More

    ಸಾಗರ ರೋಟರಿಗೆ ಮೊದಲ ಮಹಿಳಾ ಅಧ್ಯಕ್ಷೆ

    ಸಾಗರ: ರೋಟರಿ ಸಂಸ್ಥೆ ಮೂಲಕ ಆರೋಗ್ಯಕರ ಸಮಾಜ ನಿರ್ಮಾಣ ಸಾಧ್ಯವಿದೆ. ಗ್ರಾಮೀಣ ಹಾಗೂ ನಗರ ಪ್ರದೇಶದಲ್ಲಿ ರೋಟರಿ ಸಂಸ್ಥೆ ಜನಸೇವಾ ಕಾರ್ಯದಲ್ಲಿ ಹೆಚ್ಚು ಸಕ್ರಿಯವಾಗಿದೆ ಎಂದು ಸಾಗರ ರೋಟರಿ ಕ್ಲಬ್ ನೂತನ ಅಧ್ಯಕ್ಷೆ ಡಾ. ರಾಜನಂದಿನಿ ಕಾಗೋಡು ತಿಳಿಸಿದರು.
    ನಗರದಲ್ಲಿ ಮಂಗಳವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 2023-24ನೇ ಸಾಲಿನ ರೋಟರಿ ಸಂಸ್ಥೆ ಅಧ್ಯಕ್ಷರಾಗಿ ಪದವಿ ಸ್ವೀಕರಿಸಿ ಮಾತನಾಡಿ, ಪರಿಸರ ರಕ್ಷಣೆ, ಸಮೂಹದ ಹಿತಚಿಂತನೆ, ಆರೋಗ್ಯ ಶಿಬಿರ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಎಲ್ಲರ ಸಹಕಾರದೊಂದಿಗೆ ಪ್ರಸ್ತುತ ಸಾಲಿನಲ್ಲಿ ಮಾಡಲಾಗುತ್ತದೆ ಎಂದು ತಿಳಿಸಿದರು.
    ಸಾಗರದಲ್ಲಿ ರೋಟರಿ ಸಂಸ್ಥೆ 1959ರಲ್ಲಿ ಪ್ರಾರಂಭಗೊಂಡಿತು. ಅಂದಿನಿಂದ ಇಂದಿನವರೆಗೆ ಮಹಿಳಾ ಅಧ್ಯಕ್ಷರು ರೋಟರಿ ಸಂಸ್ಥೆಗೆ ಆಯ್ಕೆಯಾಗಿರಲಿಲ್ಲ. ಮೊದಲ ಬಾರಿಗೆ ಮಹಿಳಾ ಅಧ್ಯಕ್ಷೆಯಾಗಿ ಆಯ್ಕೆಯಾಗಿರುವುದು ಸಂತೋಷ ತಂದಿದೆ. ಎಲ್ಲರ ಸಹಕಾರದೊಂದಿಗೆ ಸಾಗರ ರೋಟರಿ ಸಂಸ್ಥೆಯನ್ನು ಮಾದರಿಯಾಗಿ ರೂಪಿಸುತ್ತೇನೆ ಎಂದರು.
    ಮಾಜಿ ಅಧ್ಯಕ್ಷ ಬಿ.ಸಿ.ಆದಿತ್ಯ ಮಾತನಾಡಿ, ಕಳೆದ ಒಂದು ವರ್ಷದಲ್ಲಿ ರೋಟರಿ ಸಂಸ್ಥೆ ಉತ್ತಮವಾಗಿ ಕೆಲಸ ಮಾಡಿದೆ. ಜನರು ರೋಟರಿ ಸಂಸ್ಥೆಯ ಕಾರ್ಯಕ್ಕೆ ಉತ್ತಮವಾಗಿ ಸ್ಪಂದಿಸಿದ್ದಾರೆ. ಇನ್ನರ್‌ವೀಲ್ಹ್ ಕ್ಲಬ್ ಸಹಕಾರದೊಂದಿಗೆ 14 ಜನ ಬಡ ಮಹಿಳೆಯರಿಗೆ ಹೊಲಿಗೆ ಯಂತ್ರ ವಿತರಿಸಲಾಗಿದೆ ಎಂದರು. ರೋಟರಿ ಸಂಸ್ಥೆಯ ಜಿಲ್ಲಾ ನಿಯೋಜಿತ ಗರ್ವನರ್ ಸಿ.ಎ.ದೇವ್ ಆನಂದ್ ಪದವಿ ಪ್ರದಾನ ಮಾಡಿದರು. ಮಾಜಿ ಸಚಿವ ಕಾಗೋಡು ತಿಮ್ಮಪ್ಪ ನೂತನ ಪದಾಧಿಕಾರಿಗಳಿಗೆ ಶುಭ ಕೋರಿದರು. ರವಿ ಕೋಟೋಜಿ, ಮಹೇಶ್ ಅಂಕದ್, ಎ.ಎಸ್.ಜಗದೀಶ್, ರಾಜೀವ್, ಖುಷಿ, ಜಿ.ಎಸ್.ವೆಂಕಟೇಶ್, ಬಿ.ಎನ್.ರಾಜೀವ್, ಡಾ. ನಿರಂಜನ ಹೆಗಡೆ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts