸಿ ನಡೆಸುವ ಸೀಮಿತ ಓವರ್​ಗಳ ವಿಶ್ವಕಪ್​ ಸರಣಿಯಲ್ಲಿ 3000 ರನ್​ ಗಳಿಸಿದ ಮೊದಲ ಬ್ಯಾಟ್ಸ್​ಮನ್​ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದು, ವಿರಾಟ್​ ನಂತರ ರೋಹಿತ್​ ಶರ್ಮಾ (2637 ರನ್) ನಂತರದ ಸ್ಥಾನದಲ್ಲಿದ್ದಾರೆ. ಆಸ್ಟ್ರೇಲಿಯದ ಬ್ಯಾಟ್ಸ್‌ಮನ್ ಡೇವಿಡ್ ವಾರ್ನರ್ (2502 ರನ್) ಬಾರಿಸುವ ಮೂಲಕ ಮೂರನೇ ಸ್ಥಾನದಲ್ಲಿದ್ದು, ಟೀಮ್​ ಇಂಡಿಯಾದ ಲೆಜಂಡರಿ ಆಟಗಾರ ಸಚಿನ್ ತೆಂಡೂಲ್ಕರ್ (2278 ರನ್) ನಾಲ್ಕನೇ ಸ್ಥಾನದಲ್ಲಿದ್ದಾರೆ. ಶ್ರೀಲಂಕಾದ ಮಾಜಿ ಆಟಗಾರ ಕುಮಾರ್​ ಸ ಂಗಕ್ಕರ (2193) ಐದನೇ ಸ್ಥಾನದಲ್ಲಿದ್ದಾರೆ.

  ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ವಿರಾಟ್​ ಕೊಹ್ಲಿ, ಟಿ20 ವಿಶ್ವಕಪ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಟಿ-20 ವಿಶ್ವಕಪ್​ನಲ್ಲಿ ಇಲ್ಲಿಯವರೆಗೂ 32 ಪಂದ್ಯಗಳನ್ನು ಆಡಿರುವ ವಿರಾಟ್​ ಕೊಹ್ಲಿ 14 ಅರ್ಧಶತಕ ಒಳಗೊಂಡಂತೆ 1207 ರನ್ ಗಳಿಸಿದ್ದಾರೆ. ಏಕದಿನ ವಿಶ್ವಕಪ್​ನಲ್ಲಿ 37 ಪಂದ್ಯಗಳನ್ನು ಆಡಿರುವ ವಿರಾಟ್​ ಐದು ಶತಕ, 12 ಅರ್ಧಶತಕ ಒಳಗೊಂಡಂತೆ 1795 ರನ್​ ಗಳಿಸಿದ್ದಾರೆ.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts